For Quick Alerts
ALLOW NOTIFICATIONS  
For Daily Alerts
 

CSK vs DC: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್‌ಗೆ ಸುಲಭ ಜಯ

IPL 2023: Chennai Super Kings beats Delhi Capitals by 27 runs

ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 55ನೇ ಪಂದ್ಯ ಇಂದು ( ಮೇ 10 ) ನಡೆಯುತ್ತಿದ್ದು, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾದವು.

ಈ ಪಂದ್ಯ ಚೆನ್ನೈನ ಎಂ ಎ ಚಿದಂಬರಂ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದು ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂ ಎಸ್ ಧೋನಿ ಮೊದಲು ಬ್ಯಾಟಿಂಗ್ ಮಾಡುವ ಆಯ್ಕೆ ಮಾಡಿಕೊಂಡಿದ್ದರು.

ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 167 ರನ್ ಕಲೆಹಾಕಿ ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಗೆಲ್ಲಲು 168 ರನ್‌ಗಳ ಗುರಿಯನ್ನು ನೀಡಿತ್ತು.

ಈ ಗುರಿಯನ್ನು ಬೆನ್ನತ್ತಲು ಯತ್ನಿಸಿ ವಿಫಲವಾದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 140 ರನ್ ಕಲೆಹಾಕಿದೆ. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ 27 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

ಚೆನ್ನೈ ಸೂಪರ್ ಕಿಂಗ್ಸ್ ಇನ್ನಿಂಗ್ಸ್: ಪರ ರುತುರಾಜ್ ಗಾಯಕ್ವಾಡ್ ಹಾಗೂ ಡಿವಾನ್ ಕಾನ್ವೆ ಆರಂಭಿಕರಾಗಿ ಕಣಕ್ಕಿಳಿದರು. ರುತುರಾಜ್ ಗಾಯಕ್ವಾಡ್ 18 ಎಸೆತಗಳಲ್ಲಿ 24 ರನ್ ಗಳಿಸಿದರೆ, ಡಿವಾನ್ ಕಾನ್ವೆ 13 ಎಸೆತಗಳಲ್ಲಿ 10 ರನ್ ಗಳಿಸಿದರು. ಇನ್ನುಳಿದಂತೆ ಅಜಿಂಕ್ಯಾ ರಹಾನೆ 20 ಎಸೆತಗಳಲ್ಲಿ 21 ರನ್, ಮೊಯಿನ್ ಅಲಿ 12 ಎಸೆತಗಳಲ್ಲಿ 7 ರನ್, ಶಿವಮ್ ದುಬೆ 12 ಎಸೆತಗಳಲ್ಲಿ 25 ರನ್, ಅಂಬಾಟಿ ರಾಯುಡು 17 ಎಸೆತಗಳಲ್ಲಿ 23 ರನ್, ರವೀಂದ್ರ ಜಡೇಜಾ 16 ಎಸೆತಗಳಲ್ಲಿ 21 ರನ್, ಎಂ ಎಸ್ ಧೋನಿ 9 ಎಸೆತಗಳಲ್ಲಿ 20 ರನ್, ದೀಪಕ್ ಚಹರ್ 2 ಎಸೆತಗಳಲ್ಲಿ ಅಜೇಯ 1 ರನ್ ಹಾಗೂ ತುಷಾರ್ ದೇಶಪಾಂಡೆ ಒಂದು ಎಸೆತವನ್ನು ಎದುರಿಸಿ ಯಾವುದೆ ರನ್ ಗಳಿಸದೇ ಅಜೇಯರಾಗಿ ಉಳಿದರು.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಮಿಚೆಲ್ ಮಾರ್ಷ್ 3 ವಿಕೆಟ್, ಅಕ್ಷರ್ ಪಟೇಲ್ 2 ವಿಕೆಟ್, ಕುಲ್‌ದೀಪ್ ಯಾದವ್, ಲಲಿತ್ ಯಾದವ್ ಹಾಗೂ ಖಲೀಲ್ ಅಹ್ಮದ್ ತಲಾ ಒಂದೊಂದು ವಿಕೆಟ್ ಪಡೆದರು.

