Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023: ಅಭ್ಯಾಸದ ವೇಳೆ ಭರ್ಜರಿ ಸಿಕ್ಸರ್ ಸಿಡಿಸಿ ಮಿಂಚಿದ ಬೆನ್‌ಸ್ಟೋಕ್ಸ್

IPL 2023: Ben Stokes Brilliant Practice Session With Chennai Super Kings Ahead Of IPL 2023

ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿಯ ಐಪಿಎಲ್‌ಗೆ ಭರ್ಜರಿಯಾಗಿಯೇ ಸಿದ್ಧತೆ ನಡೆಸುತ್ತಿದೆ. ಪ್ರಮುಖ ಆಲ್‌ರೌಂಡರ್ ಗಳಾದ ಮೊಯೀನ್ ಅಲಿ ಮತ್ತು ಬೆನ್‌ಸ್ಟೋಕ್ಸ್ ಸಿಎಸ್‌ಕೆ ತಂಡವನ್ನು ಸೇರಿಕೊಂಡಿದ್ದು ಅಭ್ಯಾಸ ಆರಂಭಿಸಿದ್ದಾರೆ.

ಎಂಎ ಚಿದಂಬರಂ ಅಂಗಳದಲ್ಲಿ ಶುಕ್ರವಾರ ರಾತ್ರಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಮೊದಲ ಅಭ್ಯಾಸದ ಅವಧಿಯಲ್ಲಿ ಬೆನ್ ಸ್ಟೋಕ್ಸ್ ಕೆಲವು ಅದ್ಭುತ ಹೊಡೆತಗಳನ್ನು ಹೊಡೆದರು. ನೆಟ್ ಬೌಲರ್‌ಗಳು ಮತ್ತು ಥ್ರೋಡೌನ್ ಸ್ಪೆಷಲಿಸ್ಟ್‌ಗಳ ಎಸೆತಗಳನ್ನು ಸಿಕ್ಸರ್ ಬಾರಿಸುವ ಮೂಲಕ ತಂಡಕ್ಕೆ ಹೆಚ್ಚಿನ ಆತ್ಮವಿಶ್ವಾಸ ತಂದುಕೊಟ್ಟಿದ್ದಾರೆ.

ಬೆನ್‌ಸ್ಟೋಕ್ಸ್ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ಐಪಿಎಲ್‌ನಲ್ಲಿ ತಮ್ಮ ಅತ್ಯುತ್ತಮ ಆಟವನ್ನು ಮುಂದುವರೆಸುವ ವಿಶ್ವಾಸದಲ್ಲಿದ್ದಾರೆ. ಇಂಗ್ಲೆಂಡ್‌ನಿಂದ ಭಾರತಕ್ಕೆ ಹೊರಟ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ನಿಮ್ಮನ್ನು ಬೇಗ ನೋಡುತ್ತೇನೆ ಎಂದು ಅಭಿಮಾನಿಗಳಿಗೆ ಹೇಳಿದ್ದ ಅವರು ಶುಕ್ರವಾರ ಆಗಲೇ ತಂಡವನ್ನು ಸೇರಿಕೊಂಡು ಅಭ್ಯಾಸ ನಡೆಸಿದರು.

ಅಭ್ಯಾಸದ ಅವಧಿಯಲ್ಲಿ ಬೆನ್ ಸ್ಟೋಕ್ಸ್ ಬ್ಯಾಟಿಂಗ್ ನೋಡಿದ ಸಿಎಸ್‌ಕೆ ಅಭಿಮಾನಿಗಳು ತುಂಬಾ ಸಂತಸಗೊಂಡಿದ್ದಾರೆ. ಸಿಎಸ್‌ಕೆ ತಂಡಕ್ಕಾಗಿ ಸ್ಟೋಕ್ಸ್ ದೊಡ್ಡ ಮೊತ್ತವನ್ನು ಗಳಿಸಿವುದು ಖಚಿತ ಎಂದು ಹೇಳುತ್ತಿದ್ದಾರೆ.

ವಿಡಿಯೋ ಹಂಚಿಕೊಂಡ ಸಿಎಸ್‌ಕೆ ಫ್ರಾಂಚೈಸಿ

ಬೆನ್‌ ಸ್ಟೋಕ್ಸ್ ಅಭ್ಯಾಸ ಮಾಡುತ್ತಿರುವ ವಿಡಿಯೋವನ್ನು ಸಿಎಸ್‌ಕೆ ತಂಡ ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದೆ. ಈ ಟ್ವೀಟ್ ಕೇವಲ ಎರಡು ಗಂಟೆಗಳಲ್ಲಿ 7 ಸಾವಿರಕ್ಕೂ ಅಧಿಕ ಮೆಚ್ಚುಗೆ ಪಡೆದುಕೊಂಡಿದೆ. ವಿಡಿಯೋವನ್ನು ಒಂದು ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಮಾಡಲಾಗಿದೆ.

ಐಪಿಎಲ್ ಮಿನಿ ಹರಾಜಿನಲ್ಲಿ ಬೆನ್‌ಸ್ಟೋಕ್ಸ್ ಅವರನ್ನು ಸಿಎಸ್‌ಕೆ ತಂಡ 16.75 ಕೋಟಿ ರುಪಾಯಿ ನೀಡಿ ಖರೀದಿ ಮಾಡಿತ್ತು. ಮೊಣಕಾಲಿನ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಐಪಿಎಲ್‌ನಲ್ಲಿ ಆಡುವುದು ಅನುಮಾನ ಎನ್ನಲಾಗಿದ್ದರೂ, ಬೆನ್‌ಸ್ಟೋಕ್ಸ್ ಫಿಟ್ ಆಗಿದ್ದು ಐಪಿಎಲ್‌ನಲ್ಲಿ ಆಡಲು ನಿರ್ಧರಿಸಿದ್ದಾರೆ.

IPL 2023: Ben Stokes Brilliant Practice Session With Chennai Super Kings Ahead Of IPL 2023

ಗುಜರಾತ್ ಟೈಟಾನ್ಸ್ ವಿರುದ್ಧ ಗೆಲ್ಲುತ್ತಾ ಸಿಎಸ್‌ಕೆ

ಐಪಿಎಲ್‌ 2023ರ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ವಿರುದ್ಧ ಸೆಣೆಸಲಿದೆ. ಕಳೆದ ಆವೃತ್ತಿಯಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಆಡಿದ ಎರಡೂ ಪಂದ್ಯಗಳಲ್ಲಿ ಸೋಲನುಭವಿಸಿತ್ತು. ಈಗ ಆ ಸೋಲಿಗೆ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಐಪಿಎಲ್ 2023 ರ ಆರಂಭಿಕ ಪಂದ್ಯದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಲಿವೆ. ಐಪಿಎಲ್ 2023 ರ ಆರಂಭಿಕ ಆಟಕ್ಕೆ 100,000 ಕ್ಕೂ ಹೆಚ್ಚು ಅಭಿಮಾನಿಗಳು ಹಾಜರಾಗುವ ನಿರೀಕ್ಷೆಯಿದೆ. ಬಿಸಿಸಿಐ ಈ ಬಾರಿ ಕೂಡ ಅದ್ಧೂರಿ ಉದ್ಘಾಟನಾ ಸಮಾರಂಭವನ್ನು ಆಯೋಜಿಸುತ್ತಿದೆ ಎಂದು ಹೇಳಲಾಗಿದೆ.

ಬೆನ್‌ಸ್ಟೋಕ್ಸ್ ತಂಡವನ್ನು ಸೇರಿಕೊಂಡಿರುವುದು ತಂಡದ ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗದಲ್ಲಿ ಹೆಚ್ಚಿನ ಬಲವನ್ನು ತಂದಿದೆ. ಎಂಎಸ್‌ ಧೋನಿ ಕೂಡ ಸಾಕಷ್ಟು ಸಿದ್ಧತೆ ಮಾಡಿಕೊಂಡಿದ್ದು ಉತ್ತಮ ಪ್ರದರ್ಶನ ನೀಡುವ ವಿಶ್ವಾಸದಲ್ಲಿದ್ದಾರೆ. ಗುಜರಾತ್ ಜೈಂಟ್ಸ್ ಕೂಡ ಸಮರ್ಥ ಆಟಗಾರರಿಂದ ಕೂಡಿದ್ದು, ಮೊದಲನೇ ಪಂದ್ಯದಲ್ಲಿ ರೋಚಕ ಹಣಾಹಣಿಯನ್ನು ನಿರೀಕ್ಷೆ ಮಾಡಲಾಗಿದೆ.

2023ರ ಐಪಿಎಲ್‌ನಲ್ಲಿ ಆಲ್‌ರೌಂಡರ್ ರವೀಂದ್ರ ಜಡೇಜಾ ಮತ್ತೆ ಸಿಎಸ್‌ಕೆ ತಂಡದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯಲ್ಲಿ ಅತ್ಯುತ್ತಮ ಬೌಲಿಂಗ್ ಮತ್ತು ಬ್ಯಾಟಿಂಗ್ ಮಾಡಿರುವ ಅವರು ಈ ಬಾರಿ ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡುವ ವಿಶ್ವಾಸದಲ್ಲಿದ್ದಾರೆ.

Story first published: Friday, March 24, 2023, 23:52 [IST]
Other articles published on Mar 24, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+