Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023, RCB vs MI: ಆರ್‌ಸಿಬಿಗೆ ಮುಂಬೈ ಇಂಡಿಯನ್ಸ್ ಸವಾಲು, ಟಾಸ್ ರಿಪೋರ್ಟ್ Live ಸ್ಕೋರ್, ಪ್ಲೇಯಿಂಗ್ ‍XI,

ಇಂಡಿಯನ್ ಪ್ರೀಮಿಯರ್ ಲೀಗ್‌ನ 16ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಚಿನ್ನ ಸ್ವಾಮಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗುವ ಮೂಲಕ ಅಭಿಯಾನ ಆರಂಭಿಸಿದೆ. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಮುಂಬೈ ಇಂಡಿಯನ್ಸ್ ತಂಡ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.

ಆರ್‌ಸಿಬಿ ತಂಡ ಕಳೆದ ಬಾರಿಯ ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿ ಪ್ಲೇಆಪ್ ಹಂತಕ್ಕೆ ಪ್ರವೇಶ ಪಡೆದುಕೊಂಡಿತ್ತು. ಆದರೆ ಮುಂಬೈ ಇಂಡಿಯನ್ಸ್ ಕಳೆದ ಐಪಿಎಲ್‌ನಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದು ಐಪಿಎಲ್ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಕೊನೆಯ ಸ್ಥಾನವನ್ನು ಪಡೆದುಕೊಂಡಿತ್ತು. ಈ ಬಾರಿ ಕೆಲ ಪ್ರತಿಭಾವಂತ ಆಟಗಾರರನ್ನು ಮುಂಬೈ ಇಂಡಿಯನ್ಸ್ ತಂಡಕ್ಕೆ ಸೇರ್ಪಡೆಗೊಳಿಸಿದ್ದು ಉತ್ತಮ ಪ್ರದರ್ಶನ ನೀಡುವ ಗುರಿಯೊಂದಿಗೆ ಕಣಕ್ಕಿಳಿಯುತ್ತಿದೆ.

IPL 2023, 5th Match RCB vs MI toss reports and playing XI details

Live ಸ್ಕೋರ್ ಹೀಗಿದೆ

1
57059

ಇನ್ನು ಮುಂಬೈ ಇಂಡಿಯನ್ಸ್ ತಂಡ ಐಪಿಎಲ್‌ನ ಆರಂಭಿಕ ಪಂದ್ಯದಲ್ಲಿ ಸತತವಾಗಿ ಸಳು ಅನುಭವಿಸಿಕೊಂಡು ಬಂದಿರುವ ಕೆಟ್ಟ ದಾಖಲೆಯನ್ನು ಕೂಡ ಹೊಂದಿದೆ. ಆ ದಾಖಲೆಯನ್ನು ಕೂಡ ಈ ಬಾರಿ ಮುರಿಯುವ ಪ್ರಯತ್ನ ನಡೆಸಲಿದೆ. ಇನ್ನು ಅನುಭವಿ ವೇಗಿ ಜಸ್ಪ್ರೀತ್ ಬೂಮ್ರಾ ಅಲಭ್ಯತೆ ತಂಡಕ್ಕೆ ಕಾಡಲಿದೆಯಾದರೂ ಮತ್ತೋರ್ವ ವೇಗಿ ಜೋಫ್ರಾ ಆರ್ಚರ್ ತಂಡದ ಪರ ಮಿಂಚುವ ವಿಶ್ವಾಸ ಮೂಡಿಸಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ಮೈಕಲ್ ಬ್ರೇಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಕರ್ಣ್ ಶರ್ಮಾ, ಹರ್ಷಲ್ ಪಟೇಲ್, ಆಕಾಶ್ ದೀಪ್, ರೀಸ್ ಟೋಪ್ಲಿ, ಮೊಹಮ್ಮದ್ ಸಿರಾಜ್
ಬೆಂಚ್: ಸುಯಶ್ ಪ್ರಭುದೇಸಾಯಿ, ಅನುಜ್ ರಾವತ್, ಮನೋಜ್ ಭಾಂಡಗೆ, ಮಹಿಪಾಲ್ ಲೊಮ್ರೋರ್, ಡೇವಿಡ್ ವಿಲ್ಲಿ, ಸಿದ್ದಾರ್ಥ್ ಕೌಲ್,
ಸೋನು ಯಾದವ್, ರಾಜನ್ ಕುಮಾರ್, ಅವಿನಾಶ್ ಸಿಂಗ್, ಫಿನ್ ಅಲೆನ್, ಹಿಮಾಂಶು ಶರ್ಮಾ

ಮುಂಬೈ ಇಂಡಿಯನ್ಸ್ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಕ್ಯಾಮೆರಾನ್ ಗ್ರೀನ್, ತಿಲಕ್ ವರ್ಮಾ, ಟಿಮ್ ಡೇವಿಡ್, ನೆಹಾಲ್ ವಧೇರಾ, ಹೃತಿಕ್ ಶೋಕೀನ್, ಪಿಯೂಷ್ ಚಾವ್ಲಾ, ಜೋಫ್ರಾ ಆರ್ಚರ್, ಅರ್ಷದ್ ಖಾನ್
ಬೆಂಚ್: ಡೆವಾಲ್ಡ್ ಬ್ರೆವಿಸ್, ರಮಣದೀಪ್ ಸಿಂಗ್, ಟ್ರಿಸ್ಟಾನ್ ಸ್ಟಬ್ಸ್, ಶಮ್ಸ್ ಮುಲಾನಿ, ಕುಮಾರ್ ಕಾರ್ತಿಕೇಯ, ಅರ್ಜುನ್ ತೆಂಡೂಲ್ಕರ್, ಜೇಸನ್ ಬೆಹ್ರೆಂಡಾರ್ಫ್, ಸಂದೀಪ್ ವಾರಿಯರ್, ಆಕಾಶ್ ಮಾಧ್ವಲ್, ದುವಾನ್ ಜಾನ್ಸೆನ್, ವಿಷ್ಣು ವಿನೋದ್, ರಾಘವ್ ಗೋಯಲ್

Story first published: Sunday, April 2, 2023, 18:49 [IST]
Other articles published on Apr 2, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+