IPL 2023: ಮುಂಬೈ ಇಂಡಿಯನ್ಸ್‌ಗೆ ಆಘಾತ; ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ ಸ್ಟಾರ್ ಬೌಲರ್ ಆಡುವುದು ಅನುಮಾನ!
ಶನಿವಾರ, ಏಪ್ರಿಲ್ 8ರ ಸಂಜೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುವ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 12ನೇ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಮತ್ತು ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ.
2023ರ ಐಪಿಎಲ್‌ನ ಸಂಪೂರ್ಣ ಪಂದ್ಯಾವಳಿಯಿಂದ ಈಗಾಗಲೇ ಸ್ಟಾರ್ ಬೌಲರ್ ಜಸ್ಪ್ರೀತ್ ಬುಮ್ರಾ ಅವರನ್ನು ಕಳೆದುಕೊಂಡಿರುವ ಮುಂಬೈ ಇಂಡಿಯನ್ಸ್ ತಂಡಕ್ಕೆ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಹೈ-ವೋಲ್ಟೇಜ್ ಪಂದ್ಯದಲ್ಲಿ ಜೋಫ್ರಾ ಆರ್ಚರ್ ಅವರನ್ನು ಕಳೆದುಕೊಳ್ಳುವ ಆತಂಕದಲ್ಲಿದೆ.

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಅಭ್ಯಾಸದ ವೇಳೆ ಮೊಣಕೈ ಗಾಯದಿಂದಾಗಿ ಜೋಫ್ರಾ ಆರ್ಚರ್ ಅನುಪಸ್ಥಿತಿಯು ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದ ಮೊದಲ ಗೆಲುವಿನ ಆಸೆಗೆ ದೊಡ್ಡ ಹಿನ್ನಡೆಯಾಗಲಿದೆ.
ವಾಂಖೆಡೆ ಸ್ಟೇಡಿಯಂನಲ್ಲಿ ಉಪಸ್ಥಿತರಿದ್ದ ಸಿಎಸ್‌ಕೆ ಮಾಜಿ ಕ್ರಿಕೆಟಿಗ ಸುಬ್ರಮಣ್ಯಮ್ ಬದ್ರಿನಾಥ್, ವೇಗಿ ಜೋಫ್ರಾ ಆರ್ಚರ್ ಅವರ ಗಾಯವು ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ ಆಡುವುದನ್ನು ತಡೆಯಬಹುದು ಎಂದು ವರದಿ ಮಾಡಿದ್ದಾರೆ.
ಜೋಫ್ರಾ ಆರ್ಚರ್ ಈ ಪಂದ್ಯದಲ್ಲಿ ಆಡದಿದ್ದರೆ, ತಂಡದಲ್ಲಿ ಬೇರೆ ಯಾವುದೇ ಅನುಭವಿ ವೇಗಿ ಇಲ್ಲದ ಕಾರಣ ಮುಂಬೈ ಇಂಡಿಯನ್ಸ್ ತಂಡಕ್ಕೆ ದೊಡ್ಡ ನಷ್ಟವಾಗಲಿದೆ. ಆರ್ಚರ್ ಸ್ಥಾನವನ್ನು ತುಂಬಲು ಆಸ್ಟ್ರೇಲಿಯಾದ ಬೌಲರ್ ರಿಲೆ ಮೆರೆಡಿತ್ ಅಥವಾ ಸಂದೀಪ್ ವಾರಿಯರ್ ಅವರನ್ನು ಮುಂಬೈ ಇಂಡಿಯನ್ಸ್ ತಂಡದ ಆಡುವ 11ರ ಬಳಗದಲ್ಲಿ ಆಡಿಸುವ ಸಾಧ್ಯತೆ ಇದೆ.

