
ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ನಾಳೆ ( ಮೇ 6 ) ಲೀಗ್ ಹಂತದ 49 ಹಾಗೂ 50ನೇ ಪಂದ್ಯಗಳು ಜರುಗಲಿವೆ. 49ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದ್ದು, 50ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಸೆಣಸಾಡಲಿವೆ.
ಚೆನ್ನೈ ಸೂಪರ್ ಕಿಂಗ್ಸ್ ಟೂರ್ನಿಯಲ್ಲಿ ಇಲ್ಲಿಯವರೆಗೂ 10 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು, 4 ಪಂದ್ಯಗಳಲ್ಲಿ ಸೋತು ಉಳಿದೊಂದು ಪಂದ್ಯದಲ್ಲಿ ಡ್ರಾ ಕಂಡಿದ್ದು, 11 ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.
ಮುಂಬೈ ಇಂಡಿಯನ್ಸ್ ತಂಡ ಇಲ್ಲಿಯವರೆಗೂ 9 ಪಂದ್ಯಗಳನ್ನಾಡಿದ್ದು, 5 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತು 10 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದು, ಹೀಗೆ ಹೆಚ್ಚೇನೂ ಅಂಕಗಳ ವ್ಯತ್ಯಾಸವಿಲ್ಲದೇ ಅಂಕಪಟ್ಟಿಯಲ್ಲಿ ಉತ್ತಮ ಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ಎರಡೂ ತಂಡಗಳಿಗೂ ಸಹ ಈ ಪಂದ್ಯ ಮುಖ್ಯವಾಗಿದ್ದು, ಗೆಲ್ಲುವತ್ತ ಕಣ್ಣಿಟ್ಟಿವೆ.
ಇನ್ನು ಇತ್ತಂಡಗಳು ಈ ಪಂದ್ಯದ ಮೂಲಕ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಎರಡನೇ ಬಾರಿಗೆ ಮುಖಾಮುಖಿಯಾಗುತ್ತಿವೆ. ಹೌದು, ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 12 ನೇ ಪಂದ್ಯದಲ್ಲಿ ಮೊದಲಿಗೆ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದವು.
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 157 ರನ್ ಕಲೆಹಾಕಿ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಗೆಲ್ಲಲು 158 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ 18.1 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 159 ರನ್ ಕಲೆಹಾಕಿ 7 ವಿಕೆಟ್‌ಗಳ ಭರ್ಜರಿ ಗೆಲುವನ್ನು ಸಾಧಿಸಿತ್ತು.
ಹೀಗೆ ಮೊದಲ ಪಂದ್ಯದಲ್ಲಿ ವಾಂಖೆಡೆಯಲ್ಲಿ ಸೋತಿದ್ದ ಮುಂಬೈ ಇಂಡಿಯನ್ಸ್ ನಾಳೆ ಚೆನ್ನೈನ ಎಂಎ ಚಿದಂಬಂರಂ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಗೆದ್ದು ಸೇಡು ತೀರಿಸಿಕೊಳ್ಳುವ ಉದ್ದೇಶದಲ್ಲಿದೆ. ಹೀಗೆ ಕುತೂಹಲ ಕೆರಳಿಸಿರುವ ಈ ಪಂದ್ಯದಲ್ಲಿ ಯಾವ ತಂಡ ಗೆಲ್ಲಲಿದೆ ಎಂಬ ಲೆಕ್ಕಾಚಾರಗಳು ನಡೆಯುತ್ತಿದ್ದು, ಫ್ಯಾಂಟಸಿ ಕ್ರಿಕೆಟ್ ಪ್ರೇಮಿಗಳು ಈ ಪಂದ್ಯದಲ್ಲಿ ಯಾವ ಆಟಗಾರರು ಉತ್ತಮ ಪ್ರದರ್ಶನ ನೀಡಬಹುದು ಎಂಬುದನ್ನು ಊಹಿಸಿ ಡ್ರೀಮ್ ಟೀಮ್ ರಚಿಸುತ್ತಿದ್ದಾರೆ.
ಹೀಗೆ ಡ್ರೀಮ್ ಟೀಮ್ ರಚಿಸುತ್ತಿರುವ ಆಟಗಾರರು ಈ ಕೆಳಕಂಡಂತೆ ಆಟಗಾರರನ್ನು ಆರಿಸಿ ಡ್ರೀಮ್ ಟೀಮ್ ರಚಿಸಿದರೆ ಹೆಚ್ಚು ಅಂಕಗಳನ್ನು ಗಳಿಸಿ ಉತ್ತಮ ಫಲಿತಾಂಶ ಪಡೆಯುವ ಸಾಧ್ಯತೆಗಳು ಹೆಚ್ಚಿವೆ.
ಡ್ರೀಮ್ ಟೀಮ್ 1:
ವಿಕೆಟ್ ಕೀಪರ್: ಡಿವಾನ್ ಕಾನ್ವೇ, ಇಶಾನ್ ಕಿಶನ್
ಬ್ಯಾಟರ್: ರುತುರಾಜ್ ಗಾಯಕ್ವಾಡ್, ಅಜಿಂಕ್ಯ ರಹಾನೆ, ಸೂರ್ಯಕುಮಾರ್ ಯಾದವ್, ಶಿವಮ್ ದುಬೆ
ಆಲ್ ರೌಂಡರ್: ರವೀಂದ್ರ ಜಡೇಜಾ, ಕೆಮರೂನ್ ಗ್ರೀನ್
ಬೌಲರ್: ತುಷಾರ್ ದೇಶಪಾಂಡೆ, ಪಿಯೂಷ್ ಚಾವ್ಲಾ, ಮಹೀಶ್ ಪತಿರಾನ
ಡ್ರೀಮ್ ಟೀಮ್ 2:
ವಿಕೆಟ್ ಕೀಪರ್: ಡಿವಾನ್ ಕಾನ್ವೇ, ಇಶಾನ್ ಕಿಶನ್
ಬ್ಯಾಟರ್: ರುತುರಾಜ್ ಗಾಯಕ್ವಾಡ್, ಅಜಿಂಕ್ಯ ರಹಾನೆ, ಸೂರ್ಯಕುಮಾರ್ ಯಾದವ್, ಶಿವಮ್ ದುಬೆ, ತಿಲಕ್ ವರ್ಮಾ
ಆಲ್ ರೌಂಡರ್: ರವೀಂದ್ರ ಜಡೇಜಾ, ಕೆಮರೂನ್ ಗ್ರೀನ್
ಬೌಲರ್: ತುಷಾರ್ ದೇಶಪಾಂಡೆ, ಪಿಯೂಷ್ ಚಾವ್ಲಾ
ನಾಯಕರು ಹಾಗೂ ಉಪನಾಯಕರು: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಡಿವಾನ್ ಕಾನ್ವೆ ಉತ್ತಮ ಫಾರ್ಮ್‌ನಲ್ಲಿದ್ದು, ಮುಂಬೈ ಇಂಡಿಯನ್ಸ್ ತಂಡದಲ್ಲಿ ಇಶಾನ್ ಕಿಶನ್ ಹಾಗೂ ಸೂರ್ಯಕುಮಾರ್ ಯಾದವ್ ಇಬ್ಬರೂ ಫಾರ್ಮ್‌ನಲ್ಲಿದ್ದಾರೆ. ಈ ಮೂವರಲ್ಲಿ ಯಾರನ್ನಾದರೂ ನಾಯಕ ಹಾಗೂ ಉಪನಾಯಕರನ್ನಾಗಿ ಆರಿಸಬಹುದಾಗಿದೆ.