IPL 2023: ಫೈನಲ್ ತಲುಪಿದಾಗ ಚೆನ್ನೈ ಸೂಪರ್ ಕಿಂಗ್ಸ್ ಗೆದ್ದದ್ದಕ್ಕಿಂತ ಸೋತಿದ್ದೇ ಹೆಚ್ಚು!

ಕಳೆದ ಮಾರ್ಚ್ ತಿಂಗಳ ಕೊನೆ ದಿನದಂದು ಆರಂಭವಾಗಿದ್ದ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಇಂದು ( ಮೇ 28 ) ನಡೆಯಲಿರುವ ಫೈನಲ್ ಪಂದ್ಯದ ಮೂಲಕ ಮುಕ್ತಾಯಗೊಳ್ಳಲಿದೆ.
ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯ ರಾತ್ರಿ 8 ಗಂಟೆಗೆ ಶುರುವಾಗಲಿದ್ದು ಅಹಮದಾಬಾದಿನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಇನ್ನು ಹಾಲಿ ಚಾಂಪಿಯನ್ಸ್ ಗುಜರಾತ್ ಟೈಟನ್ಸ್ ಆಡಲಿರುವ ಎರಡನೇ ಐಪಿಎಲ್ ಫೈನಲ್ ಇದಾಗಿದ್ದು ಸತತವಾಗಿ ಎರಡನೇ ಟ್ರೋಫಿ ಗೆಲ್ಲುವತ್ತ ಕಣ್ಣಿಟ್ಟಿದೆ. ಅತ್ತ ಚೆನ್ನೈ ಸೂಪರ್ ಕಿಂಗ್ಸ್ ಹತ್ತನೇ ಬಾರಿಗೆ ಫೈನಲ್ ಪ್ರವೇಶಿಸಿದ್ದು, ತನ್ನ ಐದನೇ ಟ್ರೋಫಿ ಗೆಲ್ಲುವತ್ತ ಚಿತ್ತ ನೆಟ್ಟಿದೆ.
ಹೀಗೆ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಒಟ್ಟು 14 ಆವೃತ್ತಿ ಆಡಿರುವ ಚೆನ್ನೈ ಸೂಪರ್ ಕಿಂಗ್ಸ್ ಹತ್ತನೇ ಬಾರಿಗೆ ಫೈನಲ್ ತಲುಪಿದ್ದು, ಇಲ್ಲಿಯವರೆಗಿನ ತನ್ನ 9 ಫೈನಲ್ ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 4 ಪಂದ್ಯಗಳಲ್ಲಿ ಮಾತ್ರ ಗೆದ್ದು, ಉಳಿದ 5 ಪಂದ್ಯಗಳಲ್ಲಿ ಸೋತಿದೆ. ಹೀಗೆ ಚೆನ್ನೈ ಸೂಪರ್ ಕಿಂಗ್ಸ್ ಯಾವ ತಂಡಗಳ ವಿರುದ್ಧ ಫೈನಲ್ ಪಂದ್ಯದಲ್ಲಿ ಗೆದ್ದಿದೆ ಹಾಗೂ ಯಾವ ತಂಡಗಳ ವಿರುದ್ಧ ಸೋತಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ.
* 2008ರ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋತು ರನ್ನರ್ ಅಪ್ ಆಗಿತ್ತು.
* 2010ರ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಫೈನಲ್ ಪಂದ್ಯದಲ್ಲಿ ಸೋಲಿಸಿದ್ದ ಚೆನ್ನೈ ಸೂಪರ್ ಕಿಂಗ್ಸ್ ಚಾಂಪಿಯನ್ ಆಗಿತ್ತು.
* 2011ರ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಫೈನಲ್ ಪಂದ್ಯದಲ್ಲಿ ಸೋಲಿಸಿದ್ದ ಚೆನ್ನೈ ಸೂಪರ್ ಕಿಂಗ್ಸ್ ಚಾಂಪಿಯನ್ ಆಗಿತ್ತು.
* 2012ರ ಐಪಿಎಲ್ ಟೂರ್ನಿಯಲ್ಲಿ ಫೈನಲ್ ತಲುಪಿದ್ದ ಚೆನ್ನೈ ಸೂಪರ್ ಕಿಂಗ್ಸ್ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೋತು ರನ್ನರ್ ಅಪ್ ಆಗಿ ಹೊರಹೊಮ್ಮಿತ್ತು.
* 2013ಐಪಿಎಲ್ ಟೂರ್ನಿಯಲ್ಲಿ ಫೈನಲ್ ತಲುಪಿದ್ದ ಚೆನ್ನೈ ಸೂಪರ್ ಕಿಂಗ್ಸ್ ಮುಂಬೈ ಇಂಡಿಯನ್ಸ್ ವಿರುದ್ಧ ಸೋತು ರನ್ನರ್ ಅಪ್ ಆಗಿ ಹೊರಹೊಮ್ಮಿತ್ತು.

- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+

Click it and Unblock the Notifications