ಡೆಲ್ಲಿ ಕ್ಯಾಪಿಟಲ್ಸ್ ಇನ್ನಿಂಗ್ಸ್: ಚೆನ್ನೈ ಸೂಪರ್ ಕಿಂಗ್ಸ್ ನೀಡಿದ ಗುರಿಯನ್ನು ಬೆನ್ನತ್ತಲು ಯತ್ನಿಸಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಆರಂಭಿಕ ಆಟಗಾರರಾಗಿ ತಂಡದ ನಾಯಕ ಡೇವಿಡ್ ವಾರ್ನರ್ ಹಾಗೂ ಫಿಲಿಪ್ ಸಾಲ್ಟ್ ಕಣಕ್ಕಿಳಿದರು. ಈ ಪೈಕಿ ಡೇವಿಡ್ ವಾರ್ನರ್ ಡಕ್ಔಟ್ ಆದರೆ, ಫಿಲಿಪ್ ಸಾಲ್ಟ್ 11 ಎಸೆತಗಳಲ್ಲಿ 17 ರನ್ ಗಳಿಸಿದರು. ಇನ್ನುಳಿದಂತೆ ಮಿಚೆಲ್ ಮಾರ್ಷ್ 4 ಎಸೆತಗಳಲ್ಲಿ 5 ರನ್, ಮನೀಶ್ ಪಾಂಡೆ 29 ಎಸೆತಗಳಲ್ಲಿ 27 ರನ್, ರಿಲಿ ರೊಸ್ಸೊ 37 ಎಸೆತಗಳಲ್ಲಿ 35 ರನ್, ರಿಪಾಲ್ ಪಟೇಲ್ 16 ಎಸೆತಗಳಲ್ಲಿ 10 ರನ್, ಅಕ್ಷರ್ ಪಟೇಲ್ 12 ಎಸೆತಗಳಲ್ಲಿ 2 1 ರನ್, ಲಲಿತ್ ಯಾದವ್ 5 ಎಸೆತಗಳಲ್ಲಿ 12 ರನ್, ಕುಲ್‌ದೀಪ್ ಯಾದವ್ ಯಾವುದೇ ರನ್ ಗಳಿಸದೆ ಅಜೇಯರಾಗಿ ಉಳಿದರೆ, ಅಮಾನ್ ಹಕೀಮ್ ಖಾನ್ 3 ಎಸೆತಗಳಲ್ಲಿ ಅಜೇಯ 8 ರನ್‌ ಗಳಿಸಿದರು.

ಚೆನ್ನೈ ಸೂಪರ್ ಕಿಂಗ್ಸ ಪರ ಮಹೀಶ್ ಪತಿರಾಣಾ 3 ವಿಕೆಟ್, ದೀಪಕ್ ಚಹಾರ್ 2 ಹಾಗೂ ರವೀಂದ್ರ ಜಡೇಜಾ ಒಂದು ವಿಕೆಟ್ ಪಡೆದರು.
ಆಡುವ ಬಳಗಗಳು:

ಚೆನ್ನೈ ಸೂಪರ್ ಕಿಂಗ್ಸ್ ಬಳಗ: ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಅಂಬಟಿ ರಾಯುಡು, ಶಿವಂ ದುಬೆ, ಮೊಯಿನ್ ಅಲಿ, ರವೀಂದ್ರ ಜಡೇಜಾ, ಎಂಎಸ್ ಧೋನಿ(ವಿಕೆಟ್ ಕೀಪರ್ ಹಾಗೂ ನಾಯಕ ), ದೀಪಕ್ ಚಹಾರ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ

ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಡೇವಿಡ್ ವಾರ್ನರ್(ನಾಯಕ), ಫಿಲಿಪ್ ಸಾಲ್ಟ್(ವಿಕೆಟ್ ಕೀಪರ್), ಮಿಚೆಲ್ ಮಾರ್ಷ್, ರಿಲೀ ರೋಸೌ, ಅಕ್ಸರ್ ಪಟೇಲ್, ಅಮನ್ ಹಕೀಮ್ ಖಾನ್, ರಿಪಾಲ್ ಪಟೇಲ್, ಲಲಿತ್ ಯಾದವ್, ಕುಲದೀಪ್ ಯಾದವ್, ಖಲೀಲ್ ಅಹ್ಮದ್, ಇಶಾಂತ್ ಶರ್ಮಾ

Story first published: Wednesday, May 10, 2023, 23:35 [IST]
Other articles published on May 10, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+