Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023: ಸಿಎಸ್‌ಕೆ vs ಲಕ್ನೋ ಸೂಪರ್ ಜೈಂಟ್ಸ್ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ & ಲೈವ್ ಸ್ಕೋರ್

ಸೋಮವಾರ, ಏಪ್ರಿಲ್ 3ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಆರನೇ ಪಂದ್ಯದಲ್ಲಿ ನಾಲ್ಕು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಲಕ್ನೋ ಸೂಪರ್ ಜೈಂಟ್ಸ್ ತಂಡದ ವಿರುದ್ಧ ಸೆಣಸಾಡುತ್ತಿದೆ.

ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಮೊದಲು ಬೌಲಿಂಗ್ ಆಯ್ದುಕೊಂಡಿದ್ದಾರೆ. ಹೀಗಾಗಿ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮೊದಲು ಬೌಲಿಂಗ್ ಮಾಡಲಿದೆ.

IPL 2023: Chennai Super Kings vs Lucknow Super Giants Toss Report, Playing 11 And Live Score

ಐಪಿಎಲ್ 2023ರ ಉದ್ಘಾಟನಾ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವದ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ಎದುರು ಸೋತಿರುವ ಚೆನ್ನೈ ಸೂಪರ್ ಕಿಂಗ್ಸ್ (CSK) ತಮ್ಮ ಮೊದಲ ಗೆಲುವಿಗಾಗಿ ತವರಿನ ಅಂಗಳದಲ್ಲಿ ಹೋರಾಡಲಿದೆ.

ಇನ್ನು ಡೇವಿಡ್ ವಾರ್ನರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ತಮ್ಮ ಮೊದಲ ಪಂದ್ಯದಲ್ಲಿ ಜಯ ಸಾಧಿರುವ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡವು ಈ ಪಂದ್ಯದಲ್ಲೂ ಗೆದ್ದು ಬೀಗಲು ಎದುರು ನೋಡುತ್ತಿದೆ.

ಟಿವಿ ಮತ್ತು ಲೈವ್ ಸ್ಟ್ರೀಮಿಂಗ್ ವಿವರ
ಚೆನ್ನೈ ಸೂಪರ್ ಕಿಂಗ್ಸ್ vs ಲಕ್ನೋ ಸೂಪರ್ ಜೈಂಟ್ಸ್ ಪಂದ್ಯವನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ಗಳಲ್ಲಿ ನೇರಪ್ರಸಾರ ಮಾಡಲಾಗುವುದು ಮತ್ತು Jio Cinema ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಿ ವೀಕ್ಷಿಸಬಹುದು.

ಚೆನ್ನೈ ಸೂಪರ್ ಕಿಂಗ್ಸ್ vs ಲಕ್ನೋ ಸೂಪರ್ ಜೈಂಟ್ಸ್ ಆಡುವ 11ರ ಬಳಗ
ಚೆನ್ನೈ ಸೂಪರ್ ಕಿಂಗ್ಸ್ ತಂಡ: ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೆ, ಬೆನ್ ಸ್ಟೋಕ್ಸ್, ಮೊಯಿನ್ ಅಲಿ, ಅಂಬಟಿ ರಾಯುಡು, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ/ ವಿಕೆಟ್ ಕೀಪರ್), ಶಿವಂ ದುಬೆ, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಹಾರ್, ರಾಜವರ್ಧನ್ ಹಂಗರ್ಗೇಕರ್

ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್ (ನಾಯಕ/ ವಿಕೆಟ್ ಕೀಪರ್), ಕೈಲ್ ಮೇಯರ್ಸ್, ದೀಪಕ್ ಹೂಡಾ, ನಿಕೋಲಸ್ ಪೂರನ್, ಮಾರ್ಕಸ್ ಸ್ಟೋನಿಸ್, ಆಯುಷ್ ಬದೊನಿ, ಕೃನಾಲ್ ಪಾಂಡ್ಯ, ಅವೇಶ್ ಖಾನ್, ರವಿ ಬಿಷ್ಣೋಯ್, ಯಶ್ ಠಾಕೂರ್, ಮಾರ್ಕ್ ವುಡ್.

Story first published: Monday, April 3, 2023, 19:04 [IST]
Other articles published on Apr 3, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+