For Quick Alerts
ALLOW NOTIFICATIONS  
For Daily Alerts
 

IPL 2023: ಈ ಬಾರಿಯ ಐಪಿಎಲ್‌ನಲ್ಲಿ ಭಾಗವಹಿಸುವ ಎಲ್ಲಾ ತಂಡಗಳ ಸ್ಕ್ವಾಡ್ ಹಾಗೂ ನಾಯಕರ ಸಂಪೂರ್ಣ ವಿವರ

IPL 2023: All teams updated full squad and captains complete details

ಇಂಡಿಯನ್ ಪ್ರೀಮಿಯರ್ ಲೀಗ್‌ನ 16ನೇ ಆವೃತ್ತಿ ಶುಕ್ರವಾರ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳ ನಡುವಿನ ಸೆಣೆಸಾಟದ ಮೂಲಕ ಚಾಲನೆ ಪಡೆಯಲಿದೆ. ಹತ್ತು ತಂಡಗಳು ಭಾಗವಹಿಸುವ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಕೆಲ ಹೊಸ ನಿಯಮಗಳು ಟೂರ್ನಿಗೆ ಮತ್ತಷ್ಟು ರಂಗು ಮೂಡಿಸುವ ನಿರೀಕ್ಷೆಯಿದೆ. ಇನ್ನು ಎಲ್ಲಾ ತಂಡಗಳು ಕೂಡ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಅಬ್ಬರದ ಪ್ರದರ್ಶನ ನೀಡಲು ಸರ್ವ ಸನ್ನಧವಾಗಿದೆ.

ಈ ಬಾರಿಯ ಐಪಿಎಲ್ ಟೂರ್ನಿ 2019ರ ಐಪಿಎಲ್ ಆವೃತ್ತಿಯ ಬಳಿಕ ಮೊದಲ ಬಾರಿಗೆ ಹೋಮ್ ಹಾಗೂ ಅವೇ ಮಾದರಿಯಲ್ಲಿ ನಡೆಯುತ್ತಿರುವುದು ವಿಶೇಷ. ಕೋವಿಡ್ ಕಾರಣದಿಂದಾಗಿ ಕಳೆದ ಮೂರು ಆವೃತ್ತಿಗಳು ತಟಸ್ಥ ಸ್ಥಳಗಳಲ್ಲಿ ಆಯೋಜನೆಯಾಗಿತ್ತು. ಆದರೆ ಈ ಬಾರಿ ಎಲ್ಲಾ ತಂಡಗಳು ತಮ್ಮ ತವರಿನ ಕ್ರೀಡಾಂಗಣದಲ್ಲಿ ತವರಿನ ಪ್ರೇಕ್ಷಕರ ಸಮ್ಮುಖದಲ್ಲಿ ಆಡಲಿದೆ.

ಇನ್ನು ಈ ಬಾರಿ ಕೂಡ ಬಹುತೇಕ ತಂಡಗಳಲ್ಲಿ ಕೊನೆಯ ಕ್ಷಣದ ಬದಲಾವಣೆಗಳನ್ನು ಮಾಡಿಕೊಳ್ಳಲಾಗಿದ್ದು ಗಾಯದಿಂದ ಟೂರ್ನಿಯಿಂದ ಹೊರಬಿದ್ದಿರುವ ಆಟಗಾರರ ಸ್ಥಾನಕ್ಕೆ ಬದಲಿ ಆಟಗಾರರನ್ನು ಸೇರ್ಪಡೆಗೊಳಿಸಲಾಗಿದೆ. ಹೀಗಾಗಿ ಎಲ್ಲಾ ತಂಡಗಳ ಸಂಪೂರ್ಣ ಸ್ಕ್ವಾಡ್ ಹಾಗೂ ನಾಯಕರ ಮಾಹಿತಿ ಇಲ್ಲಿದೆ. ಮುಂದೆ ಓದಿ..

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಮಹಿಪಾಲ್ ಲೋಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಮೈಕೆಲ್ ಬ್ರೇಸ್‌ವೆಲ್, ವನಿಂದು ಹಸರಂಗ, ಶಹಬಾಜ್ ಅಹ್ಮದ್, ಡೇವಿಡ್ ವಿಲ್ಲಿ, ಫಿನ್ ಅಲೆನ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಆಕಾಶ್ ದೀಪ್, ಅವಿನಾಶ್ ಸಿಂಗ್, ಜೋಶ್ ಹ್ಯಾಜಲ್‌ವುಡ್, ಸಿದ್ದಾರ್ಥ್ ಕೌಲ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್, ರಾಜನ್ ಕುಮಾರ್, ಹಿಮಾಂಶು ಶರ್ಮಾ, ಕರ್ಣ್ ಶರ್ಮಾ, ಸೋನು ಯಾದವ್, ರೀಸ್ ಟೋಪ್ಲಿ

ಚೆನ್ನೈ ಸೂಪರ್ ಕಿಂಗ್ಸ್: ಎಂಎಸ್ ಧೋನಿ(ನಾಯಕ), ಋತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಮೊಯಿನ್ ಅಲಿ, ಸುಭ್ರಾಂಶು ಸೇನಾಪತಿ, ಅಂಬಾಟಿ ರಾಯುಡು, ರವೀಂದ್ರ ಜಡೇಜಾ, ಶಿವಂ ದುಬೆ, ರಾಜವರ್ಧನ್ ಹಂಗರ್ಗೇಕರ್, ಡ್ವೈನ್ ಪ್ರಿಟೋರಿಯಸ್, ಮಿಚೆಲ್ ಸ್ಯಾಂಟ್ನರ್, ಮಹೇಶ್ ತೀಕ್ಷಣ, ಪ್ರಶಾಂತ್ ಸೋಲಂಕಿ, ದೀಪಕ್ ಚಾಹರ್, ಮುಖೇಶ್ ಚೌಧರಿ, ಸಿಮರ್ಜೀತ್ ಸಿಂಗ್, ತುಷಾರ್ ದೇಶಪಾಂಡೆ, ಮಥೀಶ ಪತಿರಾನ, ಬೆನ್ ಸ್ಟೋಕ್ಸ್, ಸಿಸಂದಾ ಮಗಲಾ, ಅಜಿಂಕ್ಯ ರಹಾನೆ, ಶೇಕ್ ರಶೀದ್, ನಿಶಾಂತ್ ಸಿಂಧು, ಅಜಯ್ ಮಂಡಲ್, ಭಗತ್ ವರ್ಮಾ, ಆಕಾಶ್ ಸಿಂಗ್

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ರಮಣದೀಪ್ ಸಿಂಗ್, ಅನ್ಮೋಲ್ಪ್ರೀತ್ ಸಿಂಗ್, ಡೆವಾಲ್ಡ್ ಬ್ರೆವಿಸ್, ನೆಹಾಲ್ ವಧೇರಾ, ಟಿಮ್ ಡೇವಿಡ್, ಶಮ್ಸ್ ಮುಲಾನಿ, ಪಿಯೂಷ್ ಚಾವ್ಲಾ, ಕ್ಯಾಮರೂನ್ ಗ್ರೀನ್, ಕುಮಾರ್ ಕಾರ್ತಿಕೇಯ, ಹೃತಿಕ್ ಶೋಕೀನ್, ಅರ್ಜುನ್ ತೆಂಡೂಲ್ಕರ್, ಇಶಾನ್ ಕಿಶನ್, ಟ್ರಿಸ್ಟಾನ್ ಸ್ಟಬ್ಸ್, ವಿಷ್ಣು ವಿನೋದ್, ಜೋಫ್ರಾ ಆರ್ಚರ್, ಅರ್ಷದ್ ಖಾನ್, ಜೇಸನ್ ಬೆಹ್ರೆಂಡಾರ್ಫ್, ರಾಘವ್ ಗೋಯಲ್, ದುವಾನ್ ಜಾನ್ಸೆನ್, ಆಕಾಶ್ ಮಧ್ವಲ್

ಗುಜರಾತ್ ಟೈಟನ್ಸ್: ಹಾರ್ದಿಕ್ ಪಾಂಡ್ಯ(ನಾಯಕ), ಶುಬ್ಮನ್ ಗಿಲ್, ಸಾಯಿ ಸುದರ್ಶನ್, ವೃದ್ಧಿಮಾನ್ ಸಹಾ, ಮ್ಯಾಥ್ಯೂ ವೇಡ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ಅಭಿನವ್ ಮನೋಹರ್, ವಿಜಯ್ ಶಂಕರ್, ರಶೀದ್ ಖಾನ್, ಸಾಯಿ ಕಿಶೋರ್, ನೂರ್ ಅಹ್ಮದ್, ಜಯಂತ್ ಯಾದವ್, ಅಲ್ಜಾರಿ ಜೋಸೆಫ್, ಮೊಹಮ್ಮದ್ ಶಮಿ, ಯಶ್ ದಯಾಳ್, ದರ್ಶನ್ ನಲ್ಕಂಡೆ, ಪ್ರದೀಪ್ ಸಾಂಗ್ವಾನ್, ಶಿವಂ ಮಾವಿ, ಜೋಶುವಾ ಲಿಟಲ್, ಕೇನ್ ವಿಲಿಯಮ್ಸನ್, ಕೆಎಸ್ ಭರತ್, ಒಡಿಯನ್ ಸ್ಮಿತ್, ಮೋಹಿತ್ ಶರ್ಮಾ, ಉರ್ವಿಲ್ ಪಟೇಲ್.

ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್ (ನಾಯಕ), ಯಶಸ್ವಿ ಜೈಸ್ವಾಲ್, ಶಿಮ್ರಾನ್ ಹೆಟ್ಮೆಯರ್, ದೇವದತ್ ಪಡಿಕ್ಕಲ್, ಜೋಸ್ ಬಟ್ಲರ್, ಧ್ರುವ ಜುರೆಲ್, ರಿಯಾನ್ ಪರಾಗ್, ಪ್ರಸಿದ್ಧ್ ಕೃಷ್ಣ, ಟ್ರೆಂಟ್ ಬೌಲ್ಟ್, ಒಬೆದ್ ಮೆಕಾಯ್, ನವದೀಪ್ ಸೈನಿ, ಕುಲದೀಪ್ ಸೇನ್, ಕುಲದೀಪ್ ಯಾದವ್, ಆರ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಕೆಸಿ ಕಾರಿಯಪ್ಪ, ಜೇಸನ್ ಹೋಲ್ಡರ್, ಡೊನೊವನ್ ಫೆರೇರಾ, ಸಂದೀಪ್ ಶರ್ಮಾ, ಕುನಾಲ್ ರಾಥೋಡ್, ಆಡಮ್ ಝಂಪಾ, ಕೆಎಂ ಆಸಿಫ್, ಮುರುಗನ್ ಅಶ್ವಿನ್, ಆಕಾಶ್ ವಶಿಷ್ಟ್, ಅಬ್ದುಲ್ ಪಿ ಎ, ಜೋ ರೂಟ್

ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್ (ನಾಯಕ), ಅವೇಶ್ ಖಾನ್, ಆಯುಷ್ ಬಡೋನಿ, ಕ್ವಿಂಟನ್ ಡಿ ಕಾಕ್, ಕೆ ಗೌತಮ್, ದೀಪಕ್ ಹೂಡಾ, ಪ್ರೇರಕ್ ಮಂಕಡ್, ಕೈಲ್ ಮೇಯರ್ಸ್, ಅಮಿತ್ ಮಿಶ್ರಾ, ಮೊಹ್ಸಿನ್ ಖಾನ್, ನವೀನ್-ಉಲ್-ಹಕ್, ಕೃನಾಲ್ ಪಾಂಡ್ಯ, ನಿಕೋಲಸ್ ಪೂರನ್, ರವಿ ಬಿಷ್ಣೋಯ್, ಡೇನಿಯಲ್ ಸಾಮ್ಸ್, ಕರಣ್ ಶರ್ಮಾ, ರೊಮಾರಿಯೋ ಶೆಫರ್ಡ್, ಮಾರ್ಕಸ್ ಸ್ಟೊಯಿನಿಸ್, ಸ್ವಪ್ನಿಲ್ ಸಿಂಗ್, ಜಯದೇವ್ ಉನದ್ಕತ್, ಮನನ್ ವೋಹ್ರಾ, ಮಾರ್ಕ್ ವುಡ್, ಮಯಾಂಕ್ ಯಾದವ್, ಯಶ್ ಠಾಕೂರ್, ಯುದ್ವೀರ್ ಸಿಂಗ್.

ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್ (ನಾಯಕ), ಪೃಥ್ವಿ ಶಾ, ಯಶ್ ಧುಲ್, ಫಿಲ್ ಸಾಲ್ಟ್, ಸರ್ಫರಾಜ್ ಖಾನ್, ಮನೀಶ್ ಪಾಂಡೆ, ರಿಲೀ ರೋಸೌವ್, ರಿಪಾಲ್ ಪಟೇಲ್, ರೋವ್ಮನ್ ಪೊವೆಲ್, ಮಿಚೆಲ್ ಮಾರ್ಷ್, ಲಲಿತ್ ಯಾದವ್, ಅಕ್ಸರ್ ಪಟೇಲ್, ಅಮನ್ ಖಾನ್, ವಿಕ್ಕಿ ಒಸ್ತ್ವಾಲ್, ಕುಲದೀಪ್ ಯಾದವ್, ಪ್ರವೀಣ್ ದುಬೆ, ಅನ್ರಿಚ್ ನಾರ್ಟ್ಜೆ, ಚೇತನ್ ಸಕರಿಯಾ, ಕಮಲೇಶ್ ನಾಗರಕೋಟಿ, ಖಲೀಲ್ ಅಹ್ಮದ್, ಲುಂಗಿ ಎನ್‌ಗಿಡಿ, ಮುಸ್ತಾಫಿಜುರ್ ರೆಹಮಾನ್, ಇಶಾಂತ್ ಶರ್ಮಾ, ಮುಖೇಶ್ ಕುಮಾರ್, ಅಭಿಷೇಕ್ ಪೊರೆಲ್

ಕೊಲ್ಕತ್ತಾ ನೈಟ್ ರೈಡರ್ಸ್: ನಿತೀಶ್ ರಾಣಾ (ನಾಯಕ), ವರುಣ್ ಚಕ್ರವರ್ತಿ, ಲಾಕಿ ಫರ್ಗುಸನ್, ರಹಮಾನುಲ್ಲಾ ಗುರ್ಬಾಜ್, ವೆಂಕಟೇಶ್ ಅಯ್ಯರ್, ಸುನಿಲ್ ನರೈನ್, ಹರ್ಷಿತ್ ರಾಣಾ, ಅನುಕುಲ್ ರಾಯ್, ಆಂಡ್ರೆ ರಸೆಲ್, ರಿಂಕು ಸಿಂಗ್, ಟಿಮ್ ಸೌಥಿ, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ವೈಭವ್ ಅರೋರಾ, ಎನ್ ಜಗದೀಸನ್, ಸುಯಶ್ ಶರ್ಮಾ, ಡೇವಿಡ್ ವೈಸ್, ಕುಲ್ವಂತ್ ಖೆಜ್ರೋಲಿಯಾ, ಲಿಟನ್ ದಾಸ್, ಮನ್‌ದೀಪ್ ಸಿಂಗ್, ಶಕೀಬ್ ಅಲ್ ಹಸನ್, ಶ್ರೇಯಸ್ ಅಯ್ಯರ್ (ಗಾಯಾಳು)

ಸನ್‌ರೈಸರ್ಸ್ ಹೈದರಾಬಾದ್: ಐಡೆನ್ ಮಾರ್ಕ್ರಾಮ್ (ನಾಯಕ), ಮಯಾಂಕ್ ಅಗರ್ವಾಲ್, ಅಬ್ದುಲ್ ಸಮದ್, ಅನ್ಮೋಲ್ಪ್ರೀತ್ ಸಿಂಗ್, ಹ್ಯಾರಿ ಬ್ರೂಕ್, ನಿತೀಶ್ ರೆಡ್ಡಿ, ರಾಹುಲ್ ತ್ರಿಪಾಠಿ, ಸಮರ್ಥ ವ್ಯಾಸ್, ಸನ್ವಿರ್ ಸಿಂಗ್, ವಿವ್ರಾಂತ್ ಶರ್ಮಾ, ವಾಷಿಂಗ್ಟನ್ ಸುಂದರ್, ಅಭಿಷೇಕ್ ಶರ್ಮಾ, ಮಾರ್ಕೊ ಜಾನ್ಸೆನ್, ಹೆನ್ರಿಚ್ ಕ್ಲಾಸೆನ್, ಗ್ಲೆನ್ ಫಿಲಿಪ್ಸ್, ಉಪೇಂದ್ರ ಯಾದವ್, ಅಕೇಲ್ ಹೊಸೈನ್, ಮಯಾಂಕ್ ದಾಗರ್, ಫಜಲ್ಹಕ್ ಫಾರೂಕಿ, ಕಾರ್ತಿಕ್ ತ್ಯಾಗಿ, ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಂಡೆ, ಟಿ ನಟರಾಜನ್, ಆದಿಲ್ ರಶೀದ್, ಉಮ್ರಾನ್ ಮಲಿಕ್

ಪಂಜಾಬ್ ಕಿಂಗ್ಸ್: ಶಿಖರ್ ಧವನ್ (ನಾಯಕ), ಹರ್‌ಪ್ರೀತ್ ಸಿಂಗ್ ಭಾಟಿಯಾ, ಲಿಯಾಮ್ ಲಿವಿಂಗ್‌ಸ್ಟೋನ್, ಅಥರ್ವ ಟೈಡೆ, ಮ್ಯಾಥ್ಯೂ ಶಾರ್ಟ್, ಸಿಕಂದರ್ ರಜಾ, ಶಾರುಖ್ ಖಾನ್, ಮೋಹಿತ್ ರಾಥೀ, ಹರ್ಪೀತ್ ಬ್ರಾರ್, ಸ್ಯಾಮ್ ಕರನ್, ರಿಷಿ ಧವನ್, ಬಲ್ತೇಜ್ ಸಿಂಗ್, ಪ್ರಭ್‌ಸಿಮ್ರಾನ್ ಸಿಂಗ್, ಭಾನುಕಾ ರಾಜಪಕ್ಸೆ, ಜಿತೇಶ್ ಶರ್ಮಾ, ರಾಜ್ ಬಾವಾ, ಕಗಿಸೊ ರಬಾಡ, ನಾಥನ್ ಎಲ್ಲಿಸ್, ರಾಹುಲ್ ಚಾಹರ್, ಅರ್ಷದೀಪ್ ಸಿಂಗ್, ಶಿವಂ ಸಿಂಗ್, ವಿಧ್ವತ್ ಕಾವೇರಪ್ಪ

Story first published: Friday, March 31, 2023, 15:24 [IST]
Other articles published on Mar 31, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+