ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IPL 2023 Auction: ದೊಡ್ಡ ಮೊತ್ತಕ್ಕೆ ಸ್ಟಾರ್ ಅಲ್‌ರೌಂಡರ್ ಕ್ಯಾಮರೂನ್ ಗ್ರೀನ್ ಖರೀದಿಸಿದ ಮುಂಬೈ ಇಂಡಿಯನ್ಸ್

IPL 2023 Auction: Mumbai Indians Bought Star Allrounder Cameron Green For Rs 17.50 Cr

2023ರ ಇಂಡಿಯನ್ ಪ್ರೀಮಿಯರ್ ಲೀಗ್‌ಗಾಗಿ (ಐಪಿಎಲ್) ಮಿನಿ ಹರಾಜು ಪ್ರಕ್ರಿಯೆಗೆ ಶುಕ್ರವಾರ, ಡಿಸೆಂಬರ್ 23ರಂದು ಕೊಚ್ಚಿಯಲ್ಲಿ ಅದ್ಧೂರಿಯಾಗಿ ಚಾಲನೆ ಸಿಕ್ಕಿದೆ. ಇದೇ ವೇಳೆ ಆಸ್ಟ್ರೇಲಿಯಾದ ಸ್ಟಾರ್ ಆಲ್‌ರೌಂಡರ್ ಕ್ಯಾಮರೂನ್ ಗ್ರೀನ್ ಕೂಡ ದೊಡ್ಡ ಮೊತ್ತಕ್ಕೆ ಖರೀದಿಯಾಗಿದ್ದಾರೆ.

ಐಪಿಎಲ್ 2023ರ ಮಿನಿ ಹರಾಜಿನಲ್ಲಿ ಆಸ್ಟ್ರೇಲಿಯಾದ ಕ್ಯಾಮರೂನ್ ಗ್ರೀನ್ 17.50 ಕೋಟಿ ರೂ.ಗೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಮಾರಾಟವಾದರು. ಆದಾಗ್ಯೂ, ಇಂಗ್ಲೆಂಡ್‌ನ ಯುವ ಆಲ್‌ರೌಂಡರ್ ಸ್ಯಾಮ್ ಕುರ್ರಾನ್ 18.50 ಕೋಟಿ ರೂ. ದಾಖಲೆಯನ್ನು ಮುರಿಯಲು ಸಾಧ್ಯವಾಗಲಿಲ್ಲ. ಸ್ಯಾಮ್ ಕರ್ರಾನ್ ಐಪಿಎಲ್ ಹರಾಜಿನ ಇತಿಹಾಸದಲ್ಲಿ ಅವರು ಅತ್ಯಂತ ದುಬಾರಿ ಆಟಗಾರನಾಗಿದ್ದಾರೆ.

ಐಪಿಎಲ್ ಹರಾಜಿನ ಇತಿಹಾಸದಲ್ಲಿ ಎರಡನೇ ಅತ್ಯಂತ ದುಬಾರಿ ಬೆಲೆಗೆ ಕ್ಯಾಮರೂನ್ ಗ್ರೀನ್ ಅವರನ್ನು ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ದೆಹಲಿ ಕ್ಯಾಪಿಟಲ್ಸ್ ಜೊತೆಗಿನ ಕಠಿಣ ಬಿಡ್ಡಿಂಗ್ ಪೈಪೋಟಿ ನಡೆಸಿ ಖರೀದಿಸಿದರು.

IPL 2023 Auction: ಐಪಿಎಲ್ ಇತಿಹಾಸದಲ್ಲಿಯೇ ದಾಖಲೆ ಬೆಲೆಗೆ ಮಾರಾಟವಾದ ಸ್ಯಾಮ್ ಕರ್ರಾನ್IPL 2023 Auction: ಐಪಿಎಲ್ ಇತಿಹಾಸದಲ್ಲಿಯೇ ದಾಖಲೆ ಬೆಲೆಗೆ ಮಾರಾಟವಾದ ಸ್ಯಾಮ್ ಕರ್ರಾನ್

ಇದಾದ ಸ್ವಲ್ಪ ಸಮಯದ ನಂತರ ಇಂಗ್ಲೆಂಡ್ ತಂಡದ ಹಿರಿಯ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಅವರು ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ 16.25 ಕೋಟಿ ರೂ.ಗೆ ಮಾರಾಟವಾದರು.

ಐಪಿಎಲ್ 2023ರ ಸೀಸನ್‌ಗೆ ಮುನ್ನ ನಿವೃತ್ತರಾದ ಮುಂಬೈ ಇಂಡಿಯನ್ಸ್ ಮಾಜಿ ಆಟಗಾರ ಕೀರಾನ್ ಪೊಲಾರ್ಡ್ ಅವರ ಸ್ಥಾನವನ್ನು ಕ್ಯಾಮರೂನ್ ಗ್ರೀನ್ ವಹಿಸಲಿದ್ದಾರೆ. ಮುಂಬೈ ಇಂಡಿಯನ್ಸ್ ತಂಡಕ್ಕಾಗಿ ಪೊಲಾರ್ಡ್ ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ತಂಡಕ್ಕೆ ಕೊಡುಗೆ ನೀಡುತ್ತಿದ್ದರು, ಇದೀಗ ಆ ಸ್ಥಾನವನ್ನು ಕ್ಯಾಮರೂನ್ ಗ್ರೀನ್ ತುಂಬಲಿದ್ದಾರೆ.

IPL 2023 Auction: ದೊಡ್ಡ ಮೊತ್ತಕ್ಕೆ ಮಯಾಂಕ್ ಅಗರ್ವಾಲ್ ಖರೀದಿಸಿದ ಸನ್‌ರೈಸರ್ಸ್ ಹೈದರಾಬಾದ್IPL 2023 Auction: ದೊಡ್ಡ ಮೊತ್ತಕ್ಕೆ ಮಯಾಂಕ್ ಅಗರ್ವಾಲ್ ಖರೀದಿಸಿದ ಸನ್‌ರೈಸರ್ಸ್ ಹೈದರಾಬಾದ್

23 ವರ್ಷದ ಕ್ಯಾಮರೂನ್ ಗ್ರೀನ್ ಇತ್ತೀಚಿನ ದಿನಗಳಲ್ಲಿ ಆಸ್ಟ್ರೇಲಿಯಾಕ್ಕೆ ಆಟದ ಎಲ್ಲಾ ಸ್ವರೂಪಗಳಲ್ಲಿ ಅದ್ಭುತ ಫಾರ್ಮ್‌ನಲ್ಲಿದ್ದಾರೆ.

ಭಾರತದಲ್ಲಿ ಮೂರು ಟಿ20 ಪಂದ್ಯಗಳನ್ನು ಆಡಿರುವ ಕ್ಯಾಮರೂನ್ ಗ್ರೀನ್, ಆಸ್ಟ್ರೇಲಿಯಾಕ್ಕೆ ಇನ್ನಿಂಗ್ಸ್ ತೆರೆಯುವಾಗ 200 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟಿಂಗ್ ಮಾಡಿದ್ದಾರೆ. 140 ಕಿಮೀ ವೇಗದಲ್ಲಿ ಬೌಲಿಂಗ್ ಮಾಡಬಲ್ಲ ಗ್ರೀನ್, ವಿಶ್ವ ಕ್ರಿಕೆಟ್‌ನಲ್ಲಿ ಹೆಚ್ಚು ಬೇಡಿಕೆಯಿರುವ ಯುವ ಆಲ್‌ರೌಂಡರ್ ಆಗಿದ್ದಾರೆ.

Story first published: Friday, December 23, 2022, 16:33 [IST]
Other articles published on Dec 23, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X