For Quick Alerts
ALLOW NOTIFICATIONS  
For Daily Alerts
 

IPL 2023: ಪ್ಲೇಆಫ್‌ನತ್ತ ಮುಂಬೈ ಇಂಡಿಯನ್ಸ್; ಬೇರೆ ತಂಡಗಳು ಎಷ್ಟು ಪಂದ್ಯ ಗೆದ್ದರೆ ಪ್ಲೇಆಫ್ ಚಾನ್ಸ್?

IPL 2023: All team playoff chances after the completion of 57 league matches

ನಿನ್ನೆ ( ಮೇ 12 ) ಮುಂಬೈನ ವಾಂಖೆಡೆ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 57ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಲಿ ಚಾಂಪಿಯನ್ಸ್ ಗುಜರಾತ್ ಟೈಟನ್ಸ್ ವಿರುದ್ಧ 27 ರನ್ ಗಳ ಜಯ ಸಾಧಿಸಿತು‌.

ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ಸೂರ್ಯಕುಮಾರ್ ಯಾದವ್ ಅಬ್ಬರದ ಶತಕದ ನೆರವಿನಿಂದ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 218 ರನ್ ಗಳಿಸಿ ಎದುರಾಳಿ ಗುಜರಾತ್ ಟೈಟನ್ಸ್ ತಂಡಕ್ಕೆ ಗೆಲ್ಲಲು 219 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲಗೊಂಡ ಗುಜರಾತ್ ಟೈಟನ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 191 ರನ್ ಕಲೆ ಹಾಕಲಷ್ಟೇ ಶಕ್ತವಾಗಿ ಸೋಲನ್ನು ಕಂಡಿತು.

ಈ ಗೆಲುವಿನೊಂದಿಗೆ ತನ್ನ ಅಂಕವನ್ನು 12ರಿಂದ 14ಕ್ಕೆ ಏರಿಸಿಕೊಂಡಿತು. ಅಲ್ಲದೇ ಪ್ಲೇಆಫ್ ಸುತ್ತಿಗೆ ಅರ್ಹತೆ ಪಡೆದುಕೊಳ್ಳುವತ್ತ ಮತ್ತೊಂದು ಹೆಜ್ಜೆ ಇಟ್ಟಿತು‌. ಹೀಗೆ ಮುಂಬೈ ಇಂಡಿಯನ್ಸ್ ಕಳೆದ 5 ಪಂದ್ಯಗಳಲ್ಲಿ 4 ಪಂದ್ಯಗಳನ್ನು ಗೆದ್ದು ಪ್ಲೇ ಆಫ್ ಪ್ರವೇಶಿಸುವ ತಂಡ ಎಂಬ ದೊಡ್ಡ ಭರವಸೆ ಮೂಡಿಸಿದೆ‌.

ಹೀಗೆ ಟೂರ್ನಿಯ ಈ ಪಂದ್ಯದ ಫಲಿತಾಂಶದ ಬಳಿಕವೂ ಯಾವ ತಂಡದ ಪ್ಲೇಆಫ್ ಪ್ರವೇಶವೂ ಸಹ ಇತ್ಯರ್ಥವಾಗದಿದ್ದು, ಯಾವ ತಂಡ ಉಳಿದ ಪಂದ್ಯಗಳಲ್ಲಿ ಎಷ್ಟು ಪಂದ್ಯಗಳನ್ನು ಗೆದ್ದರೆ ಪ್ಲೇಆಫ್ ಪ್ರವೇಶಿಸಲಿವೆ ಎಂಬ ಮಾಹಿತಿ ಈ ಕೆಳಕಂಡಂತಿದೆ..

1. 12 ಪಂದ್ಯಗಳನ್ನಾಡಿ 8 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಗುಜರಾತ್ ಟೈಟನ್ಸ್ ತಂಡ 16 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು, ಇನ್ನೊಂದು ಪಂದ್ಯವನ್ನು ಗೆದ್ದರೂ ಗುಜರಾತ್ ಟೈಟನ್ಸ್ ತಂಡ ಪ್ಲೇಆಫ್ ಸುತ್ತಿಗೆ ಲಗ್ಗೆ ಇಡಲಿದೆ. ಉಳಿದಿರುವ 2 ಪಂದ್ಯಗಳ ಪೈಕಿ ಎಲ್ಲಾ ಪಂದ್ಯಗಳನ್ನು ಸೋತರೂ ಸಹ ಗುಜರಾತ್ ಟೈಟನ್ಸ್ ನಾಲ್ಕನೇ ಸ್ಥಾನ ಪಡೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ.

