For Quick Alerts
ALLOW NOTIFICATIONS  
For Daily Alerts
 

Virat Kohli: ಮತ್ತೆ ನಾಯಕನಾಗಿ ಮೈದಾನಕ್ಕಿಳಿದ ವಿರಾಟ್ ಕೊಹ್ಲಿ: ನೆಟ್ಟಿಗರ ಭಾವುಕ ಪ್ರತಿಕ್ರಿಯೆ!

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಇಂದು ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದ ಟಾಸ್ ಪ್ರಕ್ರಿಯೆ ಸಂದರ್ಭದಲ್ಲಿ ಆರ್‌ಸಿಬಿ ಅಭಿಮಾನಿಗಳು ಹಾಗೂ ವಿರಾಟ್ ಕೊಹ್ಲಿ ಅಭಿಮಾನಿಗಳು ನಿರೀಕ್ಷಿಸದ ಅಚ್ಚರಿಯೊಂದು ಕಾದಿತ್ತು. ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಆರ್‌ಸಿಬಿ ತಂಡವನ್ನು ಮುನ್ನಡೆಸುವ ಜವಾಬ್ಧಾರಿ ವಹಿಸಿಕೊಂಡಿದ್ದರು.

ವಿರಾಟ್ ಕೊಹ್ಲಿ 2022ರ ಐಪಿಎಲ್ ಟೂರ್ನಿಯ ಆರಂಭಕ್ಕೂ ಮುನ್ನ ನಾಯಕತ್ವ ತ್ಯಜಿಸಿದ್ದರು. ಹೀಗಾಗಿ ಫಾಫ್ ಡು ಪ್ಲೆಸಿಸ್ ಕಳೆದ ವರ್ಷದ ಆವೃತ್ತಿಯಿಂದ ಆರ್‌ಸಿಬಿ ತಂಡವನ್ನು ಮುನ್ನಡೆಸಿಕೊಂಡು ಬರುತ್ತಿದ್ದಾರೆ. ವಿರಾಟ್ ಕೊಹ್ಲಿ ಅನುಭವಿ ಆಟಗಾರನಾಗಿ ನಾಯಕನಿಗೆ ಸಾಥ್ ನೀಡುತ್ತಿದ್ದಾರೆ. ಆದರೆ ಪಂಜಾಬ್ ಕಿಂಗ್ಸ್ ತಂಡದ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಮತ್ತೆ ನಾಯಕನಾಗಿ ಕಣಕ್ಕಿಯುವ ಮೂಲಕ ಅಭಿಮಾನಿಗಳ ಸಂಭ್ರಮಕ್ಕೆ ಕಾರಣವಾದರು.

IPL 2023: Captain Virat Kohli is back: fans emotional after Kohli led RCB against PBKS

ಅಂದಹಾಗೆ ಆರ್‌ಸಿಬಿ ಖಾಯಂ ನಾಯಕನಾಗಿರುವ ಫಾಫ್ ಡು ಪ್ಲೆಸಿಸ್ ಗಾಯಗೊಂಡಿರುವ ಕಾರಣ ಬ್ಯಾಟಿಂಗ್ ಮಾತ್ರವೇ ನಡೆಸಲಿದ್ದಾರೆ. ಫೀಲ್ಡಿಂಗ್ ಸಂದರ್ಭದಲ್ಲಿ ಇಂಪಾಕ್ಟ್ ಪ್ಲೇಯರ್‌ಗೆ ಅವಕಾಶ ನೀಡಿ ಹೊರಗುಳಿಯಲಿದ್ದಾರೆ. ಹೀಗಾಗಿ ವಿರಾಟ್ ಕೊಹ್ಲಿ ತಂಡದ ನಾಯಕನಾಗಿ ಈ ಪಂದ್ಯದಲ್ಲಿ ಕಣಕ್ಕಿಳಿದಿದ್ದಾರೆ. ವಿರಾಟ್ ಕೊಹ್ಲಿ ಇದಕ್ಕೂ ಮುನ್ನ 2021ರ ಐಪಿಎಲ್‌ನ ಎಲಿಮಿನೇಟರ್ ಪಂದ್ಯದಲ್ಲಿ ನಾಯಕತ್ವ ವಹಿಸಿಕೊಂಡಿದ್ದರು.

ಇನ್ನು ವಿರಾಟ್ ಕೊಹ್ಲ ತಂಡದ ನಾಯಕತ್ವ ವಹಿಸಿಕೊಂಡಿರುವುದು ಅಭಿಮಾನಿಗಳಲ್ಲಿ ಉತ್ಸಾಹ ಹೆಚ್ಚಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಆರ್‌ಸಿಬಿ ಅಭಿಮಾನಿಗಳು ಕೊಹ್ಲಿ ಮತ್ತೆ ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿರುವುದಕ್ಕೆ ಸಂಭ್ರಮವನ್ನು ವ್ಯಕ್ತಪಡಿಸುತ್ತಿದ್ದಾರೆ. ಕೆಲ ಅಭಿಮಾನಿಗಳು ಭಾವನಾತ್ಮಕವಾಗಿಯೂ ಪ್ರತಿಕ್ರಿಯಿಸುತ್ತಿದ್ದಾರೆ.

ಇನ್ನು ಎದುರಾಳಿ ಪಂಜಾಬ್ ಕಿಂಗ್ಸ್ ತಂಡದಲ್ಲಿಯೂ ಪ್ರಮುಕ ಬದಲಾವಣೆಯಾಗಿದೆ. ತಂಡದ ನಾಯಕ ಶಿಖರ ಧವನ್ ಈ ಪಂದ್ಯದಲ್ಲಿ ಆಡುವ ಬಳಗದಿಂದ ಹೊರಗುಳಿದಿದ್ದು ಸ್ಯಾಮ್ ಕರನ್ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ. ಇನ್ನು ಸ್ಪೋಟಕ ಆಟಗಾರ ಲಿಯಾಮ್ ಲಿವಿಂಗ್ಸ್ಟನ್ ಈ ಪಂದ್ಯದಲ್ಲಿ ಆಡುವ ಬಳಗವನ್ನು ಸೇರಿಕೊಂಡಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ XI: ವಿರಾಟ್ ಕೊಹ್ಲಿ (ಸಿ), ಫಾಫ್ ಡು ಪ್ಲೆಸಿಸ್, ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ಡಬ್ಲ್ಯೂ), ವನಿಂದು ಹಸರಂಗ, ಸುಯಶ್ ಪ್ರಭುದೇಸಾಯಿ, ಹರ್ಷಲ್ ಪಟೇಲ್, ವೇಯ್ನ್ ಪಾರ್ನೆಲ್, ಮೊಹಮ್ಮದ್ ಸಿರಾಜ್

ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ XI: ಅಥರ್ವ ಟೈಡೆ, ಮ್ಯಾಥ್ಯೂ ಶಾರ್ಟ್, ಹರ್‌ಪ್ರೀತ್ ಸಿಂಗ್ ಭಾಟಿಯಾ, ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕುರಾನ್(ಸಿ), ಜಿತೇಶ್ ಶರ್ಮಾ(ಡಬ್ಲ್ಯೂ), ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ನಾಥನ್ ಎಲ್ಲಿಸ್, ರಾಹುಲ್ ಚಾಹರ್, ಅರ್ಶ್‌ದೀಪ್ ಸಿಂಗ್

Story first published: Thursday, April 20, 2023, 16:47 [IST]
Other articles published on Apr 20, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+