Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023: ಚೆನ್ನೈ vs ಗುಜರಾತ್ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿ; ಟಾಸ್ ವಿಳಂಬ

IPL 2023: Chennai Super Kings vs Gujarat Titans final match toss has been delayed due to rain

ಕಳೆದ ಮಾರ್ಚ್ ತಿಂಗಳ ಕೊನೆಯ ದಿನದಂದು ಆರಂಭಗೊಂಡಿದ್ದ ಹದಿನಾರನೇ ಆವೃತ್ತಿಯ ಫೈನಲ್ ಪಂದ್ಯ ಇಂದು ( ಮೇ 28 ) ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳ ನಡುವೆ ಅಹ್ಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು ಈ ಪಂದ್ಯಕ್ಕೆ ಮಳೆ ಅಡ್ಡಿ ಉಂಟಾಗಿದೆ.

ಹೀಗಾಗಿ ಪಂದ್ಯದ ಟಾಸ್ ವಿಳಂಬವಾಗಿದ್ದು, ಮಳೆ ಜೋರಾಗಿಯೇ ಸುರಿಯುತ್ತಿರುವ ಕಾರಣ ಪಂದ್ಯ ತಡವಾಗಿ ಶುರುವಾಗಲಿದೆ. ಇನ್ನು 7.20ರ ಸಮಯದಲ್ಲಿಯೂ ಸಹ ಮಳೆ ಅಧಿಕವಾಗಿ ಸುರಿಯುತ್ತಿದ್ದು, ಮಳೆ ಸದ್ಯಕ್ಕೆ ನಿಲ್ಲುವ ಹಾಗೆ ಕಾಣುತ್ತಿಲ್ಲ.

ಇನ್ನು ಪಂದ್ಯಕ್ಕೆ ಮಳೆ ಅಡ್ಡಿಯಾಗಬಹುದು ಎಂದು ಹವಾಮಾನ ವರದಿಗಳು ಬೆಳಗ್ಗೆಯಿಂದಲೇ ಅಂದಾಜಿಸಿದ್ದು, ಅದೇ ರೀತಿ ಇದೀಗ ಮಳೆ ಹೆಚ್ಚಿನ ಪ್ರಮಾಣದಲ್ಲಿಯೇ ಸುರಿಯುತ್ತಿದೆ. ಒಂದುವೇಳೆ ಮಳೆ 9.35ರ ನಂತರವೂ ಮುಂದುವರೆದರೆ ಓವರ್ ಕಡಿತಗೊಳ್ಳಲಿದ್ದು, 9.35ಕ್ಕೂ ಮುನ್ನ ಪಂದ್ಯ ಆರಂಭವಾದರೆ ಯಾವುದೇ ಓವರ್ ಕಡಿತಗೊಳ್ಳದೇ ಪಂದ್ಯ ಆರಂಭವಾಗಲಿದೆ.

ತಂಡಗಳು:

ಗುಜರಾತ್ ಟೈಟಾನ್ಸ್ ತಂಡ: ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಶುಬ್ಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ(ನಾಯಕ), ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೋಹಿತ್ ಶರ್ಮಾ, ನೂರ್ ಅಹ್ಮದ್, ಮೊಹಮ್ಮದ್ ಶಮಿ, ಜೋಶುವಾ ಲಿಟಲ್, ಶ್ರೀಕರ್ ಭರತ್, ಶಿವಂ ಮಾವಿ, ಒಡಿಯನ್ ಸ್ಮಿತ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಪ್ರದೀಪ್ ಸಾಂಗ್ವಾನ್, ಮ್ಯಾಥ್ಯೂ ವೇಡ್, ಜಯಂತ್ ಯಾದವ್, ದಾಸುನ್ ಶನಕ, ಅಭಿನವ್ ಮನೋಹರ್, ಅಲ್ಜಾರಿ ಜೋಸೆಫ್, ದರ್ಶನ್ ನಲ್ಕಂಡೆ, ಉರ್ವಿಲ್ ಪಟೇಲ್, ಯಶ್ ದಯಾಳ್

ಚೆನ್ನೈ ಸೂಪರ್ ಕಿಂಗ್ಸ್ ತಂಡ: ರುತುರಾಜ್ ಗಾಯಕ್‌ವಾಡ್, ಡೆವೊನ್ ಕಾನ್ವೇ, ಶಿವಂ ದುಬೆ, ಅಜಿಂಕ್ಯ ರಹಾನೆ, ಅಂಬಟಿ ರಾಯುಡು, ಎಂಎಸ್ ಧೋನಿ(ವಿಕೆಟ್ ಕೀಪರ್ ಹಾಗೂ ನಾಯಕ), ರವೀಂದ್ರ ಜಡೇಜಾ, ಮೊಯೀನ್ ಅಲಿ, ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ, ಮಥೀಶ ಪತಿರಣ, ಮಿಚೆಲ್ ಶಾಂತಾಂತರ್ ಸೇನಾಪತಿ, ಶೇಕ್ ರಶೀದ್, ಆಕಾಶ್ ಸಿಂಗ್, ಬೆನ್ ಸ್ಟೋಕ್ಸ್, ಡ್ವೈನ್ ಪ್ರಿಟೋರಿಯಸ್, ಸಿಸಂದಾ ಮಗಲಾ, ಅಜಯ್ ಜಾದವ್ ಮಂಡಲ್, ಪ್ರಶಾಂತ್ ಸೋಲಂಕಿ, ಸಿಮರ್ಜೀತ್ ಸಿಂಗ್, ಆರ್ ಎಸ್ ಹಂಗರ್ಗೇಕರ್, ಭಗತ್ ವರ್ಮಾ, ನಿಶಾಂತ್ ಸಿಂಧು

Story first published: Sunday, May 28, 2023, 19:18 [IST]
Other articles published on May 28, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+