For Quick Alerts
ALLOW NOTIFICATIONS  
For Daily Alerts
 

CSK vs DC: ಪಂದ್ಯದಲ್ಲಿ ನಿಮ್ಮ ಡ್ರೀಮ್ ಟೀಮ್ ಗೆಲ್ಲಲು ಈ ಆಟಗಾರರನ್ನು ಆರಿಸಿ

IPL 2023: Chennai Super Kings vs Delhi Capitals dream team prediction

ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 55ನೇ ಪಂದ್ಯ ಇಂದು ( ಮೇ 10 ) ನಡೆಯುತ್ತಿದೆ. ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಸೆಣಸಾಟ ನಡೆಸಲಿವೆ.

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗುತ್ತಿರುವ ಮೊದಲ ಪಂದ್ಯ ಇದಾಗಿದ್ದು, ಚೆನ್ನೈನ ಎಂ ಎ ಚಿದಂಬರಂ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಈ ಪಂದ್ಯ ರಾತ್ರಿ 7.30ಕ್ಕೆ ಆರಂಭಗೊಳ್ಳಲಿದೆ.

ಇನ್ನು ಈ ಬಾರಿಯ ಇಂಡಿಯನ್‌ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ 54 ಲೀಗ್ ಪಂದ್ಯಗಳು ಮುಕ್ತಾಯಗೊಂಡಿದ್ದರೂ ಸಹ ಯಾವೊಂದು ತಂಡವೂ ಪ್ಲೇಆಫ್ ಸುತ್ತಿಗೆ ಕ್ವಾಲಿಫೈ ಆಗದೇ ಇದ್ದು ಹಾಗೂ ಯಾವೊಂದು ತಂಡವೂ ಟೂರ್ನಿಯಿಂದ ಹೊರಬೀಳದೇ ಉಳಿದುಕೊಂಡಿವೆ.

ಅತಿಹೆಚ್ಚು ಪಂದ್ಯ ಗೆದ್ದ ತಂಡಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ಸಹ ಪ್ಲೇಆಫ್ ಪ್ರವೇಶದ ರೇಸ್‌ನಲ್ಲಿದ್ದು, ಅತಿ ಕಡಿಮೆ ಪಂದ್ಯಗಳಲ್ಲಿ ಗೆದ್ದು ಕೊನೆ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ಸಹ ಪ್ಲೇಆಫ್ ರೇಸ್‌ನಲ್ಲಿ ಇನ್ನೂ ಉಳಿದುಕೊಂಡಿದೆ.

ಹೌದು, ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 11 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಚೆನ್ನೈ ಸೂಪರ್ ಕಿಂಗ್ಸ್ 6 ಪಂದ್ಯಗಳಲ್ಲಿ ಗೆದ್ದು, 4 ಪಂದ್ಯಗಳಲ್ಲಿ ಸೋತು ಉಳಿದೊಂದು ಪಂದ್ಯದಲ್ಲಿ ಫಲಿತಾಂಶ ಸಿಗದಿದ್ದು, 13 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಇನ್ನು ಡೆಲ್ಲಿ ಕ್ಯಾಪಿಟಲ್ಸ್ ಟೂರ್ನಿಯಲ್ಲಿ ಇಲ್ಲಿಯವರೆಗೂ 10 ಪಂದ್ಯಗಳಲ್ಲಿ ಕಣಕ್ಕಿಳಿದು 4 ಪಂದ್ಯಗಳಲ್ಲಿ ಮಾತ್ರ ಗೆದ್ದು, 6 ಪಂದ್ಯಗಳಲ್ಲಿ ಸೋತು 8 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

ಹೀಗೆ ಹೆಚ್ಚು ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಉತ್ತಮ ಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ಈ ಪಂದ್ಯದಲ್ಲಿ ಗೆದ್ದರೆ ಪ್ಲೇಆಫ್ ಸುತ್ತಿಗೆ ಮತ್ತಷ್ಟು ಸನಿಹವಾಗಲಿದೆ. ಅತ್ತ ಡೆಲ್ಲಿ ಕ್ಯಾಪಿಟಲ್ಸ್ ಈ ಪಂದ್ಯದಲ್ಲಿ ಗೆದ್ದರೆ ಪ್ಲೇಆಫ್ ಕನಸು ಇನ್ನೂ ಜೀವಂತವಾಗಿ ಉಳಿದುಕೊಳ್ಳಲಿದೆ. ಒಂದುವೇಳೆ ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯದಲ್ಲಿ ಸೋತರೆ ಪ್ಲೇಆಫ್ ರೇಸ್‌ನಿಂದ ಹೊರಬಿದ್ದಂತೆಯೇ ಸರಿ.

