
ಐಪಿಎಲ್ 16ನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ನಡೆಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರವಾಗಿ ಋತುರಾಜ್ ಗಾಯಕ್ವಾಡ್ ಸ್ಪೋಟಕ ಪ್ರದರ್ಶನ ನೀಡಿ ಮಿಂಚಿದ್ದಾರೆ. ಸಿಎಸ್‌ಕ ಪರವಾಗಿ ಋತುರಾಜ್ ಏಕಾಂಗಿ ಹೋರಾಟ ನಡೆಸಿದ್ದು ಅಬ್ಬರದ ಪ್ರದರ್ಶನ ನೀಡಿದ್ದಾರೆ.
ಋತುರಾಜ್ ಗಾಯಕ್ವಾಡ್ ಅವರ ಈ ಅದ್ಭುತ ಪ್ರದರ್ಶನದಿಂದಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 178 ರನ್ ಗಳಿಸಿದೆ. ಋತು 50 ಎಸೆತಗಳಲ್ಲಿ 92 ರನ್‌ಗಳಿಸಿ ಶತಕದ ಅಂಚಿನಲ್ಲಿ ಎಡವಿದರು. ಉಳಿದಂತೆ ಮೊಯೀನ್ ಅಲಿ ಅವರ 23 ರನ್ ಸಿಎಸ್‌ಕೆ ಪರ ದಾಖಲಾದ ಅತಿ ಹೆಚ್ಚಿನ ಸ್ಕೋರ್ ಎನಿಸಿದೆ.
ಅಂತಿಮ ಓವರ್‌ನಲ್ಲಿ ಅಬ್ಬರಿಸಿದ ಧೋನಿ: ಇನ್ನು ಈ ಪಂದ್ಯದಲ್ಲಿ ಎಂಎಸ್ ಧೋನಿ ಬ್ಯಾಟಿಂಗ್ ವೀಕ್ಷಿಸಲು ಸಾವಿರಾರು ಅಭಿಮಾನಿಗಳು ಮೈದಾನದಲ್ಲಿ ನೆರೆದಿದ್ದರು ಈ ಅಭಿಮಾನಿಗಳಿಗೆ ಮಾಹಿ ನಿರತಾಸೆಯನ್ನುಂಟು ಮಾಡಲಿಲ್ಲ. ಅಂತಿಮ ಹಂತದಲ್ಲಿ ಬ್ಯಾಟಿಂಗ್‌ಗೆ ಇಳಿದ ಮಾಹಿ ಕೊನೆಯ ಓವರ್‌ನಲ್ಲಿ ಅಬ್ಬರಿಸಿದರು. ಒಂದು ಭರ್ಜಸಿ ಸಿಕ್ಸರ್ ಹಾಗೂ ಒಂದು ಬೌಂಡರಿ ಸಿಡಿಸಿದ ಧೋನಿ 7 ಎಸೆತಗಳಲ್ಲಿ 14 ರನ್‌ಗಳನ್ನು ಗಳಿಸಿದರು. ಈ ಮೂಲಕ ತಂಡದ ಮೊತ್ತ 180ರ ಸನಿಹಕ್ಕೆ ತಲುಪಿಸಿದರು.
ಇನ್ನು ಈ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಪರವಾಗಿ ಬೌಲಿಂಗ್‌ನಲ್ಲಿ ಅಬ್ಬರಿಸಿದ್ದು ಮೊಹಮ್ಮದ್ ಶಮಿ, ರಶೀದ್ ಖಾನ್ ಹಾಗೂ ಅಲ್ಜಾರಿ ಜೋಸೆಫ್. ಈ ಮೂವರು ಕೂಡ ತಲಾ ಎರಡು ವಿಕೆಟ್ ಪಡೆದು ಮಿಂಚಿದ್ದಾರೆ. ಅದರಲ್ಲೂ ಮೊಹಮ್ಮದ್ ಶಮಿ ಹಾಗೂ ರಶೀದ್ ಖಾನ್ ರನ್ ನಿಯಂತ್ರಣದಲ್ಲಿಯೂ ಅದ್ಭುತ ಯಶಸ್ಸು ಸಾಧಿಸಿದರು. ಇನ್ನು ಒಂದು ವಿಕೆಟ್ ಜೋಶುವಾ ಲಿಟಲ್ ಪಾಲಾಗಿದೆ.
ಗುಜರಾತ್ ಟೈಟನ್ಸ್ ಆಡುವ ಬಳಗ: ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಶುಬ್ಮನ್ ಗಿಲ್, ಕೇನ್ ವಿಲಿಯಮ್ಸನ್, ಹಾರ್ದಿಕ್ ಪಾಂಡ್ಯ(ನಾಯಕ), ವಿಜಯ್ ಶಂಕರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೊಹಮ್ಮದ್ ಶಮಿ, ಜೋಶುವಾ ಲಿಟಲ್, ಯಶ್ ದಯಾಲ್, ಅಲ್ಜಾರಿ ಜೋಸೆಫ್
ಸಬ್ಸ್ಟಿಟ್ಯೂಟ್ಸ್: ಬಿ ಸಾಯಿ ಸುದರ್ಶನ್, ಜಯಂತ್ ಯಾದವ್, ಮೋಹಿತ್ ಶರ್ಮಾ, ಅಭಿನವ್ ಮನೋಹರ್, ಕೆಎಸ್ ಭರತ್
ಚೆನ್ನೈ ಸೂಪರ್ ಕಿಂಗ್ಸ್ ಆಡುವ ಬಳಗ: ಡೆವೊನ್ ಕಾನ್ವೆ, ಋತುರಾಜ್ ಗಾಯಕ್ವಾಡ್, ಮೊಯಿನ್ ಅಲಿ, ಬೆನ್ ಸ್ಟೋಕ್ಸ್, ಅಂಬಾಟಿ ರಾಯುಡು, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ(ವಿಕೆಟ್ ಕೀಪರ್/ನಾಯಕ), ಮಿಚೆಲ್ ಸ್ಯಾಂಟ್ನರ್, ದೀಪಕ್ ಚಾಹರ್, ರಾಜವರ್ಧನ್ ಹಂಗರ್ಗೇಕರ್
ಸಬ್ಸ್ಟಿಟ್ಯೂಟ್ಸ್: ತುಷಾರ್ ದೇಶಪಾಂಡೆ, ಸುಭ್ರಾಂಶು ಸೇನಾಪತಿ, ಶೇಕ್ ರಶೀದ್, ಅಜಿಂಕ್ಯ ರಹಾನೆ, ನಿಶಾಂತ್ ಸಿಂಧು