Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023: ಕೆಕೆಆರ್ ವಿರುದ್ಧ ರಾಜಸ್ಥಾನ್ ಭರ್ಜರಿ ಜಯ ಸಾಧಿಸಿದ ಬಳಿಕ ಯಾವ ತಂಡಕ್ಕೆ ಎಷ್ಟಿದೆ ಪ್ಲೇಆಫ್ ಅವಕಾಶ?

IPL 2023: All team playoff chances after the completion of 56 league matches

ಇಂದು ( ಮೇ 11 ) ಕೊಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಯಶಸ್ವಿ ಜೈಸ್ವಾಲ್ ದಾಖಲೆಯ ಬ್ಯಾಟಿಂಗ್ ಸಹಾಯದಿಂದ 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 149 ರನ್ ಕಲೆಹಾಕಿ ಎದುರಾಳಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 150 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಕೇವಲ 13.1 ಓವರ್‌ಗಳಲ್ಲಿಯೇ ಬೆನ್ನತ್ತಿರುವ ರಾಜಸ್ಥಾನ್ ರಾಯಲ್ಸ್ 1 ವಿಕೆಟ್ ನಷ್ಟಕ್ಕೆ 151 ರನ್ ಕಲೆಹಾಕಿದೆ.

ಈ ಗೆಲುವಿನ ಮೂಲಕ ಐದನೇ ಸ್ಥಾನದಲ್ಲಿದ್ದ ರಾಜಸ್ಥಾನ್ ರಾಯಲ್ಸ್ ಮೂರನೇ ಸ್ಥಾನಕ್ಕೆ ಏರಿಕೆ ಕಂಡಿದ್ದು, ಮೂರನೇ ಸ್ಥಾನದಲ್ಲಿದ್ದ ಮುಂಬೈ ಇಂಡಿಯನ್ಸ್ ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡಿದೆ. ಈ ಹೀನಾಯ ಸೋಲಿನೊಂದಿಗೆ ನೆಟ್ ರನ್ ರೇಟ್ ಕಳೆದುಕೊಂಡ ಕೊಲ್ಕತ್ತಾ ನೈಟ್ ರೈಡರ್ಸ್ ಕುಸಿತ ಕಂಡಿದ್ದು ಏಳನೇ ಸ್ಥಾನದಲ್ಲಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆರನೇ ಸ್ಥಾನಕ್ಕೆ ಏರಿಕೆ ಕಂಡಿದೆ.

ಹೀಗೆ ಈ ಪಂದ್ಯದ ಫಲಿತಾಂಶ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆಗಳನ್ನು ತಂದಿದ್ದು, ಈ ಪಂದ್ಯದ ಬಳಿಕ ಪ್ಲೇಆಫ್ ಪ್ರವೇಶಿಸಲು ಯಾವ ತಂಡಕ್ಕೆ ಎಷ್ಟು ಅವಕಾಶವಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..

1. 11 ಪಂದ್ಯಗಳನ್ನಾಡಿ 8 ಪಂದ್ಯಗಳಲ್ಲಿ ಗೆದ್ದು 3 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಗುಜರಾತ್ ಟೈಟನ್ಸ್ ತಂಡ 16 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು, ಇನ್ನೊಂದು ಪಂದ್ಯವನ್ನು ಗೆದ್ದರೂ ಗುಜರಾತ್ ಟೈಟನ್ಸ್ ತಂಡ ಪ್ಲೇಆಫ್ ಸುತ್ತಿಗೆ ಲಗ್ಗೆ ಇಡಲಿದೆ. ಉಳಿದಿರುವ ಮೂರು ಪಂದ್ಯಗಳ ಪೈಕಿ ಎಲ್ಲಾ ಪಂದ್ಯಗಳನ್ನು ಸೋತರೂ ಸಹ ಗುಜರಾತ್ ಟೈಟನ್ಸ್ ನಾಲ್ಕನೇ ಸ್ಥಾನ ಪಡೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ.

