GT vs KKR: ಸುದರ್ಶನ, ವಿಜಯ್ ಶಂಕರ್ ಅರ್ಧ ಶತಕದ ಅಬ್ಬರ : ಕೆಕೆಆರ್‌ಗೆ ಬೃಹತ್ ಸವಾಲು
ಗುಜರಾತ್ ಜೈಂಟ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಆರಂಭದಲ್ಲಿ ಬ್ಯಾಟಿಂಗ್ ನಡೆಸಿದ ಜಿಟಿ ತಂಡ ಬೃಹತ್ ಮೊತ್ತವನ್ನು ಪೇರಿಸಿದೆ. ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿದ ಜಿಟಿ ಪಡೆ ಪರವಾಗಿ ಸಾಯಿ ಸುದರ್ಶನ್ ಹಾಗೂ ವಿಜಯ್ ಶಂಕರ್ ಅಮೋಘ ಪ್ರದರ್ಶನ ನೀಡಿದ್ದು ಬೃಹತ್ ಮೊತ್ತಕ್ಕೆ ಕಾರಣವಾಗಿದ್ದಾರೆ.
ಆರಂಬಿಕ ಆಟಗಾರ ವೃದ್ಧಿಮಾನ್ ಸಹಾ 17 ರನ್‌ಗಳಿಸಿ ವಿಕೆಟ್ ಕಳೆದುಕೊಂಡ ಬಳಿಕ ಬ್ಯಾಟಿಂಗ್‌ಗೆ ಸಾಯಿ ಸುದರ್ಶನ ಮತ್ತೊಮ್ಮೆ ಜವಾಬ್ಧಾರಿಯುತ ಪ್ರದರ್ಶನ ನಿಡಿ ಗಮನಸೆಳೆದಿದ್ದಾರೆ. ಈ ಮೂಲಕ ಸತತ ಎರಡೇ ಅರ್ಧ ಶತಕ ಸಿಡಿಸಿದರು. 38 ಎಸೆತಗಳನ್ನು ಎದುರಿಸಿದ ಸಾಯಿ ಸುದರ್ಶನ 53 ರನ್‌ಗಳಿಸಿ ಮಿಂಚಿದರು. ಇವರಿಗೆ ಉತ್ತಮವಾಗಿ ಸಾಥ್ ನೀಡಿದ ಶುಬ್ಮನ್ ಗಿಲ್ 39 ರನ್‌ಗಳಿಸಿದರು. ಇನ್ನು ಅಭಿನಮ್ ಮನೋಹರ್ 14 ರನ್‌ಗಳಿಗೆ ಔಟಾದ ಕ್ರೀಸ್‌ಗೆ ಇಳಿದ ವಿಜಯ್ ಶಂಕರ್ ರೌದ್ರಾವತಾರ ತೋರಿದರು.

ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ವಿಜಯ್ ಶಂಕರ್ ಕೇವಲ 24 ಎಸೆತಗಳಲ್ಲಿ 63 ರನ್ ಬಾರಿಸಿ ಅಬ್ಬರಿಸಿದ್ದಾರೆ. ನಾಲ್ಕು ಬೌಂಡರಿ ಹಾಗೂ ಐದು ಸಿಕ್ಸರ್ ಬಾರಿಸಿದ ವಿಜತ್ ಶಂಕರ್ ತಂಡದ ಮೊತ್ತ ಇನ್ನೂರರ ಗಡಿ ದಾಟಲು ಕಾರಣವಾದರು. 262.50 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿದ ವಿಜಯ್ ಅಜೃಯವಾಗುಳಿದಿದ್ದಾರೆ. ಈ ಭರ್ಜರಿ ಪ್ರದರ್ಶನದ ಕಾರಣದಿಂದಾಗಿ ಗುಜರಾತ್ ಟೈಟನ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 204 ರನ್‌ಗಳಿಸಿದೆ.
ಇನ್ನು ಕೊಲ್ಕತ್ತಾ ನೈಟ್ ರೈಡರ್ಸ್ ಪರವಾಗಿ ಈ ಪಂದ್ಯದಲ್ಲಿ ಸುನಿಲ್ ನರೈನ್ ಮಿಂಚಿದ್ದು 3 ವಿಕೆಟ್ ಸಂಪಾದಿಸಿದರು. ಮತ್ತೊಂದು ವಿಕೆಟ್ ಸುಯಶ್ ಶರ್ಮಾ ಪಾಲಾಗಿದೆ.
ಕೋಲ್ಕತ್ತಾ ನೈಟ್ ರೈಡರ್ಸ್ ಆಡುವ ಬಳಗ: ರಹಮಾನುಲ್ಲಾ ಗುರ್ಬಾಜ್(ವಿಕೆಟ್ ಕೀಪರ್), ಎನ್ ಜಗದೀಸನ್, ನಿತೀಶ್ ರಾಣಾ(ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ಸುಯಶ್ ಶರ್ಮಾ, ಲಾಕಿ ಫರ್ಗುಸನ್, ಉಮೇಶ್ ಯಾದವ್, ವರುಣ್ ಚಕ್ರವರ್ತಿ
ಗುಜರಾತ್ ಟೈಟನ್ಸ್ ಆಡುವ ಬಳಗ: ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಶುಬ್ಮನ್ ಗಿಲ್, ಸಾಯಿ ಸುದರ್ಶನ್, ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ಅಭಿನವ್ ಮನೋಹರ್, ರಶೀದ್ ಖಾನ್(ನಾಯಕ), ಮೊಹಮ್ಮದ್ ಶಮಿ, ಅಲ್ಜಾರಿ ಜೋಸೆಫ್, ಯಶ್ ದಯಾಳ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications