Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

RCB vs MI: ತಿಲಕ್ ವರ್ಮಾ ಏಕಾಂಗಿ ಹೋರಾಟ: ಆರ್‌ಸಿಬಿಗೆ ಗೆಲ್ಲಲು 172 ರನ್ ಗುರಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆರ್‌ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದೆ.ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಆರ್‌ಸಿಬಿ ತಂಡ ಆರಂಭದಲ್ಲಿ ಅಮೋಘ ಯಶಸ್ಸು ಸಾಧಿಸಿದರೂ ಬಳಿಕ ಮುಂಬೈ ಇಂಡಿಯನ್ಸ್ ತಂಡದಿಂದ ಅದ್ಭುತ ಹೋರಾಟ ವ್ಯಕ್ತವಾಗಿದೆ. ಹೀಗಾಗಿ ಆರ್‌ಸಿಬಿ ತಂಡಕ್ಕೆ ಗೆಲ್ಲಲು ಮುಂಬೈ ಇಂಡಿಯನ್ಸ್ ತಂಡ ಸವಾಲಿನ ಗುರಿ ನಿಗದಿಪಡಿಸಿದೆ.

ಮುಂಬೈ ಇಂಡಿಯನ್ಸ್ ತಂಡದ ಅಗ್ರ ಕ್ರಮಾಂಕ ಆರ್‌ಸಿಬಿ ಬೌಲಿಂಗ್ ದಾಳಿಯ ವಿರುದ್ಧ ಸಂಪೂರ್ಣವಾಗಿ ಶರಣಾಯಿತು. ಆದರೆ ಮಧ್ಯಮ ಕ್ರಮಾಂಕದ ಆಟಗಾರ ತಿಲಕ್ ವರ್ಮಾ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದ್ದು ಆರ್‌ಸಿಬಿ ತಂಡದ ಲೆಕ್ಕಾಚಾರವನ್ನು ಬುಡಮೇಲು ಮಾಡಿದರು. ಇದರ ಪರಿಣಾಮವಾಗಿ ಮುಂಬೈ ಇಂಡಿಯನ್ಸ್ ತಂಡ ಆರ್‌ಸಿಬಿಗೆ ಈ ಪಂದ್ಯದಲ್ಲಿ ಗೆಲ್ಲಲು 172 ರನ್‌ಗಳ ಸವಾಲಿನ ಗುರಿ ನಿಗದಿಪಡಿಸಿದೆ.

IPL 2023, 3rd Match RCB vs MI, Royal Challengers need 172 runs to win against MI

ಆರ್‌ಸಿಬಿ ತಂಡದ ಬೌಲರ್‌ಗಳು ಈ ಪಂದ್ಯದ ಆರಂಭದಲ್ಲಿಯೇ ಅದ್ಭುತ ಯಶಸ್ಸು ಗಳಿಸಲು ಆರಂಭಿಸಿದರು. ಅದರಲ್ಲೂ ಒಹಮ್ಮದ್ ಸಿರಾಜ್ ಆರಂಭದಿಂದಲೇ ತೀಕ್ಷ್ಣ ದಾಳಿಯ ಮೂಲಕ ಎದುರಾಳೀ ದಾಂಡಿಗರ ವಿರುದ್ಧ ಒತ್ತಡ ಹೇರಲು ಆರಂಭಿಸಿದರು. ಇದರ ಪರಿಣಾಮವಾಗಿ ಅಗ್ರ ಕ್ರಮಾಂಕದ ಆಟಗಾರರಾದ ಇಶಾನ್ ಕಿಶನ್ ಕ್ಯಾಮರೂನ್ ಗ್ರೀನ್, ನಾಯಕ ರೋಹಿತ್ ಶರ್ಮಾ ಹಾಗೂ ಸೂರ್ಯ ಕುಮಾರ್ ಯಾದವ್ ಅಲ್ಪ ಮೊತ್ತಕ್ಕೆ ವಿಕೆಟ್ ಕಳೆದುಕೊಂಡರು.

ಈ ಸಂದರ್ಭದಲ್ಲಿ ಮುಂಬೈ ಇಂಡಿಯನ್ಸ್ ತಂಡ ಆರ್‌ಸಿಬಿಗೆ ಸುಲಭ ಗುರಿ ನೀಡಲಿದೆ ಎಂದು ಎಲ್ಲರೂ ಭಾವಿಸಿದರು. ಆದರೆ ತಿಲಕ್ ವರ್ಮಾ ಹಾಗೂ ನೇಹಲ್ ವಧೇರಾ 6ನೇ ವಿಕೆಟ್‌ಗೆ ಅರ್ಧ ಶತಕದ ಜೊತೆಯಾಟ ನೀಡಿ ತಂಡಕ್ಕೆ ಚೇತರಿಕೆ ನೀಡಿದರು. 13 ಎಸೆತಗಳಲ್ಲಿ 21 ರನ್‌ಗಳಿಸಿದ ವಧೇರಾ ವಿಕೆಟ್ ಕಳೆದುಕೊಂಡಾಗ ಮುಂಬೈ ಇಂಡಿಯನ್ಸ್ ತಂಡ 98 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡಿತ್ತು. ಮತ್ತೊಂದು ತುದಿಯಲ್ಲಿ ಇನ್ನೆರಡು ವಿಕೆಟ್‌ಗಳು ಉರುಳಿದರು ಕೂಡ ತಿಲಕ್ ವರ್ಮಾ ಹೋರಾಟ ಕೈಬಿಡಲಿಲ್ಲ.

9ನೇ ವಿಕೆಟ್‌ಗೆ ಅರ್ಶದ್ ಖಾನ್ ಜೊತೆಗೆ ಮತ್ತೊಂದು ಅದ್ಭುತ ಜೊತೆಯಾಟದಲ್ಲಿ ಭಾಗುಯಾದ ತಿಲಕ್ ತಂಡದ ಮೊತ್ತವನ್ನು 171 ರನ್‌ಗಳಿಗೆ ತಲುಪಿಸುವಲ್ಲಿ ಯಶಸ್ವಿಯಾದರು. ಈ ಅದ್ಭುತ ಇನ್ನಿಂಗ್ಸ್‌ನಲ್ಲಿ 46 ಎಸೆತಗಳನ್ನು ಎದುರಿಸಿದ ತಿಲಕ್ ವರ್ಮಾ 84 ರನ್‌ಗಳಿಸಿ ಅಜೇಯವಾಗುಳಿದರು. 9 ಬೌಂಡರಿ ಹಾಗೂ 4 ಸಿಕ್ಸರ್‌ಗಳು ಈ ಇನ್ನಿಂಗ್ಸ್‌ನಲ್ಲಿತ್ತು.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ಮೈಕಲ್ ಬ್ರೇಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಕರ್ಣ್ ಶರ್ಮಾ, ಹರ್ಷಲ್ ಪಟೇಲ್, ಆಕಾಶ್ ದೀಪ್, ರೀಸ್ ಟೋಪ್ಲಿ, ಮೊಹಮ್ಮದ್ ಸಿರಾಜ್

ಬೆಂಚ್: ಸುಯಶ್ ಪ್ರಭುದೇಸಾಯಿ, ಅನುಜ್ ರಾವತ್, ಮನೋಜ್ ಭಾಂಡಗೆ, ಮಹಿಪಾಲ್ ಲೊಮ್ರೋರ್, ಡೇವಿಡ್ ವಿಲ್ಲಿ, ಸಿದ್ದಾರ್ಥ್ ಕೌಲ್,
ಸೋನು ಯಾದವ್, ರಾಜನ್ ಕುಮಾರ್, ಅವಿನಾಶ್ ಸಿಂಗ್, ಫಿನ್ ಅಲೆನ್, ಹಿಮಾಂಶು ಶರ್ಮಾ

ಮುಂಬೈ ಇಂಡಿಯನ್ಸ್ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಕ್ಯಾಮೆರಾನ್ ಗ್ರೀನ್, ತಿಲಕ್ ವರ್ಮಾ, ಟಿಮ್ ಡೇವಿಡ್, ನೆಹಾಲ್ ವಧೇರಾ, ಹೃತಿಕ್ ಶೋಕೀನ್, ಪಿಯೂಷ್ ಚಾವ್ಲಾ, ಜೋಫ್ರಾ ಆರ್ಚರ್, ಅರ್ಷದ್ ಖಾನ್
ಬೆಂಚ್: ಡೆವಾಲ್ಡ್ ಬ್ರೆವಿಸ್, ರಮಣದೀಪ್ ಸಿಂಗ್, ಟ್ರಿಸ್ಟಾನ್ ಸ್ಟಬ್ಸ್, ಶಮ್ಸ್ ಮುಲಾನಿ, ಕುಮಾರ್ ಕಾರ್ತಿಕೇಯ, ಅರ್ಜುನ್ ತೆಂಡೂಲ್ಕರ್, ಜೇಸನ್ ಬೆಹ್ರೆಂಡಾರ್ಫ್, ಸಂದೀಪ್ ವಾರಿಯರ್, ಆಕಾಶ್ ಮಾಧ್ವಲ್, ದುವಾನ್ ಜಾನ್ಸೆನ್, ವಿಷ್ಣು ವಿನೋದ್, ರಾಘವ್ ಗೋಯಲ್

Story first published: Sunday, April 2, 2023, 21:38 [IST]
Other articles published on Apr 2, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+