For Quick Alerts
ALLOW NOTIFICATIONS  
For Daily Alerts
 

IPL 2023: ಮಿಂಚಿದ ಗಾಯಕ್ವಾಡ್, ಮೊಯಿನ್ ಅಲಿ; ಲಕ್ನೋ ವಿರುದ್ಧ ಗೆದ್ದು ಬೀಗಿದ ಸಿಎಸ್‌ಕೆ

ಸೋಮವಾರ, ಏಪ್ರಿಲ್ 3ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಆರನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡವು 12 ರನ್‌ಗಳ ಭರ್ಜರಿ ಗೆಲುವು ದಾಖಲಿಸಿದೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡ ನೀಡಿದ್ದ 218 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಲಕ್ನೋ ಸೂಪರ್ ಜೈಂಟ್ಸ್ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 205 ರನ್ ಗಳಿಸಲಷ್ಟೇ ಶಕ್ತವಾಗಿ 12 ರನ್‌ಗಳಿಂದ ಟೂರ್ನಿಯಲ್ಲಿ ಮೊದಲ ಸೋಲು ಕಂಡಿತು.

IPL 2023: Chennai Super Kings Beat Lucknow Super Giants By 12 Runs In IPL

ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರ ಬ್ಯಾಟಿಂಗ್ ಆರಂಭಿಸಿದ ಕೈಲ್ ಮೇಯರ್ಸ್ ಮತ್ತು ನಾಯಕ ಕೆಎಲ್ ರಾಹುಲ್ ಉತ್ತಮ ಆರಂಭ ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 5.3 ಓವರ್‌ಗಳಲ್ಲಿ 79 ರನ್‌ಗಳ ಜೊತೆಯಾಟವಾಡಿದರು. ಸ್ಪೋಟಕವಾಗಿ ಆಡುತ್ತಿದ್ದ ಕೈಲ್ ಮೇಯರ್ಸ್ 22 ಎಸೆತಗಳಲ್ಲಿ 8 ಬೌಂಡರಿ ಮತ್ತು 2 ಸಿಕ್ಸರ್‌ಗಳ ನೆರವಿನಿಂದ 53 ರನ್ ಗಳಿಸಿ ಔಟಾದರು.

ನಂತರ ಬಂದ ದೀಪಕ್ ಹೂಡಾ ದೊಡ್ಡ ಶಾಟ್ ಬಾರಿಸಲು ಹೋಗಿ ಕ್ಯಾಚ್ ನೀಡಿ ಪೆವಿಲಿಯನ್ ಸೇರಿದರು. ಇನ್ನು ನಾಯಕ ಕೆಎಲ್ ರಾಹುಲ್ ಕೂಡಾ ದೊಡ್ಡ ಹೊಡೆತಕ್ಕೆ ಕೈ ಹಾಕಿ ವಿಕೆಟ್ ಒಪ್ಪಿಸಿದರು. 18 ಎಸೆತಗಳಲ್ಲಿ 2 ಬೌಂಡರಿಗಳಿಂದ 20 ರನ್ ಗಳಿಸಿದರು. ಆಗ ಕ್ರೀಸ್‌ಗೆ ಇಳಿದ ಕೃನಾಲ್ ಪಾಂಡ್ಯ 9 ರನ್ ಗಳಿಸಿ ಔಟಾದರು.

IPL 2023: Chennai Super Kings Beat Lucknow Super Giants By 12 Runs In IPL

ನಂತರ ಕಣಕ್ಕಿಳಿದ ಮಾರ್ಕಸ್ ಸ್ಟೋಯಿನಿಸ್ 18 ಎಸೆತಗಳಲ್ಲಿ 22 ರನ್, ನಿಕೊಲಸ್ ಪೂರನ್ 18 ಎಸೆತಗಳಲ್ಲಿ 32 ರನ್, ಆಯುಷ್ ಬದೋನಿ 18 ಎಸೆತಗಳಲ್ಲಿ 23 ರನ್, ಕೃಷ್ಣಪ್ಪ ಗೌತಮ್ 11 ಎಸೆತಗಳಲ್ಲಿ 17 ರನ್, ಮಾರ್ಕ್ ವುಡ್ 10 ರನ್ ಗಳಿಸಿ ತಂಡವನ್ನು ಗೆಲ್ಲಿಸಲೂ ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ.

ಇನ್ನು ಬೌಲಿಗ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಮೊಯಿನ್ ಅಲಿ 4 ಓವರ್‌ಗಳಲ್ಲಿ 26 ರನ್ ನೀಡಿ ಪ್ರಮುಖ 4 ವಿಕೆಟ್ ಪಡೆದು ಮಿಂಚಿದರು. ತುಷಾರ್ ದೇಶಪಾಂಡೆ 4 ಓವರ್‌ಗಳಲ್ಲಿ 45 ರನ್ ನೀಡಿ 2 ವಿಕೆಟ್ ಪಡೆದರೆ, ಮಿಚೆಲ್ ಸ್ಯಾಂಟ್ನರ್ 4 ಓವರ್‌ಗಳಲ್ಲಿ 21 ರನ್ ನೀಡಿ 1 ವಿಕೆಟ್ ಪಡೆದರು.