ಹೀಗೆ ಕುತೂಹಲ ಕೆರಳಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಪಂದ್ಯದ ಕುರಿತು ಚರ್ಚೆಗಳು ನಡೆಯುತ್ತಿದ್ದು, ಮತ್ತೊಂದೆಡೆ ಫ್ಯಾಂಟಸಿ ಕ್ರಿಕೆಟ್ ಪ್ರಿಯರು ಈ ಪಂದ್ಯಕ್ಕಾಗಿ ಡ್ರೀಮ್ ಟೀಮ್ ರಚಿಸುತ್ತಿದ್ದು, ಈ ಕೆಳಕಂಡಂತೆ ಆಟಗಾರರನ್ನು ಆರಿಸಿ ಡ್ರೀಮ್ ಟೀಮ್ ರಚಿಸಿದರೆ ಉತ್ತಮ ಅಂಕಗಳನ್ನು ಗಳಿಸಿ ಒಳ್ಳೆಯ ಫಲಿತಾಂಶ ಪಡೆಯುವ ಸಾಧ್ಯತೆಗಳು ಹೆಚ್ಚಿವೆ.

ಡ್ರೀಮ್ ಟೀಮ್ 1: ವಿಕೆಟ್ ಕೀಪರ್ - ಡೆವೊನ್ ಕಾನ್ವೇ, ಫಿಲಿಪ್ ಸಾಲ್ಟ್ (ಉಪನಾಯಕ)

ಬ್ಯಾಟ್ಸ್‌ಮನ್‌ಗಳು - ಡೇವಿಡ್ ವಾರ್ನರ್, ಶಿವಂ ದುಬೆ, ರುತುರಾಜ್ ಗಾಯಕ್ವಾಡ್ (ನಾಯಕ)

ಆಲ್ ರೌಂಡರ್‌ಗಳು - ರವೀಂದ್ರ ಜಡೇಜಾ, ಮಿಚೆಲ್ ಮಾರ್ಷ್, ಅಕ್ಷರ್ ಪಟೇಲ್, ಮೊಯಿನ್ ಅಲಿ

ಬೌಲರ್‌ಗಳು- ತುಷಾರ್ ದೇಶಪಾಂಡೆ, ಮಹೇಶ್ ಪತಿರಣ

ಡ್ರೀಮ್ ಟೀಮ್ 2: ಕೀಪರ್ - ಡೆವೊನ್ ಕಾನ್ವೇ, ಫಿಲಿಪ್ ಸಾಲ್ಟ್ (ನಾಯಕ)

ಬ್ಯಾಟ್ಸ್‌ಮನ್‌ಗಳು - ಡೇವಿಡ್ ವಾರ್ನರ್, ಶಿವಂ ದುಬೆ, ರುತುರಾಜ್ ಗಾಯಕ್ವಾಡ್

ಆಲ್ ರೌಂಡರ್‌ಗಳು - ರವೀಂದ್ರ ಜಡೇಜಾ (ಉಪನಾಯಕ), ಮಿಚೆಲ್ ಮಾರ್ಷ್, ಅಕ್ಷರ್ ಪಟೇಲ್

ಬೌಲರ್‌ಗಳು - ತುಷಾರ್ ದೇಶಪಾಂಡೆ, ಮಹೇಶ್ ಪತಿರಾನ, ಅನ್ರಿಚ್ ನಾರ್ಕಿಯಾ

Story first published: Wednesday, May 10, 2023, 17:07 [IST]
Other articles published on May 10, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+