For Quick Alerts
ALLOW NOTIFICATIONS  
For Daily Alerts
 

IPL 2023: ಜಡೇಜಾ, ಸ್ಯಾಂಟ್ನರ್ ಮಾರಕ ಬೌಲಿಂಗ್; ಸಿಎಸ್‌ಕೆ ತಂಡಕ್ಕೆ ಸಾಧಾರಣ ಗುರಿ ನೀಡಿದ ಮುಂಬೈ ಇಂಡಿಯನ್ಸ್

ಶನಿವಾರ, ಏಪ್ರಿಲ್ 8ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 12ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಸಾಧಾರಣ ಮೊತ್ತ ಕಲೆಹಾಕಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 157 ರನ್ ಗಳಿಸಿದ್ದು, ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ 158 ರನ್‌ಗಳ ಗುರಿ ನೀಡಿದೆ.

IPL 2023: Chennai Super Kings Need 158 Runs To Win Against Mumbai Indians

ಮುಂಬೈ ಇಂಡಿಯನ್ಸ್ ಪರ ಬ್ಯಾಟಿಂಗ್ ಆರಂಭಿಸಿದ ನಾಯಕ ರೋಹಿತ್ ಶರ್ಮಾ ಮತ್ತು ಇಶಾನ್ ಕಿಶನ್ ಉತ್ತಮ ಆರಂಭ ನೀಡಿದರು. ಈ ಜೋಡಿ 4 ಓವರ್‌ಗಳಲ್ಲಿ ಮೊದಲ ವಿಕೆಟ್‌ಗೆ 38 ರನ್ ಜೊತೆಯಾಟ ನೀಡಿತು. ನಾಯಕ ರೋಹಿತ್ ಶರ್ಮಾ 13 ಎಸೆತಗಳಲ್ಲಿ 3 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಿಂದ 21 ರನ್ ಗಳಿಸಿ ಔಟಾದರು.

ನಂತರ ಬಂದ ಕ್ಯಾಮೆರಾನ್ ಗ್ರೀನ್ 11 ಎಸೆತಗಳಲ್ಲಿ 1 ಬೌಂಡರಿ ಸಮೇತ 12 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನು ಸೂರ್ಯಕುಮಾರ್ ಯಾದವ್ ಕೇವಲ 1 ರನ್ ಗಳಿಸಿ ಮತ್ತೊಮ್ಮೆ ಬ್ಯಾಟಿಂಗ್‌ನಲ್ಲಿ ವಿಫಲರಾದರು. ಕಳೆದ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ್ದ ತಿಲಕ್ ವರ್ಮಾ 18 ಎಸೆತಗಳಲ್ಲಿ 2 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಿಂದ 22 ರನ್ ಗಳಿಸಿದರು.

IPL 2023: Chennai Super Kings Need 158 Runs To Win Against Mumbai Indians

ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗಿಳಿದ ಅರ್ಷದ್ ಖಾನ್ 2 ರನ್ ಗಳಿಸಿ ಪೆವಿಲಿಯನ್ ಸೇರಿದರು. ಇನ್ನು ಟಿಮ್ ಡೇವಿಡ್ 22 ಎಸೆತಗಳಲ್ಲಿ 1 ಬೌಂಡರಿ ಮತ್ತು 2 ಸಿಕ್ಸರ್ ಮೂಲಕ 31 ರನ್ ಬಾರಿಸಿದರು. ಟ್ರಿಸ್ಟಾನ್ ಸ್ಟಬ್ಸ್ 5 ರನ್, ಹೃತಿಕ್ ಶೋಕೆನ್ 13 ಎಸೆತಗಳಲ್ಲಿ 3 ಬೌಂಡರಿ ಸಮೇತ 18 ರನ್ ಗಳಿಸಿದರು.

ಇನ್ನು ಬೌಲಿಂಗ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ರವೀಂದ್ರ ಜಡೇಜಾ 4 ಓವರ್‌ಗಳಲ್ಲಿ 20 ರನ್ ನೀಡಿ 3 ವಿಕೆಟ್ ಪಡೆದರೆ, ಮಿಚೆಲ್ ಸ್ಯಾಂಟ್ನರ್ 4 ಓವರ್‌ಗಳಲ್ಲಿ 28 ರನ್ ನೀಡಿ 2 ವಿಕೆಟ್ ಪಡೆದರು. ತುಷಾರ್ ದೇಶಪಾಂಡೆ 3 ಓವರ್‌ಗಳಲ್ಲಿ 31 ರನ್ ನೀಡಿ 2 ವಿಕೆಟ್ ಪಡೆದರೆ, ಸಿಸಾಂಡ ಮಗಲ 4 ಓವರ್‌ಗಳಲ್ಲಿ 37 ರನ್ ನೀಡಿ 1 ವಿಕೆಟ್ ಪಡೆದರು.

IPL 2023: Chennai Super Kings Need 158 Runs To Win Against Mumbai Indians

ಮುಂಬೈ ಇಂಡಿಯನ್ಸ್ ತಂಡ ತನ್ನ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿರುದ್ಧ ಸೋತ ನಂತರ, ತವರಿನ ವಾಂಖೆಡೆ ಸ್ಟೇಡಿಯಂನಲ್ಲಿ ಗೆಲುವಿನ ಖಾತೆ ತೆರೆಯಲು ಎದುರು ನೋಡುತ್ತಿದೆ.

ಮತ್ತೊಂದೆಡೆ ಸಿಎಸ್‌ಕೆ ತಂಡ ತನ್ನ ಹಿಂದಿನ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು 12 ರನ್‌ಗಳಿಂದ ಸೋಲಿಸಿದ ಬಳಿಕ, ಅದೇ ಪ್ರದರ್ಶನವನ್ನು ಈ ಪಂದ್ಯದಲ್ಲಿ ಮುಂದುವರೆಸಲು ಪ್ರಯತ್ನಿಸಲಿದೆ.

ಚೆನ್ನೈ ಸೂಪರ್ ಕಿಂಗ್ಸ್ vs ಮುಂಬೈ ಇಂಡಿಯನ್ಸ್ ಸಂಭಾವ್ಯ ಆಡುವ 11ರ ಬಳಗ
ಚೆನ್ನೈ ಸೂಪರ್ ಕಿಂಗ್ಸ್ ತಂಡ: ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯಾ ರಹಾನೆ, ಡ್ವೈನ್ ಪ್ರಿಟೋರಿಯಸ್, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ/ ವಿಕೆಟ್ ಕೀಪರ್), ಶಿವಂ ದುಬೆ, ದೀಪಕ್ ಚಾಹರ್, ಮಿಚೆಲ್ ಸ್ಯಾಂಟ್ನರ್, ತುಷಾರ್ ದೇಶಪಾಂಡೆ, ಸಿಸಂಡಾ ಮಗಲ.

ಮುಂಬೈ ಇಂಡಿಯನ್ಸ್ ತಂಡ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಕ್ಯಾಮೆರಾನ್ ಗ್ರೀನ್, ತಿಲಕ್ ವರ್ಮಾ, ಟಿಮ್ ಡೇವಿಡ್, ಟ್ರಿಸ್ಟಾನ್ ಸ್ಟಬ್ಸ್, ಹೃತಿಕ್ ಶೋಕೀನ್, ಪಿಯೂಷ್ ಚಾವ್ಲಾ, ಅರ್ಷದ್ ಖಾನ್, ಜೇಸನ್ ಬೆಹ್ರೆನ್‌ಡಾರ್ಫ್

Story first published: Saturday, April 8, 2023, 21:13 [IST]
Other articles published on Apr 8, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+