For Quick Alerts
ALLOW NOTIFICATIONS  
For Daily Alerts
 

IPL 2023: ಆರ್‌ಸಿಬಿ ತಂಡಕ್ಕೆ ಭಾರೀ ಹಿನ್ನಡೆ; ಐಪಿಎಲ್‌ನಿಂದ ಹೊರಬಿದ್ದ ಸ್ಟಾರ್ ಆಲ್‌ರೌಂಡರ್!

IPL 2023: Big Setback For RCB Team; Star All-rounder Will Jacks Ruled Out Of IPL

2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 16ನೇ ಸೀಸನ್ ಆರಂಭಕ್ಕೆ ದಿನಗಣನೆ ಆರಂಬವಾಗುತ್ತಿದ್ದಂತೆಯೇ, ಗಾಯಳುಗಳ ಸಂಖ್ಯೆಯೂ ಹೆಚ್ಚುತ್ತಿದೆ. ಮುಂಬೈ ಇಂಡಿಯನ್ಸ್, ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಕ್ಕೆ ಗಾಯದ ಸಮಸ್ಯೆ ಎದುರಾಗಿದೆ.

ಇಂಗ್ಲೆಂಡ್‌ನ ಆಲ್‌ರೌಂಡರ್ ವಿಲ್ ಜಾಕ್ಸ್ ಗಾಯದ ಕಾರಣದಿಂದಾಗಿ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಿಂದ ಹೊರಬಿದ್ದಿದ್ದಾರೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ನಡೆದ ಐಪಿಎಲ್ ಆಟಗಾರರ ಹರಾಜಿನಲ್ಲಿ ವಿಲ್ ಜಾಕ್ಸ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ 3.2 ಕೋಟಿ ರೂ.ಗೆ ಖರೀದಿಸಿತ್ತು.

ಮೀರ್‌ಪುರದಲ್ಲಿ ಬಾಂಗ್ಲಾದೇಶದ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುತ್ತಿದ್ದಾಗ ವಿಲ್ ಜಾಕ್ಸ್ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು. ಈ ವಾರದ ಆರಂಭದಲ್ಲಿ ತಜ್ಞ ವೈದ್ಯರೊಂದಿಗೆ ಸ್ಕ್ಯಾನ್‌ ಮತ್ತು ಸಮಾಲೋಚನೆಯ ನಂತರ ಯುವ ಆಲ್‌ರೌಂಡರ್ 2023ರ ಐಪಿಎಲ್‌ನಿಂದ ಹೊರಬರುವಂತೆ ಮಾಡಿದೆ.

ಈ ವರ್ಷದ ಅಕ್ಟೋಬರ್-ನವೆಂಬರ್‌ನಲ್ಲಿ ಭಾರತದಲ್ಲಿ ನಡೆಯಲಿರುವ 2023ರ ಏಕದಿನ ವಿಶ್ವಕಪ್‌ ಟೂರ್ನಿಗಾಗಿ ಇಂಗ್ಲೆಂಡ್‌ ರಾಷ್ಟ್ರೀಯ ತಂಡದಲ್ಲಿ ಆಡುವ ಅವಕಾಶವನ್ನು ಪಡೆಯಲಿದ್ದರು. ಹೀಗಾಗಿ ಭಾರತದ ಪರಿಸ್ಥಿತಿಗೆ ಹೊಂದಿಕೊಳ್ಳಲು ಐಪಿಎಲ್ ಪಂದ್ಯಾವಳಿಯಲ್ಲಿ ಭಾಗವಹಿಸಲು ವಿಲ್ ಜಾಕ್ಸ್ ಆಶಿಸಿದ್ದರಿಂದ ಇದು ದೊಡ್ಡ ಹಿನ್ನಡೆಯಾಗಿದೆ.

IPL 2023: Big Setback For RCB Team; Star All-rounder Will Jacks Ruled Out Of IPL

ಇಎಸ್‌ಪಿಎನ್ ಕ್ರಿಕ್‌ಇನ್ಫೋ ವರದಿಯ ಪ್ರಕಾರ, ಆರ್‌ಸಿಬಿ ತಂಡವು ವಿಲ್ ಜಾಕ್ಸ್ ಅವರ ಸಂಭಾವ್ಯ ಬದಲಿ ಆಟಗಾರನಾಗಿ ನ್ಯೂಜಿಲೆಂಡ್ ಆಲ್‌ರೌಂಡರ್ ಮೈಕೆಲ್ ಬ್ರೇಸ್‌ವೆಲ್ ಅವರನ್ನು ಆಯ್ಕೆ ಮಾಡಲು ಚರ್ಚೆ ನಡೆಸುತ್ತಿದೆ.

