Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

LSG vs DC: ಲಕ್ನೋಗೆ ಡೆಲ್ಲಿ ಕ್ಯಾಪಿಟಲ್ಸ್ ಸವಾಲು: ಟಾಸ್ ರಿಪೋರ್ಟ್, ಪ್ಲೇಯಿಂಗ್ XI, ಲೈವ್ ಸ್ಕೋರ್

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಇಂದು ಡಬಲ್ ಹೆಡ್ಡರ್ ಪಂದ್ಯಗಳು ನಡೆಯುತ್ತಿದೆ. ಈ ದಿನದ ಎರಡನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ ತಮಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಕೆಎಲ್ ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.

ಇಂದಿನ ಈ ಪಂದ್ಯ 16ನೇ ಆವೃತ್ತಿಯಲ್ಲಿ ಎರಡು ತಂಡಗಳಿಗೂ ಪ್ರಥಮ ಪಂದ್ಯವಾಗಿದೆ. ಹೀಗಾಗಿ ಮೊದಲ ಪಂದ್ಯವನ್ನು ಗೆದ್ದು ಆತ್ಮ ವಿಶ್ವಾಸದೊಂದಿಗೆ ಟೂರ್ನಿಯಲ್ಲಿ ಶುಭಾರಂಭ ಮಾಡಲು ಎರಡು ತಂಡಗಳು ಕೂಡ ಸರ್ವ ಪ್ರಯತ್ನ ನಡೆಸಲಿದೆ. ಕಳೆದ ಆವೃತ್ತಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಅದ್ಭುತ ಪ್ರದರ್ಶನ ನೀಡಿ ಪ್ಲೇಆಫ್ ಹಂತಕ್ಕೆ ಪ್ರವೇಶ ಪಡೆದುಕೊಂಡಿತ್ತು. ಈ ಬಾರಿಯೂ ಅಂಥಾದ್ದೇ ಪ್ರದರ್ಶನದ ವಿಶ್ವಾಸದಲ್ಲಿದೆ ಕೆಎಲ್ ರಾಹುಲ್ ಪಡೆ.

IPL 2023, 3rd Match LSG vs DC toss reports and playing XI details

ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ ನೂತನ ನಾಯಕತ್ವದಲ್ಲಿ ಈ ಬಾರಿ ಕಣಕ್ಕಿಳಿಯುತ್ತಿದೆ. ರಿಷಭ್ ಪಂತ್ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಕಾರಣ ಈ ಬಾರಿಯ ಸಂಪೂರ್ಣ ಆವೃತ್ತಿಯಿಂದ ಅವರು ಹೊರಗುಳಿಯಲಿದ್ದಾರೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಅನುಭವಿ ಆಟಗಾರ ಡೇವಿಡ್ ವಾರ್ನರ್ ನಾಯಕನಾಗಿ ಮುನ್ನಡೆಸುತ್ತಿದ್ದಾರೆ

ಲೈವ್ ಸ್ಕೋರ್ ಹೀಗಿದೆ

1
57057

ಲಕ್ನೋ ಸೂಪರ್ ಜೈಂಟ್ಸ್ ಆಡುವ ಬಳಗ: ಕೆಎಲ್ ರಾಹುಲ್ (ನಾಯಕ), ಕೈಲ್ ಮೇಯರ್ಸ್, ಮಾರ್ಕಸ್ ಸ್ಟೊಯಿನಿಸ್, ದೀಪಕ್ ಹೂಡಾ, ಕೃನಾಲ್ ಪಾಂಡ್ಯ, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಆಯುಷ್ ಬಡೋನಿ, ಮಾರ್ಕ್ ವುಡ್, ಜಯದೇವ್ ಉನದ್ಕತ್, ರವಿ ಬಿಷ್ಣೋಯ್, ಅವೇಶ್ ಖಾನ್
ಬೆಂಚ್: ಪ್ರೇರಕ್ ಮಂಕಡ್, ಕೃಷ್ಣಪ್ಪ ಗೌತಮ್, ಸ್ವಪ್ನಿಲ್ ಸಿಂಗ್, ನವೀನ್-ಉಲ್-ಹಕ್, ಯಶ್ ಠಾಕೂರ್, ಡೇನಿಯಲ್ ಸಾಮ್ಸ್, ರೊಮಾರಿಯೋ ಶೆಫರ್ಡ್, ಯುದ್ವೀರ್ ಸಿಂಗ್ ಚರಕ್, ಕರಣ್ ಶರ್ಮಾ, ಮಯಾಂಕ್ ಯಾದವ್, ಅಮಿತ್ ಮಿಶ್ರಾ, ಮನನ್ ವೋಹ್ರಾ

ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಡೇವಿಡ್ ವಾರ್ನರ್ (ನಾಯಕ), ಪೃಥ್ವಿ ಶಾ, ಮಿಚೆಲ್ ಮಾರ್ಷ್, ರಿಲೀ ರೊಸೊವ್, ಸರ್ಫರಾಜ್ ಖಾನ್ (ವಿಕೆಟ್ ಕೀಪರ್), ರೋವ್ಮನ್ ಪೊವೆಲ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಚೇತನ್ ಸಕರಿಯಾ, ಖಲೀಲ್ ಅಹ್ಮದ್, ಮುಖೇಶ್ ಕುಮಾರ್
ಬೆಂಚ್: ಫಿಲಿಪ್ ಸಾಲ್ಟ್, ಅಮನ್ ಹಕೀಮ್ ಖಾನ್, ಇಶಾಂತ್ ಶರ್ಮಾ, ಮನೀಶ್ ಪಾಂಡೆ, ಪ್ರವೀಣ್ ದುಬೆ, ಕಮಲೇಶ್ ನಾಗರಕೋಟಿ, ಲಲಿತ್ ಯಾದವ್, ರಿಪಾಲ್ ಪಟೇಲ್, ಯಶ್ ಧುಲ್, ವಿಕ್ಕಿ ಓಸ್ತ್ವಾಲ್, ಅಭಿಷೇಕ್ ಪೊರೆಲ್

Story first published: Saturday, April 1, 2023, 19:19 [IST]
Other articles published on Apr 1, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+