For Quick Alerts
ALLOW NOTIFICATIONS  
For Daily Alerts
 

IPL 2023: ಕೆಕೆಆರ್ ತಂಡಕ್ಕೆ ದೊಡ್ಡ ಹಿನ್ನಡೆ; ಆರಂಭಿಕ ಪಂದ್ಯಗಳನ್ನು ಕಳೆದುಕೊಳ್ಳಲಿರುವ ಶ್ರೇಯಸ್ ಅಯ್ಯರ್

IPL 2023: Big Setback For KKR; Injured Shreyas Iyer Will Miss The Some Opening Matches

ಬೆನ್ನಿನ ನೋವಿನಿಂದಾಗಿ ಭಾರತ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟರ್ ಶ್ರೇಯಸ್ ಅಯ್ಯರ್ ಅವರು ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ.

ಇದೇ ವೇಳೆ, ಮಾರ್ಚ್ 31ರಿಂದ ಆರಂಭಗೊಳ್ಳಲಿರುವ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 16ನೇ ಸೀಸನ್‌ನ ಕೆಲವು ಪಂದ್ಯಗಳನ್ನು ಸಹ ಶ್ರೇಯಸ್ ಅಯ್ಯರ್ ತಪ್ಪಿಸಿಕೊಳ್ಳಬಹುದು. ಇದು ಶ್ರೇಯಸ್ ಅಯ್ಯರ್ ನಾಯಕನಾಗಿರುವ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ದೊಡ್ಡ ಹಿನ್ನಡೆಯಾಗಲಿದೆ.

ಮಧ್ಯಮ ಕ್ರಮಾಂಕದ ಸ್ಟಾರ್ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಅಹಮದಾಬಾದ್ ಪಂದ್ಯದ 4ನೇ ದಿನದಂದು ಬ್ಯಾಟಿಂಗ್ ಮಾಡಲು ಸಿದ್ಧರಾಗಿದ್ದರು. ಆದರೆ ಅವರ ಬೆನ್ನಿನ ಗಾಯದಿಂದಾಗಿ ಮೈದಾನಕ್ಕಿಳಿಯಲು ಸಾಧ್ಯವಾಗಲಿಲ್ಲ.

ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿಯ ಪ್ರಕಾರ, ಶ್ರೇಯಸ್ ಅಯ್ಯರ್ ನಡೆಯಲು ಕಷ್ಟಪಡುತ್ತಿದ್ದಾರೆ. ಇದರಿಂದಾಗಿ ಐಪಿಎಲ್ ಪಂದ್ಯಾವಳಿಯ ಆರಂಭಿಕ ಪಂದ್ಯಗಳನ್ನು ತಪ್ಪಿಸಿಕೊಳ್ಳಬಹುದು. ಒಂದು ವೇಳೆ ಶ್ರೇಯಸ್ ಅಯ್ಯರ್ ಶಸ್ತ್ರಚಿಕಿತ್ಸೆಗೆ ಒಳಗಾದರೆ, ಮೂರ್ನಾಲ್ಕು ತಿಂಗಳುಗಳವರೆಗೆ ಕ್ರಿಕೆಟ್‌ನಿಂದ ಹೊರಗುಳಿಯಬಹುದು.

IPL 2023: Big Setback For KKR; Injured Shreyas Iyer Will Miss The Some Opening Matches

ಕಳೆದ ಕೆಲವು ತಿಂಗಳಿನಿಂದ ಬೆನ್ನಿನ ನೋವಿನಿಂದಾಗಿ ಶ್ರೇಯಸ್ ಅಯ್ಯರ್ ಈ ಹಿಂದೆ ನ್ಯೂಜಿಲೆಂಡ್ ವಿರುದ್ಧದ ಸ್ವದೇಶಿ ಏಕದಿನ ಸರಣಿಯ ಮೂರು ಪಂದ್ಯಗಳಲ್ಲಿ ಆಡಿರಲಿಲ್ಲ.

ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ತಂಡದಿಂದ ಹೊರಗುಳಿದ ನಂತರ, ಶ್ರೇಯಸ್ ಅಯ್ಯರ್ 2ನೇ ಮತ್ತು 3ನೇ ಟೆಸ್ಟ್ ಪಂದ್ಯಗಳಲ್ಲಿ ತಂಡಕ್ಕೆ ಮರಳಿದರು. ಇನ್ನು 4ನೇ ಟೆಸ್ಟ್ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಸಿದ್ಧರಾಗಿದ್ದರು. ಇದೇ ವೇಳೆ ದಿಢೀರ್ ಆಗಿ ಕಾಣಿಸಿಕೊಂಡ ಬೆನ್ನಿನ ನೋವು ಅವರನ್ನು ಮೈದಾನದಿಂದ ಹೊರಗೆ ಕುಳಿತುಕೊಳ್ಳುವಂತೆ ಮಾಡಿತು.

ಶ್ರೇಯಸ್ ಅಯ್ಯರ್ ನಾಯಕನಾಗಿರುವ ಕೋಲ್ಕತ್ತಾ ನೈಟ್ ರೈಡರ್ಸ್‌ಗೆ (ಕೆಕೆಆರ್) ಈ ಸುದ್ದಿ ದೊಡ್ಡ ಹಿನ್ನಡೆ ಎಂದೇ ಹೇಳಬಹುದು. ಐಪಿಎಲ್ 2022ರ ಐಪಿಎಲ್ ಮೆಗಾ ಹರಾಜಿನಲ್ಲಿ ಕೆಕೆಆರ್ ಫ್ರಾಂಚೈಸಿ 12.25 ಕೋಟಿ ರೂಪಾಯಿಗೆ ಖರೀದಿಸಿತ್ತು.

IPL 2023: Big Setback For KKR; Injured Shreyas Iyer Will Miss The Some Opening Matches

ಕಳೆದ 2022ರ ಐಪಿಎಲ್ ಋತುವಿನಲ್ಲಿ ಪ್ಲೇಆಫ್ ಹಂತಕ್ಕೇರಲು ವಿಫಲವಾದ ಕೆಕೆಆರ್ ತಂಡ, ಇದೀಗ 2023ರ ಐಪಿಎಲ್ ಪೂರ್ಣ ಋತುವಿನಲ್ಲಿ ಶ್ರೇಯಸ್ ಅಯ್ಯರ್ ಭಾಗವಹಿಸಲು ಸಾಧ್ಯವಾಗದಿದ್ದರೆ, ಬದಲಿ ಆಟಗಾರನನ್ನು ಹುಡುಕುವ ಮತ್ತು ಹೊಸ ನಾಯಕನನ್ನು ಘೋಷಿಸುವ ಅವಶ್ಯಕತೆ ಇದೆ.

2023ರ ಐಪಿಎಲ್‌ಗಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ತಮ್ಮ ಕಾರ್ಯತಂತ್ರವನ್ನು ತ್ವರಿತವಾಗಿ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಕೆಕೆಆರ್ ಹೊಸ ಮುಖ್ಯ ಕೋಚ್ ಚಂದ್ರಕಾಂತ್ ಪಂಡಿತ್ ಹೇಳಿದ್ದಾರೆ.

ಆತಿಥೇಯ ಭಾರತ ಮತ್ತು ಪ್ರವಾಸಿ ಆಸ್ಟ್ರೇಲಿಯಾ ನಡುವಿನ ಮೂರು ಏಕದಿನ ಪಂದ್ಯಗಳು ಕ್ರಮವಾಗಿ ಮಾರ್ಚ್ 17ರಂದು ಮುಂಬೈ, ಮಾರ್ಚ್ 19ರಂದು ವಿಶಾಖಪಟ್ಟಣ ಮತ್ತು ಮಾರ್ಚ್ 22ರಂದು ಚೆನ್ನೈನಲ್ಲಿ ನಡೆಯಲಿವೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಶೀಘ್ರದಲ್ಲೇ ಏಕದಿನ ಸರಣಿಯಿಂದ ಶ್ರೇಯಸ್ ಅಯ್ಯರ್ ಅನುಪಸ್ಥಿತಿಯ ಬಗ್ಗೆ ಹೇಳಿಕೆಯನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ.

ಅಂತಿಮವಾಗಿ, ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಿಂದ ಶ್ರೇಯಸ್ ಅಯ್ಯರ್ ಕೆಲವು ಐಪಿಎಲ್ ಪಂದ್ಯಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಶ್ರೇಯಸ್ ಅಯ್ಯರ್ ಗಾಯದ ಸಮಸ್ಯೆ ಭಾರತ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳಿಗೆ ದೊಡ್ಡ ಹಿನ್ನಡೆ ಎನ್ನಬಹುದು.

ಶ್ರೇಯಸ್ ಅಯ್ಯರ್ ಎಷ್ಟು ಸಮಯದವರೆಗೆ ಕ್ರಿಕೆಟ್‌ನಿಂದ ಹೊರಗುಳಿಯುತ್ತಾರೆ ಮತ್ತು ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆಯೇ ಎಂಬುದನ್ನು ನೋಡಬೇಕಾಗಿದೆ.

Story first published: Monday, March 13, 2023, 20:29 [IST]
Other articles published on Mar 13, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+