For Quick Alerts
ALLOW NOTIFICATIONS  
For Daily Alerts
 

IPL 2023: ಸಿಎಸ್‌ಕೆ ಅಭಿಮಾನಿಗಳಿಗೆ ಶುಭ ಸುದ್ದಿ ನೀಡಿದ ಬೆನ್‌ಸ್ಟೋಕ್ಸ್

IPL 2023: Ben Stokes Has A Message For Csk Fans:See You Soon! The All-rounder Is On His Way For Ipl

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023 ರ ಆವೃತ್ತಿಗಾಗಿ ಎಲ್ಲಾ ತಂಡಗಳು ಈಗಾಗಲೇ ಸಿದ್ಧತೆ ಆರಂಭಿಸಿದೆ. ಪ್ರಮುಖ ಆಟಗಾರರು ಈಗಾಗಲೇ ತಂಡವನ್ನು ಸೇರಿಕೊಳ್ಳುತ್ತಿದ್ದು, ಅಭ್ಯಾಸ ಮಾಡುತ್ತಿದ್ದಾರೆ. ಸಿಎಸ್‌ಕೆ ತಂಡದ ಪ್ರಮುಖ ಆಲ್‌ರೌಂಡರ್ ಬೆನ್‌ ಸ್ಟೋಕ್ಸ್ ಅಭಿಮಾನಿಗಳಿಗೆ ಸಂತಸದ ಸುದ್ಧಿ ನೀಡಿದ್ದಾರೆ.

ಡಿಸೆಂಬರ್ 2022ರಲ್ಲಿ ನಡೆದ ಐಪಿಎಲ್ ಮಿನಿ ಹರಾಜಿನಲ್ಲಿ ಬೆನ್‌ಸ್ಟೋಕ್ಸ್‌ರನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡ 16.25 ಕೋಟಿ ರುಪಾಯಿ ನೀಡಿ ಖರೀದಿ ಮಾಡಿತ್ತು. ಇದರೊಂದಿಗೆ ಸಿಎಸ್‌ಕೆ ತಂಡ ಈ ಬಾರಿ ಸಾಕಷ್ಟು ಬಲಿಷ್ಠವಾಗಿ ಕಾಣುತ್ತಿದೆ, ಜಡೇಜಾ, ಸ್ಟೋಕ್ಸ್‌ ತಂಡದ ಪ್ರಮುಖ ಆಲ್‌ರೌಂಡರ್ ಗಳಾಗಿದ್ದಾರೆ.

ಐಪಿಎಲ್ ಆರಂಭಕ್ಕೆ ಒಂದು ತಿಂಗಳ ಮುನ್ನವೇ ಎಂಎಸ್‌ ಧೋನಿ ಸಿದ್ಧತೆ ಆರಂಭಿಸಿದ್ದಾರು. ಅಜಿಂಕ್ಯ ರಹಾನೆ, ರುತುರಾಜ್ ಗಾಯಕ್ವಾಡ್ ಸೇರಿದಂತೆ ಪ್ರಮುಖ ಆಟಗಾರರು ಈಗಾಗಲೇ ತಂಡವನ್ನು ಸೇರಿಕೊಂಡಿದ್ದಾರೆ. ಈಗ ಬೆನ್‌ಸ್ಟೋಕ್ಸ್‌ ಕೂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೇರಿಕೊಳ್ಳುವ ಹಾದಿಯಲ್ಲಿದ್ದಾರೆ.

ತಾವು ಭಾರತಕ್ಕೆ ಆಗಮಿಸುತ್ತಿರುವ ಬಗ್ಗೆ ಬೆನ್‌ಸ್ಟೋಕ್ಸ್ ಮಹತ್ವದ ಸಂದೇಶ ನೀಡಿದ್ದಾರೆ. ಗುರುವಾರ ತಮ್ಮ ಟ್ವಿಟರ್ ಖಾತೆಯಲ್ಲಿ ಸಿಎಸ್‌ಕೆ ಅಭಿಮಾನಿಗಳಿಗೆ ಶುಭಸುದ್ದಿ ನೀಡಿದ್ಧಾರೆ. ಇಂಗ್ಲೆಂಡ್‌ನಿಂದ ಹೊರಟಿದ್ದು ಚೆನ್ನೈಗೆ ಆಗಮಿಸುತ್ತಿರುವಾಗಿ ತಿಳಿಸಿದ್ದಾರೆ.

IPL 2023: Ben Stokes Has A Message For Csk Fans:See You Soon! The All-rounder Is On His Way For Ipl

ಆದಷ್ಟು ಬೇಗ ನೋಡುತ್ತೇನೆ ಎಂದ ಸ್ಟೋಕ್ಸ್

ಕಳೆದ ಕೆಲವು ವಾರಗಳಿಂದ ಬೆನ್‌ಸ್ಟೋಕ್ಸ್ ಮೊಣಕಾಳಿನ ಸಮಸ್ಯೆಗಳಿಂದಾಗಿ ಈ ಬಾರಿ ಐಪಿಎಲ್‌ನಲ್ಲಿ ಆಡುವ ಬಗ್ಗೆ ಅನುಮಾನ ಇತ್ತು. ಮೊಣಕಾಲಿನ ಸಮಸ್ಯೆಯಿಂದಾಘಿ ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ ಬೌಲಿಂಗ್‌ ಮಾಡುವುದನ್ನು ಕೂಡ ತಪ್ಪಿಸಿದ್ದರು.

