Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

CSK vs GT: ಪಂದ್ಯದಲ್ಲಿ ನಿಮ್ಮ ಡ್ರೀಮ್ ಟೀಮ್ ಗೆಲ್ಲಲು ಈ ಆಟಗಾರರನ್ನು ಆರಿಸಿ

IPL 2023: Chennai Super Kings vs Gujarat Titans dream team prediction

ಕಳೆದ ಮಾರ್ಚ್ ತಿಂಗಳ ಅಂತ್ಯದಲ್ಲಿ ಶುರುವಾಗಿದ್ದ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಕ್ತಾಯದ ಹಂತಕ್ಕೆ ಬಂದು ತಲುಪಿದೆ. ಮೊನ್ನೆ (ಮೇ 21 ) ನಡೆದ ಮುಂಬೈ ಇಂಡಿಯನ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಪಂದ್ಯ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ತಂಡಗಳ ನಡುವಿನ ಪಂದ್ಯಗಳ ಮೂಲಕ ಲೀಗ್ ಹಂತ ಮುಕ್ತಾಯವಾಗಿದೆ.

ಈ ಮೂಲಕ ಪ್ಲೇಆಫ್ ಕೊನೆಯ ಸ್ಥಾನಕ್ಕಾಗಿ ನಡೆದಿದ್ದ ಪೈಪೋಟಿಯಲ್ಲಿ ಮುಂಬೈ ಇಂಡಿಯನ್ಸ್ ಅವಕಾಶವನ್ನು ಗಿಟ್ಟಿಸಿಕೊಂಡಿದೆ. ಹೀಗೆ ಗುಜರಾತ್ ಟೈಟನ್ಸ್, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ಬಳಿಕ ಮುಂಬೈ ಇಂಡಿಯನ್ಸ್ ಪ್ಲೇಆಫ್ ಹಂತ ತಲುಪಿವೆ.

ಈ ಪೈಕಿ ಗುಜರಾತ್ ಟೈಟನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಕ್ವಾಲಿಫಯರ್ ಪಂದ್ಯವನ್ನು ಆಡಲಿದ್ದರೆ, ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಂಬೈ ಇಂಡಿಯನ್ಸ್ ತಂಡಗಳು ಎಲಿಮಿನೇಟರ್ ಪಂದ್ಯದಲ್ಲಿ ಕಣಕ್ಕಿಳಿಯಲಿವೆ.

ಹೌದು, 20 ಅಂಕಗಳನ್ನು ಹೊಂದಿರುವ ಗುಜರಾತ್ ಟೈಟನ್ಸ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದ್ದು, 17 ಅಂಕಗಳನ್ನು ಹೊಂದಿರುವ ಚೆನ್ನೈ ಸೂಪರ್ ಕಿಂಗ್ಸ್ ಎರಡನೇ ಸ್ಥಾನದಲ್ಲಿದೆ. ಹೀಗೆ ಅಂಕಪಟ್ಟಿಯಲ್ಲಿ ಟಾಪ್ 2 ಸ್ಥಾನಗಳನ್ನು ಹೊಂದಿರುವ ಗುಜರಾತ್ ಟೈಟನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಕ್ವಾಲಿಫಯರ್ ಆಡಲಿವೆ‌. ಈ ಹೈವೋಲ್ಟೇಜ್ ಪಂದ್ಯ ಇಂದು ( ಮೇ 23 ) ಚೆನ್ನೈನ ಎಂ ಚಿದಂಬರಂ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸಂಜೆ 7.30ಕ್ಕೆ ಆರಂಭಗೊಳ್ಳಲಿದೆ.