ಇದಕ್ಕೂ ಮುನ್ನ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 217 ರನ್ ಪೇರಿಸಿತು.

IPL 2023: Chennai Super Kings Beat Lucknow Super Giants By 12 Runs In IPL

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಆರಂಭಿಕ ಬ್ಯಾಟ್ಸ್‌ಮನ್‌ಗಳಾದ ರುತುರಾಜ್ ಗಾಯಕ್ವಾಡ್ ಮತ್ತು ಡೆವೊನ್ ಕಾನ್ವೆ ಉತ್ತಮ ಆರಂಭ ಒದಗಿಸಿದರು. ಮೊದಲ ವಿಕೆಟ್‌ಗೆ 9.1 ಓವರ್‌ಗಳಲ್ಲಿ 110 ರನ್‌ಗಳ ಜೊತೆಯಾಟ ನೀಡಿ ಬೇರ್ಪಟ್ಟರು. ರುತುರಾಜ್ ಗಾಯಕ್ವಾಡ್ 31 ಎಸೆತಗಳಲ್ಲಿ 3 ಬೌಂಡರಿ ಮತ್ತು 4 ಸಿಕ್ಸರ್‌ಗಳ ನೆರವಿನಿಂದ 57 ರನ್ ಬಾರಿಸಿ ರವಿ ಬಿಷ್ಣೋಯಿ ಅವರಿಗೆ ವಿಕೆಟ್ ನೀಡಿದರು.

ಇನ್ನು ಡೆವೊನ್ ಕಾನ್ವೆ 29 ಎಸೆತಗಳಲ್ಲಿ 5 ಬೌಂಡರಿ ಮತ್ತು 2 ಸಿಕ್ಸರ್‌ಗಳ ಸಹಾಯದಿಂದ 47 ರನ್ ಗಳಿಸಿ ಔಟಾದರು.ನಂತರ ಬಂದ ಶಿವಂ ದುಬೆ ಸ್ಫೋಟಕ ಬ್ಯಾಟಿಂಗ್ ಮಾಡಿ 16 ಎಸೆತಗಳಲ್ಲಿ 1 ಬೌಂಡರಿ ಮತ್ತು 3 ಭರ್ಜರಿ ಸಿಕ್ಸರ್‌ಗಳ ನೆರವಿನಿಂದ 27 ರನ್ ಬಾರಿಸಿದರು. ಮೊಯಿನ್ ಅಲಿ ಕೂಡ 13 ಎಸೆತಗಳಲ್ಲಿ 19 ರನ್ ಗಳಿಸಿದರೆ, ಬೆನ್ ಸ್ಟೋಕ್ಸ್ 8 ಎಸೆತಗಳಲ್ಲಿ 8 ರನ್ ಗಳಿಸಿ ಮತ್ತೊಮ್ಮೆ ನಿರಾಸೆ ಮೂಡಿಸಿದರು.

ಇನ್ನು ಕೊನೆಯಲ್ಲಿ ಆರ್ಭಟಿಸಿದ ಅಂಬಟಿ ರಾಯುಡು 14 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 2 ಬೌಂಡರಿ ಮೂಲಕ ಅಜೇಯ 27 ರನ್ ಬಾರಿಸಿದರೆ, ನಾಯಕ ಎಂಎಸ್ ಧೋನಿ 3 ಎಸೆತಗಳಲ್ಲಿ 2 ಸಿಕ್ಸರ್ ನೆರವಿನಿಂದ 12 ರನ್ ಗಳಿಸಿದರು. ರವೀಂದ್ರ ಜಡೇಜಾ 3 ರನ್ ಮತ್ತು ಮಿಚೆಲ್ ಸ್ಯಾಂಟ್ನರ್ 1 ರನ್ ಗಳಿಸಿದರು.

ಇನ್ನು ಬೌಲಿಂಗ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ರವಿ ಬಿಷ್ಣೋಯಿ 4 ಓವರ್‌ಗಳಲ್ಲಿ 28 ರನ್ ನೀಡಿ 3 ವಿಕೆಟ್ ಪಡೆದರೆ, ಮಾರ್ಕ್ ವುಡ್ 4 ಓವರ್‌ಗಳಲ್ಲಿ 49 ರನ್ ನೀಡಿ 3 ವಿಕೆಟ್ ಪಡೆದರು. ಅವೇಶ್ ಖಾನ್ 3 ಓವರ್‌ಗಳಲ್ಲಿ 3 ರನ್ ನೀಡಿ 1 ವಿಕೆಟ್ ಪಡೆದರು.

Story first published: Monday, April 3, 2023, 23:37 [IST]
Other articles published on Apr 3, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+