2. 12 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಚೆನ್ನೈ ಸೂಪರ್ ಕಿಂಗ್ಸ್ 15 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದು, ಇನ್ನುಳಿದ 2 ಪಂದ್ಯಗಳ ಪೈಕಿ ಒಂದು ಪಂದ್ಯದಲ್ಲಿ ಗೆದ್ದರೂ ಪ್ಲೇಆಫ್ ಸುತ್ತಿಗೆ ಲಗ್ಗೆ ಇಡಲಿದೆ.
3. 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ರಾಜಸ್ಥಾನ್ ರಾಯಲ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದು, ಪ್ಲೇಆಫ್ ಪ್ರವೇಶಿಸಲು ಇನ್ನುಳಿದ ಎರಡು ಪಂದ್ಯಗಳನ್ನು ಗೆಲ್ಲಬೇಕಿದೆ.

4. 11 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತಿರುವ ಮುಂಬೈ ಇಂಡಿಯನ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದು, ಉಳಿದ 3 ಪಂದ್ಯಗಳ ಪೈಕಿ ಎರಡು ಪಂದ್ಯಗಳನ್ನು ಗೆದ್ದರೆ 16 ಅಂಕಗಳೊಂದಿಗೆ ಪ್ಲೇಆಫ್ ಪ್ರವೇಶಿಸಲಿದೆ.
5. 11 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಲಕ್ನೋ ಸೂಪರ್ ಜೈಂಟ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದು, ಇನ್ನುಳಿದ ಎಲ್ಲಾ ಮೂರು ಪಂದ್ಯಗಳನ್ನು ಗೆಲ್ಲಬೇಕಿದೆ. ಉಳಿದ ಪಂದ್ಯಗಳ ಪೈಕಿ ಒಂದು ಪಂದ್ಯದಲ್ಲಿ ಸೋತರೂ ಪ್ಲೇಆಫ್ ರೇಸ್‌ನಿಂದ ಹೊರಬೀಳಲಿದೆ.
6. 11 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದು, ಉಳಿದ ಎಲ್ಲಾ 3 ಪಂದ್ಯಗಳಲ್ಲಿ ಗೆದ್ದು ಒಳ್ಳೆಯ ನೆಟ್ ರನ್ ರೇಟ್ ಹೊಂದಿದರೆ ಪ್ಲೇಆಫ್ ಪ್ರವೇಶಿಸಲಿದೆ.
7. 12 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 7 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 10 ಅಂಕಗಳನ್ನು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದ್ದು, ಇನ್ನುಳಿದ ಪಂದ್ಯಗಳಲ್ಲಿ ಗೆದ್ದರೂ ಪ್ಲೇಆಫ್ ಪ್ರವೇಶ ಅನುಮಾನವೇ ಸರಿ. ಒಟ್ಟಿನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿದೆ.

8. 11 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ಪಂಬಾಬ್ ಕಿಂಗ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ. ಈ ತಂಡ ಸಹ ಉಳಿದ ಎಲ್ಲಾ 3 ಪಂದ್ಯಗಳಲ್ಲಿ ಗೆದ್ದು ಒಳ್ಳೆಯ ನೆಟ್ ರನ್ ರೇಟ್ ಹೊಂದಿದರೆ ಪ್ಲೇಆಫ್ ಪ್ರವೇಶಿಸಲಿದೆ.
9. 10 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ಈ ತಂಡ ಉಳಿದ 4 ಪಂದ್ಯಗಳ ಪೈಕಿ ಎಲ್ಲಾ ಪಂದ್ಯಗಳಲ್ಲಿಯೂ ಗೆದ್ದರೆ ಮಾತ್ರ ಪ್ಲೇಆಫ್ ಪ್ರವೇಶಿಸಲಿದೆ.
10. 11 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 7 ಪಂದ್ಯಗಳಲ್ಲಿ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಡೆಲ್ಲಿ ಕ್ಯಾಪಿಟಲ್ಸ್ ಇನ್ನುಳಿದ 3 ಪಂದ್ಯಗಳನ್ನು ಗೆದ್ದರೂ 14 ಅಂಕಗಳಾಗಲಿದ್ದು ಪ್ಲೇಆಫ್ ಪ್ರವೇಶ ಅಸಾಧ್ಯ.

Story first published: Thursday, May 11, 2023, 23:27 [IST]
Other articles published on May 11, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+