ಈ ಪಂದ್ಯದಲ್ಲಿ ಗೆಲ್ಲುವ ತಂಡ ನೇರವಾಗಿ ಫೈನಲ್ ತಲುಪಲಿದ್ದು, ಸೋಲುವ ತಂಡ ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದು ಬರುವ ತಂಡದ ಜತೆ ಎರಡನೇ ಕ್ವಾಲಿಫಯರ್ ಪಂದ್ಯದಲ್ಲಿ ಸೆಣಸಾಡಲಿದೆ. ಹೀಗೆ ಇಂದಿನ ಪಂದ್ಯದಲ್ಲಿ ಯಾವ ತಂಡ ಫೈನಲ್ ಪ್ರವೇಶಿಸುವ ಅವಕಾಶ ಪಡೆದುಕೊಳ್ಳಲಿವೆ ಎಂಬ ಚರ್ಚೆ ಶುರುವಾಗಿದ್ದು, ಮತ್ತೊಂದೆಡೆ ಫ್ಯಾಂಟಸಿ ಕ್ರಿಕೆಟ್ ಪ್ರಿಯರು ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಬಲ್ಲ ಆಟಗಾರರನ್ನು ಆರಿಸಿ ಡ್ರೀಮ್ ಟೀಮ್ ರಚಿಸುತ್ತಿದ್ದಾರೆ.

ಹೀಗೆ ಡ್ರೀಮ್ ಟೀಮ್ ರಚಿಸುತ್ತಿರುವವರು ಈ ಕೆಳಕಂಡಂತೆ ತಂಡಗಳನ್ನು ರಚಿಸಿದರೆ ಉತ್ತಮ ಅಂಕಗಳನ್ನು ಗಳಿಸುವ ಸಾಧ್ಯತೆಗಳಿವೆ..

ಡ್ರೀಮ್ ಟೀಮ್ 1: ವಿಕೆಟ್ ಕೀಪರ್ - ವೃದ್ಧಿಮಾನ್ ಸಹಾ, ಡೆವೊನ್ ಕಾನ್ವೇ

ಬ್ಯಾಟ್ಸ್‌ಮನ್‌ಗಳು - ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್ (ನಾಯಕ)

ಆಲ್‌ರೌಂಡರ್‌ಗಳು - ರವೀಂದ್ರ ಜಡೇಜಾ, ಮೊಯಿನ್ ಅಲಿ, ಹಾರ್ದಿಕ್ ಪಾಂಡ್ಯ

ಬೌಲರ್‌ಗಳು - ದೀಪಕ್ ಚಹಾರ್, ಮೊಹಮ್ಮದ್ ಶಮಿ, ರಶೀದ್ ಖಾನ್ (ಉಪನಾಯಕ), ಮತೀಶ ಪತಿರಾನ

ಡ್ರೀಮ್ ಟೀಮ್ 2: ವಿಕೆಟ್ ಕೀಪರ್ - ವೃದ್ಧಿಮಾನ್ ಸಹಾ, ಡೆವೊನ್ ಕಾನ್ವೇ

ಬ್ಯಾಟ್ಸ್‌ಮನ್‌ಗಳು - ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್

ಆಲ್‌ರೌಂಡರ್‌ಗಳು - ರವೀಂದ್ರ ಜಡೇಜಾ (ಉಪನಾಯಕ), ಮೊಯಿನ್ ಅಲಿ, ಹಾರ್ದಿಕ್ ಪಾಂಡ್ಯ

ಬೌಲರ್‌ಗಳು - ದೀಪಕ್ ಚಹಾರ್, ಮೊಹಮ್ಮದ್ ಶಮಿ, ರಶೀದ್ ಖಾನ್ (ನಾಯಕ), ನೂರ್ ಅಹ್ಮದ್

ಸಂಭಾವ್ಯ ಆಡುವ ಬಳಗಗಳು:

ಗುಜರಾತ್ ಟೈಟಾನ್ಸ್: ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಶುಭಮನ್ ಗಿಲ್, ಹಾರ್ದಿಕ್ ಪಾಂಡ್ಯ (ನಾಯಕ), ದಸುನ್ ಶನಕ, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ನೂರ್ ಅಹ್ಮದ್, ಮೊಹಮ್ಮದ್ ಶಮಿ, ಮೋಹಿತ್ ಶರ್ಮಾ, ಯಶ್ ದಯಾಳ್, ವಿಜಯ್ ಶಂಕರ್

ಚೆನ್ನೈ ಸೂಪರ್ ಕಿಂಗ್ಸ್: ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಅಂಬಟಿ ರಾಯುಡು, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ ಹಾಗೂ ವಿಕೆಟ್ ಕೀಪರ್), ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ, ಮತೀಶ ಪತಿರಣ

Story first published: Tuesday, May 23, 2023, 15:59 [IST]
Other articles published on May 23, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+