ಐಪಿಎಲ್ 2022ರ ಮೆಗಾ ಹರಾಜಿನಲ್ಲಿ ಜೋಫ್ರಾ ಆರ್ಚರ್ ಅವರನ್ನು ಮುಂಬೈ ಇಂಡಿಯನ್ಸ್ ತಂಡ 8 ಕೋಟಿ ರೂ.ಗೆ ಖರೀದಿಸಿತ್ತು. ಆದರೆ, ಗಾಯದ ಕಾರಣದಿಂದಾಗಿ ಇಡೀ ಋತುವಿನಲ್ಲಿ ಅಲಭ್ಯವಾಗಿದ್ದರು.
ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿರುದ್ಧದ ಮುಂಬೈ ಇಂಡಿಯನ್ಸ್ ತಂಡದ ಮೊದಲ ಪಂದ್ಯದಲ್ಲಿ ಜೋಫ್ರಾ ಆರ್ಚರ್ ಪದಾರ್ಪಣೆ ಮಾಡಿದರು. ಆದರೆ ಯಾವುದೇ ವಿಕೆಟ್ ಪಡೆಯಲು ಸಾಧ್ಯವಾಗದೇ, 4 ಓವರ್‌ಗಳಲ್ಲಿ 33 ರನ್‌ಗಳನ್ನು ಬಿಟ್ಟುಕೊಟ್ಟರು. ಅಂತಿಮವಾಗಿ ಮುಂಬೈ ಎಂಟು ವಿಕೆಟ್‌ಗಳಿಂದ ಸೋಲು ಕಂಡಿತು.
ಇದೀಗ ಮುಂಬೈ ಇಂಡಿಯನ್ಸ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ತಮ್ಮ ತವರಿನ ಪ್ರೇಕ್ಷಕರ ಎದುರು ತಮ್ಮ ಮೊದಲ ಗೆಲುವಿನ ನಿರೀಕ್ಷೆಯಲ್ಲಿದೆ. 2023ರ ಐಪಿಎಲ್‌ನ ಪಾಯಿಂಟ್ ಪಟ್ಟಿಯಲ್ಲಿ ಎರಡು ಅಂಕಗಳನ್ನು ಪಡೆದುಕೊಳ್ಳಲು ಆಶಿಸುತ್ತಿದೆ.

ಚೆನ್ನೈ ಸೂಪರ್ ಕಿಂಗ್ಸ್ vs ಮುಂಬೈ ಇಂಡಿಯನ್ಸ್ ಸಂಭಾವ್ಯ ಆಡುವ 11ರ ಬಳಗ
ಚೆನ್ನೈ ಸೂಪರ್ ಕಿಂಗ್ಸ್ ತಂಡ: ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಮೊಯಿನ್ ಅಲಿ, ಅಂಬಟಿ ರಾಯುಡು, ಬೆನ್ ಸ್ಟೋಕ್ಸ್ / ಡ್ವೈನ್ ಪ್ರಿಟೋರಿಯಸ್, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ/ ವಿಕೆಟ್ ಕೀಪರ್), ಶಿವಂ ದುಬೆ, ದೀಪಕ್ ಚಾಹರ್, ಸಿಸಂಡಾ ಮಗಲ / ಮಹೀಶ್ ತೀಕ್ಷಣ ಮತ್ತು ರಾಜವರ್ಧನ್ ಹಂಗರ್ಗೇಕರ್.
ಮುಂಬೈ ಇಂಡಿಯನ್ಸ್ ತಂಡ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಕ್ಯಾಮೆರಾನ್ ಗ್ರೀನ್, ತಿಲಕ್ ವರ್ಮಾ, ಟಿಮ್ ಡೇವಿಡ್, ನೆಹಾಲ್ ವಧೇರಾ, ಶಾಮ್ಸ್ ಮುಲಾನಿ / ಹೃತಿಕ್ ಶೋಕೀನ್, ಪಿಯೂಷ್ ಚಾವ್ಲಾ, ಅರ್ಷದ್ ಖಾನ್, ಜೋಫ್ರಾ ಆರ್ಚರ್ / ರಿಲೆ ಮೆರೆಡಿತ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications
