
ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 55 ಪಂದ್ಯಗಳು ನಿನ್ನೆಗೆ ( ಮೇ 10 ) ಮುಕ್ತಾಯವಾಗಿವೆ. ನಿನ್ನೆ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ 15 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಟಾಪ್ 2 ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದೆ.
ಅತ್ತ ಗುಜರಾತ್ ಟೈಟನ್ಸ್ 16 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಪ್ರಥಮ ಸ್ಥಾನದಲ್ಲಿದ್ದು, ಪ್ಲೇಆಫ್ ಪ್ರವೇಶಿಸಲಿರುವ ಮೊದಲ ತಂಡ ಎನಿಸಿಕೊಂಡಿದೆ. ಹೀಗೆ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 55 ಪಂದ್ಯಗಳು ಮುಕ್ತಾಯವಾಗಿದ್ದು, ಯಾವ ತಂಡವೂ ಸಹ ಪ್ಲೇಆಫ್ ಪ್ರವೇಶವನ್ನು ಖಚಿತಪಡಿಸಿಕೊಂಡಿಲ್ಲ.
ಹೀಗೆ ಯಾವ ತಂಡ ಪ್ಲೇಆಫ್ ಪ್ರವೇಶಿಸಲಿದೆ ಎಂಬ ಕುತೂಹಲ ಹೆಚ್ಚಾಗಿದ್ದು, ಯಾವ ತಂಡಗಳಿಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಎಷ್ಟಿದೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ..
1. 11 ಪಂದ್ಯಗಳನ್ನಾಡಿ 8 ಪಂದ್ಯಗಳಲ್ಲಿ ಗೆದ್ದು 3 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಗುಜರಾತ್ ಟೈಟನ್ಸ್ ತಂಡ 16 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು, ಇನ್ನೊಂದು ಪಂದ್ಯವನ್ನು ಗೆದ್ದರೂ ಗುಜರಾತ್ ಟೈಟನ್ಸ್ ತಂಡ ಪ್ಲೇಆಫ್ ಸುತ್ತಿಗೆ ಲಗ್ಗೆ ಇಡಲಿದೆ. ಉಳಿದಿರುವ ಮೂರು ಪಂದ್ಯಗಳ ಪೈಕಿ ಎಲ್ಲಾ ಪಂದ್ಯಗಳನ್ನು ಸೋತರೂ ಸಹ ಗುಜರಾತ್ ಟೈಟನ್ಸ್ ನಾಲ್ಕನೇ ಸ್ಥಾನ ಪಡೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ.
2. 12 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಚೆನ್ನೈ ಸೂಪರ್ ಕಿಂಗ್ಸ್ 15 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದು, ಇನ್ನುಳಿದ 2 ಪಂದ್ಯಗಳ ಪೈಕಿ ಒಂದು ಪಂದ್ಯದಲ್ಲಿ ಗೆದ್ದರೂ ಪ್ಲೇಆಫ್ ಸುತ್ತಿಗೆ ಲಗ್ಗೆ ಇಡಲಿದೆ.
3. 11 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತಿರುವ ಮುಂಬೈ ಇಂಡಿಯನ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ ಉಳಿದ 3 ಪಂದ್ಯಗಳ ಪೈಕಿ ಎರಡು ಪಂದ್ಯಗಳನ್ನು ಗೆದ್ದರೆ 16 ಅಂಕಗಳೊಂದಿಗೆ ಪ್ಲೇಆಫ್ ಪ್ರವೇಶಿಸಲಿದೆ.
4. 11 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋಲು ಒಂದು ಪಂದ್ಯದಲ್ಲಿ ಫಲಿತಾಂಶ ಪಡೆಯದ ಲಕ್ನೋ ಸೂಪರ್ ಜೈಂಟ್ಸ್ ತಂಡ 11 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದು ಇನ್ನುಳಿದ ಎಲ್ಲಾ ಮೂರು ಪಂದ್ಯಗಳನ್ನು ಗೆಲ್ಲಬೇಕಿದೆ. ಉಳಿದ ಪಂದ್ಯಗಳ ಪೈಕಿ ಒಂದು ಪಂದ್ಯದಲ್ಲಿ ಸೋತರೂ ಪ್ಲೇಆಫ್ ರೇಸ್‌ನಿಂದ ಹೊರಬೀಳಲಿದೆ.
5. 11 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ರಾಜಸ್ಥಾನ್ ರಾಯಲ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಈ ತಂಡ ಸಹ ಉಳಿದ ಎಲ್ಲಾ 3 ಪಂದ್ಯಗಳಲ್ಲಿ ಗೆದ್ದು ಒಳ್ಳೆಯ ನೆಟ್ ರನ್ ರೇಟ್ ಹೊಂದಿದರೆ ಪ್ಲೇಆಫ್ ಪ್ರವೇಶಿಸಲಿದೆ.
6. 11 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ. ಈ ತಂಡ ಸಹ ಉಳಿದ ಎಲ್ಲಾ 3 ಪಂದ್ಯಗಳಲ್ಲಿ ಗೆದ್ದು ಒಳ್ಳೆಯ ನೆಟ್ ರನ್ ರೇಟ್ ಹೊಂದಿದರೆ ಪ್ಲೇಆಫ್ ಪ್ರವೇಶಿಸಲಿದೆ.
7. 11 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 10 ಅಂಕಗಳನ್ನು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ. ಈ ತಂಡ ಸಹ ಉಳಿದ ಎಲ್ಲಾ 3 ಪಂದ್ಯಗಳಲ್ಲಿ ಗೆದ್ದು ಒಳ್ಳೆಯ ನೆಟ್ ರನ್ ರೇಟ್ ಹೊಂದಿದರೆ ಪ್ಲೇಆಫ್ ಪ್ರವೇಶಿಸಲಿದೆ.
8. 11 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ಪಂಬಾಬ್ ಕಿಂಗ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ. ಈ ತಂಡ ಸಹ ಉಳಿದ ಎಲ್ಲಾ 3 ಪಂದ್ಯಗಳಲ್ಲಿ ಗೆದ್ದು ಒಳ್ಳೆಯ ನೆಟ್ ರನ್ ರೇಟ್ ಹೊಂದಿದರೆ ಪ್ಲೇಆಫ್ ಪ್ರವೇಶಿಸಲಿದೆ.
9. 10 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ಈ ತಂಡ ಉಳಿದ 4 ಪಂದ್ಯಗಳ ಪೈಕಿ ಎಲ್ಲಾ ಪಂದ್ಯಗಳಲ್ಲಿಯೂ ಗೆದ್ದರೆ ಮಾತ್ರ ಪ್ಲೇಆಫ್ ಪ್ರವೇಶಿಸಲಿದೆ.
10. 11 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 7 ಪಂದ್ಯಗಳಲ್ಲಿ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಡೆಲ್ಲಿ ಕ್ಯಾಪಿಟಲ್ಸ್ ಇನ್ನುಳಿದ 3 ಪಂದ್ಯಗಳನ್ನು ಗೆದ್ದರೂ 14 ಅಂಕಗಳಾಗಲಿದ್ದು ಪ್ಲೇಆಫ್ ಪ್ರವೇಶ ಅಸಾಧ್ಯ.