CSK vs PBKS: ಮುಖಾಮುಖಿಯಲ್ಲಿ ಹೆಚ್ಚು ಪಂದ್ಯಗಳನ್ನು ಗೆದ್ದಿರುವ ತಂಡ ಯಾವುದು?

ಪ್ರಸ್ತುತ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಪಂದ್ಯಗಳು ಜರುಗುತ್ತಿದ್ದು, ಇಂದು ಏಪ್ರಿಲ್ 30ರ ಭಾನುವಾರ ಒಟ್ಟು ಎರಡು ಪಂದ್ಯಗಳು ಜರುಗಲಿವೆ. ಮಧ್ಯಾಹ್ನ ನಡೆಯಲಿರುವ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಪಂಜಾಬ್ ಕಿಂಗ್ಸ್ ಪಂದ್ಯಗಳು ಮುಖಾಮುಖಿಯಾಗಲಿದ್ದು, ರಾತ್ರಿ ನಡೆಯಲಿರುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಸೆಣಸಾಡಲಿವೆ.
ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯ ಎಂಎ ಚಿದಂಬರಂ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದುಮ ಇದು ಟೂರ್ನಿಯ 41ನೇ ಪಂದ್ಯವಾಗಿದೆ. ಟೂರ್ನಿಯಲ್ಲಿ ಇಲ್ಲಿಯವರೆಗೂ ಎರಡೂ ತಂಡಗಳು 8 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದು, ಚೆನ್ನೈ ಸೂಪರ್ ಕಿಂಗ್ಸ್ 5 ಪಂದ್ಯಗಳಲ್ಲಿ ಗೆದ್ದು, 3 ಪಂದ್ಯಗಳಲ್ಲಿ ಸೋತು 10 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದರೆ, 4 ಪಂದ್ಯಗಳಲ್ಲಿ ಗೆದ್ದು, 4 ಪಂದ್ಯಗಳಲ್ಲಿ ಸೋತಿರುವ ಪಂಜಾಬ್ ಕಿಂಗ್ಸ್ 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.
ನಿನ್ನೆ ಗುಜರಾತ್ ಟೈಟನ್ಸ್ ಜಯ ಸಾಧಿಸಿದ ಪರಿಣಾಮ ಅಗ್ರಸ್ಥಾನದಲ್ಲಿದ್ದ ಚೆನ್ನೈ ಸೂಪರ್ ಕಿಂಗ್ಸ್ ನಾಲ್ಕನೇ ಸ್ಥಾನಕ್ಕೆ ಕುಸಿದಿದ್ದು, ಇಂದಿನ ಪಂದ್ಯದಲ್ಲಿ ಗೆದ್ದು ಅಂಕಪಟ್ಟಿಯಲ್ಲಿ ಏರಿಕೆ ಕಾಣುವ ಯೋಜನೆಯಲ್ಲಿದೆ. ಇನ್ನು ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇದೇ ಮೊದಲ ಬಾರಿಗೆ ಮುಖಾಮುಖಿಯಾಗಲಿದ್ದು, ಇಲ್ಲಿಯವರೆಗೂ ಇತ್ತಂಡಗಳು ಎಷ್ಟು ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ ಹಾಗೂ ಯಾವ ತಂಡ ಹೆಚ್ಚು ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ ಎಂಬ ಮಾಹಿತಿ ಈ ಕೆಳಕಂಡಂತಿದೆ..
ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಪಂಜಾಬ್ ಕಿಂಗ್ಸ್ ಇಲ್ಲಿಯವರೆಗೂ ಒಟ್ಟು 27 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಚೆನ್ನೈ ಸೂಪರ್ ಕಿಂಗ್ಸ್ 15 ಪಂದ್ಯಗಳಲ್ಲಿ ಗೆದ್ದಿದ್ದು, ಪಂಜಾಬ್ ಕಿಂಗ್ಸ್ 12 ಪಂದ್ಯಗಳಲ್ಲಿ ಗೆದ್ದಿದೆ. ಈ ಮೂಲಕ ಮುಖಾಮುಖಿ ಪಂದ್ಯಗಳಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಮೇಲುಗೈ ಸಾಧಿಸಿದೆ.
ಇನ್ನು ಇತ್ತಂಡಗಳು ಮುಖಾಮುಖಿಯಾದಾಗ ಚೆನ್ನೈ ಸೂಪರ್ ಕಿಂಗ್ಸ್ ಗಳಿಸಿರುವ ಗರಿಷ್ಠ ರನ್ 240 ಆಗಿದ್ದು, ಪಂಜಾಬ್ ಕಿಂಗ್ಸ್ ಗಳಿಸಿರುವ ಗರಿಷ್ಠ ರನ್ 231 ರನ್ ಆಗಿದೆ. ಚೆನ್ನೈ ಸೂಪರ್ ಕಿಂಗ್ಸ್ ಗಳಿಸಿರುವ ಕನಿಷ್ಟ ರನ್ 120 ಆಗಿದ್ದು, ಪಂಜಾಬ್ ಕಿಂಗ್ಸ್ ಗಳಿಸಿರುವ ಕನಿಷ್ಟ ರನ್ 92 ಆಗಿದೆ.
2022ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಎರಡು ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದವು. ಈ ಎರಡೂ ಪಂದ್ಯಗಳಲ್ಲಿಯೂ ಪಂಜಾಬ್ ಕಿಂಗ್ಸ್ ಗೆಲುವನ್ನು ಸಾಧಿಸಿತ್ತು. ಮೊದಲ ಪಂದ್ಯದಲ್ಲಿ 54 ರನ್‌ಗಳಿಂದ ಗೆದ್ದಿದ್ದ ಪಂಜಾಬ್ ಕಿಂಗ್ಸ್ ಎರಡನೇ ಪಂದ್ಯದಲ್ಲಿ 11 ರನ್‌ಗಳಿಂದ ಗೆದ್ದಿತ್ತು. 2021ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಸಹ ಎರಡು ಪಂದ್ಯಗಳಲ್ಲಿ ಎರಡೂ ತಂಡಗಳು ಮುಖಾಮುಖಿಯಾಗಿ ತಲಾ ಒಂದೊಂದು ಪಂದ್ಯದಲ್ಲಿ ಗೆದ್ದಿದ್ದವು.
ಹೀಗೆ ಒಟ್ಟಾರೆ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮೇಲುಗೈ ಸಾಧಿಸಿದ್ದರೆ, ಕಳೆದ ಎರಡು ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ಮೇಲುಗೈ ಸಾಧಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications