Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023 DC vs MI : ಡೆಲ್ಲಿಗೆ ವಾರ್ನರ್, ಅಕ್ಷರ್ ಆಸರೆ: ಮುಂಬೈಗೆ ಸವಾಲಿನ ಗುರಿ

ಇಂಡಿಯನ್ ಪ್ರೀಮಿಯರ್ ಲೀಗ್‌ 2023ರ 16ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 19.4 ಓವರ್ ಗಳಲ್ಲಿ 172 ರನ್ ಗಳಿಗೆ ಆಲೌಟ್ ಆಗಿದೆ. ತಂಡದ ನಾಯಕ ಡೇವಿಡ್ ವಾರ್ನರ್ ಜವಾಬ್ದಾರಿಯುತ ಬ್ಯಾಟಿಂಗ್ ಮಾಡಿದರೆ, ಅಕ್ಷರ್ ಪಟೇಲ್ ಅತ್ಯುತ್ತಮ ಬ್ಯಾಟಿಂಗ್ ಮಾಡುವ ಮೂಲಕ ಡೆಲ್ಲಿ ತಂಡಕ್ಕೆ ಆಸರೆಯಾದರು. ಕೊನೆಯ ಎರಡು ಓವರ್ ಗಳಲ್ಲಿ ಡೆಲ್ಲಿ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಡೆಲ್ಲಿ ಕ್ಯಾಪಿಟಲ್ಸ್ ಉತ್ತಮ ಆರಂಭ ಪಡೆಯುವ ಸಂದರ್ಭದಲ್ಲಿ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಪೃಥ್ವಿ ಶಾ 10 ಎಸೆತಗಳಲ್ಲಿ 15 ರನ್ ಗಳಿಸಿ ಔಟಾದರು. ಮನೀಶ್ ಪಾಂಡೆ 18 ಎಸೆತಗಳಲ್ಲಿ 26 ರನ್ ಗಳಿಸಿ ಉತ್ತಮವಾಗಿ ಆಡುವ ಸಂದರ್ಭದಲ್ಲಿ ಪಿಯೂಷ್ ಚಾವ್ಲಾ ಬೌಲಿಂಗ್‌ನಲ್ಲಿ ಕ್ಯಾಚ್ ನೀಡಿ ಔಟಾದರು.

Axar Patel & David Warner

ಮೊದಲ ಐಪಿಎಲ್ ಪಂದ್ಯದಲ್ಲಿ ಯಶ್ ಧುಲ್ 2 ರನ್ ಗಳಿಸಿ ಔಟಾಗುವ ಮೂಲಕ ನಿರಾಸೆ ಮೂಡಿಸಿದರೆ, ರೋವ್ಮನ್ ಪೊವೆಲ್ 4 ರನ್‌ಗಳಿಗೆ ಔಟಾದರು, ಲಲಿತ್ ಯಾದವ್ ಕೂಡ 2 ರನ್‌ಗಳಿಗೆ ಔಟಾದರು. ಮೂಲಕ ಡೆಲ್ಲಿ ದಿಢೀರ್ ಕುಸಿತ ಕಂಡಿತು. 98 ರನ್ ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಆದರೆ ನಂತರ ಕ್ರೀಸ್‌ಗೆ ಬಂದ ಅಕ್ಷರ್ ಪಟೇಲ್ ಸ್ಫೋಟಕ ಇನ್ನಿಂಗ್ಸ್ ಆಡಿದರು.

25 ಎಸೆತಗಳಲ್ಲಿ 4 ಬೌಂಡರಿ 5 ಸಿಕ್ಸರ್ ಸಹಿತ 54 ರನ್ ಗಳಿಸಿ, ಐಪಿಎಲ್‌ನ ತಮ್ಮ ಮೊದಲ ಶತಕ ಪೂರೈಸಿದರು. ಜವಾಬ್ದಾರಿಯುತ ಇನ್ನಿಂಗ್ಸ್ ಆಡಿದ ಡೇವಿಡ್ ವಾರ್ನರ್ 47 ಎಸೆತಗಳಲ್ಲಿ 51 ರನ್ ಗಳಿಸಿ ಔಟಾದರು. ಡೆಲ್ಲಿ ಕ್ಯಾಪಿಟಲ್ಸ್ ಕೊನೆಯ ಹಂತದಲ್ಲಿ ದಿಢೀರ್ ಕುಸಿತ ಕಂಡು ಆಘಾತ ಅನುಭವಿಸಿತು. 19ನೇ ಓವರ್ ನಲ್ಲಿ 1 ರನ್ ಗಳಿಸಿ 4 ವಿಕೆಟ್ ಕಳೆದುಕೊಂಡಿತು. ಅಂತಿಮವಾಗಿ 19.4 ಓವರ್ ಗಳಲ್ಲಿ 172 ರನ್‌ಗಳಿಗೆ ಆಲೌಟ್ ಆಯಿತು.

Axar Patel & David Warner

ಮುಂಬೈ ಇಂಡಿಯನ್ಸ್ ಪರವಾಗಿ ಸ್ಪಿನ್ನರ್ ಪಿಯೂಷ್ ಚಾವ್ಲಾ 4 ಓವರ್ ಗಳಲ್ಲಿ 22 ರನ್ ನೀಡಿ 3 ವಿಕೆಟ್ ಪಡೆದು ಮಿಂಚಿದರು. ಜೇಸನ್ ಬೆಹ್ರೆಂಡಾಫ್ 3 ಓವರ್ ಗಳಲ್ಲಿ 23 ರನ್ ನೀಡಿ 3 ವಿಕೆಟ್ ಪಡೆದರು. ರಿಲೀ ಮೆರೆಡಿತ್ 3.4 ಓವರ್ ಗಳಲ್ಲಿ 34 ರನ್ ನೀಡಿ 2 ವಿಕೆಟ್ ಪಡೆದರು. ಪಿಚ್‌ ಹೆಚ್ಚಾಗಿ ಸ್ಪಿನ್ನರ್ ಗಳಿಗೆ ನೆರವು ನೀಡುತ್ತಿದ್ದು, ಉತ್ತಮವಾಗಿ ಬೌಲಿಂಗ್ ಪ್ರದರ್ಶನ ನೀಡಿದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಗೆಲುವಿನ ಸಾಧ್ಯತೆ ಇದೆ.

ಉಭಯ ತಂಡಗಳ ಆಡುವ ಬಳಗ

ಡೆಲ್ಲಿ ಕ್ಯಾಪಿಟಲ್ಸ್ : ಪೃಥ್ವಿ ಶಾ, ಡೇವಿಡ್ ವಾರ್ನರ್ (ನಾಯಕ), ಮನೀಶ್ ಪಾಂಡೆ, ಯಶ್ ಧುಲ್, ರೋವ್‌ಮನ್ ಪೊವೆಲ್, ಲಲಿತ್ ಯಾದವ್, ಅಕ್ಸರ್ ಪಟೇಲ್, ಅಭಿಷೇಕ್ ಪೊರೆಲ್ (ವಿಕೆಟ್ ಕೀಪರ್), ಕುಲದೀಪ್ ಯಾದವ್, ಅನ್ರಿಚ್ ನೊಕಿಯಾ, ಮುಸ್ತಾಫಿಜುರ್ ರೆಹಮಾನ್. ಇಂಪ್ಯಾಕ್ಟ್ ಪ್ಲೇಯರ್: ಮುಖೇಶ್ ಕುಮಾರ್, ಅಮನ್ ಖಾನ್, ಸರ್ಫರಾಜ್ ಖಾನ್, ಪ್ರವೀಣ್ ದುಬೆ, ಇಶಾಂತ್ ಶರ್ಮಾ.

ಮುಂಬೈ ಇಂಡಿಯನ್ಸ್ : ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಕ್ಯಾಮೆರಾನ್ ಗ್ರೀನ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ನೆಹಾಲ್ ವಧೇರಾ, ಹೃತಿಕ್ ಶೋಕೀನ್, ಅರ್ಷದ್ ಖಾನ್, ಪಿಯೂಷ್ ಚಾವ್ಲಾ, ಜೇಸನ್ ಬೆಹ್ರೆಂಡಾರ್ಫ್, ರಿಲೆ ಮೆರೆಡಿತ್. ಇಂಪ್ಯಾಕ್ಟ್ ಪ್ಲೇಯರ್: ಟ್ರಿಸ್ಟಾನ್ ಸ್ಟಬ್ಸ್, ಟಿಮ್ ಡೇವಿಡ್, ಕುಮಾರ್ ಕಾರ್ತಿಕೇಯ, ಅರ್ಜುನ್ ತೆಂಡೂಲ್ಕರ್, ರಮಣದೀಪ್ ಸಿಂಗ್.

Story first published: Tuesday, April 11, 2023, 21:19 [IST]
Other articles published on Apr 11, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+