2. 12 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಚೆನ್ನೈ ಸೂಪರ್ ಕಿಂಗ್ಸ್ 15 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದು, ಇನ್ನುಳಿದ 2 ಪಂದ್ಯಗಳ ಪೈಕಿ ಒಂದು ಪಂದ್ಯದಲ್ಲಿ ಗೆದ್ದರೂ ಪ್ಲೇಆಫ್ ಸುತ್ತಿಗೆ ಲಗ್ಗೆ ಇಡಲಿದೆ.

3. 12 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತಿರುವ ಮುಂಬೈ ಇಂಡಿಯನ್ಸ್ ತಂಡ 14 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದು, ಇನ್ನುಳಿದ 2 ಪಂದ್ಯಗಳ ಪೈಕಿ ಒಂದು ಪಂದ್ಯದಲ್ಲಿ ಗೆದ್ದರೂ ಪ್ಲೇಆಫ್ ಸುತ್ತಿಗೆ ಲಗ್ಗೆ ಇಡಲಿದೆ.

4. 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ರಾಜಸ್ಥಾನ್ ರಾಯಲ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದು, ಪ್ಲೇಆಫ್ ಪ್ರವೇಶಿಸಲು ಇನ್ನುಳಿದ 2 ಪಂದ್ಯಗಳನ್ನು ಕಡ್ಡಾಯವಾಗಿ ಗೆಲ್ಲಲೇಬೇಕಿದೆ.

5. 11 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಲಕ್ನೋ ಸೂಪರ್ ಜೈಂಟ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದು, ಇನ್ನುಳಿದ ಎಲ್ಲಾ ಮೂರು ಪಂದ್ಯಗಳನ್ನು ಗೆಲ್ಲಬೇಕಿದೆ. ಉಳಿದ ಪಂದ್ಯಗಳ ಪೈಕಿ ಒಂದು ಪಂದ್ಯದಲ್ಲಿ ಸೋತರೂ ಪ್ಲೇಆಫ್ ರೇಸ್‌ನಿಂದ ಹೊರಬೀಳಲಿದೆ.

6. 11 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದು, ಉಳಿದ ಎಲ್ಲಾ 3 ಪಂದ್ಯಗಳಲ್ಲಿ ಗೆದ್ದು ಒಳ್ಳೆಯ ನೆಟ್ ರನ್ ರೇಟ್ ಹೊಂದಿದರೆ ಪ್ಲೇಆಫ್ ಪ್ರವೇಶಿಸಲಿದೆ.

7. 12 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 7 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 10 ಅಂಕಗಳನ್ನು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದ್ದು, ಇನ್ನುಳಿದ ಪಂದ್ಯಗಳಲ್ಲಿ ಗೆದ್ದರೂ ಪ್ಲೇಆಫ್ ಪ್ರವೇಶ ಅನುಮಾನವೇ ಸರಿ. ಒಟ್ಟಿನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿದೆ.

8. 11 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ಪಂಬಾಬ್ ಕಿಂಗ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ. ಈ ತಂಡ ಸಹ ಉಳಿದ ಎಲ್ಲಾ 3 ಪಂದ್ಯಗಳಲ್ಲಿ ಗೆದ್ದು ಒಳ್ಳೆಯ ನೆಟ್ ರನ್ ರೇಟ್ ಹೊಂದಿದರೆ ಪ್ಲೇಆಫ್ ಪ್ರವೇಶಿಸಲಿದೆ.

9. 10 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ಈ ತಂಡ ಉಳಿದ 4 ಪಂದ್ಯಗಳ ಪೈಕಿ ಎಲ್ಲಾ ಪಂದ್ಯಗಳಲ್ಲಿಯೂ ಗೆದ್ದರೆ ಮಾತ್ರ ಪ್ಲೇಆಫ್ ಪ್ರವೇಶಿಸಲಿದೆ.

10. 11 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 7 ಪಂದ್ಯಗಳಲ್ಲಿ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಡೆಲ್ಲಿ ಕ್ಯಾಪಿಟಲ್ಸ್ ಇನ್ನುಳಿದ 3 ಪಂದ್ಯಗಳನ್ನು ಗೆದ್ದರೂ 14 ಅಂಕಗಳಾಗಲಿದ್ದು ಪ್ಲೇಆಫ್ ಪ್ರವೇಶ ಅಸಾಧ್ಯ.

Story first published: Saturday, May 13, 2023, 12:08 [IST]
Other articles published on May 13, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+