ಜೂನ್‌ನಲ್ಲಿ ಆಶಸ್ ಸರಣಿ ಇರುವ ಕಾರಣ ಬೆನ್‌ಸ್ಟೋಕ್ಸ್ ತಮ್ಮ ಫಿಟ್‌ನೆಸ್‌ ಸಮಸ್ಯೆಗಳ ಕುರಿತು ಗಮನ ಹರಿಸಲು, ಐಪಿಎಲ್ 2023ರಲ್ಲಿ ಭಾಗವಹಿಸುವ ಬಗ್ಗೆ ಮರುಪರಿಶೀಲನೆ ಮಾಡಬಹುದು ಎಂದು ಹಲವರು ಭಾವಿಸಿದ್ದರು.

ಆದರೆ ಬೆನ್‌ಸ್ಟೋಕ್ಸ್ ಇತ್ತೀಚೆಗೆ ಸಿಎಸ್‌ಕೆ ಮುಖ್ಯ ಕೋಚ್ ಸ್ಟೀಫನ್ ಫ್ಲೆಮಿಂಗ್ ಅವರ ಫಿಟ್‌ನೆಸ್ ಬಗ್ಗೆ ನವೀಕರಿಸಿದ್ದಾರೆ ಮತ್ತು ಐಪಿಎಲ್‌ನಲ್ಲಿ ಆಡುವುದಾಗಿ ಹೇಳುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. "ನಾನು ಐಪಿಎಲ್‌ನಲ್ಲಿ ಭಾಗವಹಿಸಲು ಹೋಗುತ್ತಿದ್ದೇನೆ, ಸ್ಟೀಫನ್ ಫ್ಲೆಮಿಂಗ್ ಅವರೊಂದಿಗೆ ಮಾತನಾಡಿದ್ದೇನೆ, ನನ್ನ ಫಿಟ್‌ನೆಸ್ ಬಗ್ಗೆ ಅವರು ಸಂಪೂರ್ಣವಾಗಿ ತಿಳಿದುಕೊಂಡಿದ್ದಾರೆ. ನಾನು ಸುಳ್ಳು ಹೇಳಲು ಬಯಸುವುದಿಲ್ಲ, ನನ್ನ ಫಿಟ್‌ನೆಸ್ ನಾನು ಬಯಸಿದಂತೆ ಪ್ರದರ್ಶನ ನೀಡುವುದನ್ನು ತಡೆಯುತ್ತಿದೆ" ಎಂದು ಹೇಳಿದರು.

IPL 2023: Ben Stokes Has A Message For Csk Fans:See You Soon! The All-rounder Is On His Way For Ipl

ಸಿಎಸ್‌ಕೆ-ಗುಜರಾಜ್ ಜೈಂಟ್ಸ್ ಮುಖಾಮುಖಿ

ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಐಪಿಎಲ್ ಉದ್ಘಾಟನಾ ಪಂದ್ಯ ಮಾರ್ಚ್ 31ರಂದು ಅಹದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಸಂಜೆ 7.30ಕ್ಕೆ ಪಂದ್ಯ ಆರಂಭವಾಗಲಿದೆ.

ಮೊದಲನೇ ಪಂದ್ಯಕ್ಕಾಗಿ ಎಲ್ಲಾ ಟಿಕೆಟ್‌ಗಳು ಮಾರಾಟವಾಗಿದ್ದು, ಒಂದು ಲಕ್ಷಕ್ಕೂ ಅಧಿಕ ಮಂದಿ ಉದ್ಘಾಟನಾ ಪಂದ್ಯಕ್ಕೆ ಸಾಕ್ಷಿಯಾಗಲಿದ್ದಾರೆ. ಎಂಎಸ್ ಧೋನಿ ಅವರಿಗೆ ಇದು ಕೊನೆಯ ಐಪಿಎಲ್ ಎಂದು ಹೇಳಲಾಗಿದ್ದು, ಅವರ ಆಟವನ್ನು ನೋಡಲು ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ.

ಕಳೆದ ಆವೃತ್ತಿಯಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದ ಸಿಎಸ್‌ಕೆ ಈ ಬಾರಿ ಉತ್ತಮ ಪ್ರದರ್ಶನ ನೀಡುವ ವಿಶ್ವಾಸದಲ್ಲಿದೆ. ಈ ಬಾರಿ ರವೀಂದ್ರ ಜಡೇಜಾ ಅವರನ್ನು ತಂಡದ ನಾಯಕರನ್ನಾಗಿ ಮತ್ತೆ ನೇಮಕ ಮಾಡಲಾಗಿದೆ.

Story first published: Thursday, March 23, 2023, 18:14 [IST]
Other articles published on Mar 23, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+