1 ಕೋಟಿ ರೂ. ಮೂಲ ಬೆಲೆಯೊಂದಿಗೆ ಐಪಿಎಲ್ ಹರಾಜಿನಲ್ಲಿ ಹೆಸರು ನೋಂದಾಯಿಸಿದ್ದ ಮೈಕೆಲ್ ಬ್ರೇಸ್‌ವೆಲ್ ಅವರನ್ನು ಯಾವುದೇ ತಂಡ ಖರೀದಿಸಿರಲಿಲ್ಲ. ಏಕೆಂದರೆ, ಅವರು ಭಾರತೀಯ ಟಿ20 ಲೀಗ್‌ನಲ್ಲಿ ಈ ಹಿಂದಿನ ಅನುಭವವನ್ನು ಹೊಂದಿರಲಿಲ್ಲ. ಆದರೆ, ಭಾರತಕ್ಕೆ ನ್ಯೂಜಿಲೆಂಡ್ ಪ್ರವಾಸದ ವೇಳೆ ಅದ್ಭುತವಾದ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾರೆ.

ಬಾಂಗ್ಲಾದೇಶ ಪ್ರವಾಸದಲ್ಲಿ ಏಕದಿನ ಪದಾರ್ಪಣೆ ಮಾಡಿದ ವಿಲ್ ಜಾಕ್ಸ್
ಬಾಂಗ್ಲಾದೇಶ ಪ್ರವಾಸ ಕೈಗೊಂಡಿರುವ ಇಂಗ್ಲೆಂಡ್ ತಂಡದಲ್ಲಿ ವಿಲ್ ಜಾಕ್ಸ್ ತಮ್ಮ ಚೊಚ್ಚಲ ಏಕದಿನ ಪಂದ್ಯಕ್ಕೆ ಪ್ರವೇಶಿಸಿದರು. ಗಾಯಕ್ಕೆ ತುತ್ತಾಗುವ ಮುನ್ನ ವಿಲ್ ಜಾಕ್ಸ್ ಮೊದಲ ಎರಡು ಏಕದಿನ ಪಂದ್ಯಗಳನ್ನು ಆಡಿದರು. ಗಮನಾರ್ಹ ಸಂಗತಿಯೆಂದರೆ, ಜೋಸ್ ಬಟ್ಲರ್ ನಾಯಕತ್ವದ ಇಂಗ್ಲೆಂಡ್ ಏಕದಿನ ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡಿದೆ.

ವಿಲ್ ಜಾಕ್ಸ್ ಹೊರತುಪಡಿಸಿ ಐಪಿಎಲ್ ಹರಾಜಿನಲ್ಲಿ ಆರ್‌ಸಿಬಿ ತಂಡವು ಇಂಗ್ಲೆಂಡ್‌ನ ಮತ್ತೊಬ್ಬ ಆಟಗಾರ ರೀಸ್ ಟೋಪ್ಲೆ ಅವರನ್ನು ಖರೀದಿಸಿದೆ. ಬಾಂಗ್ಲಾದೇಶ ವಿರುದ್ಧದ ವೈಟ್ ಬಾಲ್ ಸರಣಿಯ ವೇಳೆ ಸಣ್ಣ ಪುಟ್ಟ ಗಾಯಗಳಿಂದಾಗಿ ರೀಸ್ ಟೋಪ್ಲೆ ಬೆಂಚ್ ಕಾಯಿಸಿದರು. ಆದರೆ, 16ನೇ ಐಪಿಎಲ್ ಋತುವಿನ ಆರಂಭದ ವೇಳೆಗೆ ಫಿಟ್ ಆಗುವ ನಿರೀಕ್ಷೆಯಿದೆ.

ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಐಪಿಎಲ್ 2023ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಏಪ್ರಿಲ್ 2ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ತಮ್ಮ ಅಭಿಯಾನವನ್ನು ಪ್ರಾರಂಭಿಸಲಿದೆ.

ಇದಕ್ಕೂ ಮುನ್ನ ಐಪಿಎಲ್‌ನ 16ನೇ ಆವೃತ್ತಿಗೆ ಮಾರ್ಚ್ 31ರಂದು ಅದ್ಧೂರಿ ಚಾಲನೆ ಸಿಗಲಿದ್ದು, ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ಮತ್ತು ಮಾಜಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದೆ.

Story first published: Thursday, March 16, 2023, 2:55 [IST]
Other articles published on Mar 16, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+