
ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 37ನೇ ಪಂದ್ಯದಲ್ಲಿ ಇಂದು ( ಏಪ್ರಿಲ್ 27 ) ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಜೈಪುರದ ಸಾವೈ ಮಾನ್‌ಸಿಂಗ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ.
ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಲಿರುವ ಎರಡನೇ ಪಂದ್ಯ ಇದಾಗಿದ್ದು, ಮೊದಲ ಪಂದ್ಯದಲ್ಲಿ ಸೋತಿದ್ದ ಸೇಡನ್ನು ತೀರಿಸಿಕೊಳ್ಳುವ ತವಕದಲ್ಲಿದೆ ಚೆನ್ನೈ ಸೂಪರ್ ಕಿಂಗ್ಸ್.
ಇನ್ನು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ಈ ಪಂದ್ಯವನ್ನು ಗೆದ್ದು ಅಗ್ರಸ್ಥಾನಕ್ಕೇರುವ ತವಕದಲ್ಲಿದ್ದು, ಅಗ್ರಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ಈ ಪಂದ್ಯದಲ್ಲಿ ಗೆದ್ದು ಅಗ್ರಸ್ಥಾನದಲ್ಲಿಯೇ ಮುಂದುವರಿಯುವ ಯೋಜನೆಯಲ್ಲಿದೆ.
ಹೀಗೆ ಇಂದಿನ ಪಂದ್ಯ ಕುತೂಹಲವನ್ನು ಕೆರಳಿಸಿದ್ದು ಯಾವ ತಂಡ ಗೆಲ್ಲಲಿದೆ ಎಂಬ ಲೆಕ್ಕಾಚಾರ ಕ್ರಿಕೆಟ್ ಪ್ರೇಮಿಗಳ ಪಾಳಯದಲ್ಲಿ ಜೋರಾಗಿದೆ. ಅಲ್ಲದೇ ಫ್ಯಾಂಟಸಿ ಕ್ರಿಕೆಟ್ ಪ್ರಿಯರು ಈ ನಿರೀಕ್ಷಿತ ಪಂದ್ಯದಲ್ಲಿ ಯಾವ ಆಟಗಾರರು ಉತ್ತಮ ಪ್ರದರ್ಶನ ನೀಡಬಹುದು ಎಂಬುದನ್ನು ಊಹಿಸಿ ಡ್ರೀಮ್ ಟೀಮ್ ರಚಿಸುತ್ತಿದ್ದಾರೆ. ಈ ರೀತಿ ಡ್ರೀಮ್ ಟೀಮ್ ರಚಿಸುತ್ತಿರುವವರು ಈ ಕೆಳಕಂಡಂತೆ ತಂಡಗಳನ್ನು ರಚಿಸುವುದು ಉತ್ತಮ ಎನ್ನಬಹುದು.
ಡ್ರೀಮ್ ಟೀಮ್ 1: ಕೀಪರ್ - ಡೆವೊನ್ ಕಾನ್ವೇ, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್
ಬ್ಯಾಟ್ಸ್‌ಮನ್‌ಗಳು - ಅಜಿಂಕ್ಯ ರಹಾನೆ, ರುತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್ (ಉಪನಾಯಕ)
ಆಲ್ ರೌಂಡರ್‌ಗಳು - ರವೀಂದ್ರ ಜಡೇಜಾ (ನಾಯಕ), ರವಿಚಂದ್ರನ್ ಅಶ್ವಿನ್
ಬೌಲರ್‌ಗಳು - ಯುಜುವೇಂದ್ರ ಚಹಾಲ್, ಟ್ರೆಂಟ್ ಬೌಲ್ಟ್, ತುಷಾರ್ ದೇಶಪಾಂಡೆ
ಡ್ರೀಮ್ ಟೀಮ್ 2: ಕೀಪರ್ - ಡೆವೊನ್ ಕಾನ್ವೇ, ಜೋಸ್ ಬಟ್ಲರ್
ಬ್ಯಾಟ್ಸ್‌ಮನ್‌ಗಳು - ಅಜಿಂಕ್ಯ ರಹಾನೆ (ನಾಯಕ), ರುತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್
ಆಲ್‌ರೌಂಡರ್‌ಗಳು - ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್
ಬೌಲರ್‌ಗಳು - ಯುಜುವೇಂದ್ರ ಚಹಾಲ್ (ವಿಕೆಟ್ ಕೀಪರ್) ಟ್ರೆಂಟ್ ಬೌಲ್ಟ್, ತುಷಾರ್ ದೇಶಪಾಂಡೆ, ಸಂದೀಪ್ ಶರ್ಮಾ
ಸಂಭಾವ್ಯ ಆಡುವ ಬಳಗಗಳು:
ರಾಜಸ್ಥಾನ್ ರಾಯಲ್ಸ್ ಸಂಭಾವ್ಯ ಆಡುವ ಬಳಗಗಳು: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ನಾಯಕ), ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ಧ್ರುವ್ ಜುರೆಲ್, ರವಿಚಂದ್ರನ್ ಅಶ್ವಿನ್, ಜೇಸನ್ ಹೋಲ್ಡರ್, ಟ್ರೆಂಟ್ ಬೌಲ್ಟ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್
ಚೆನ್ನೈ ಸೂಪರ್ ಕಿಂಗ್ಸ್ ಸಂಭಾವ್ಯ ಆಡುಗ ಬಳಗ: ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಅಂಬಟಿ ರಾಯುಡು, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ), ಮಥೀಶ ಪತಿರಾನ, ಮಹೀಶ್ ತೀಕ್ಷಣ, ತುಷಾರ್ ದೇಶಪಾಂಡೆ
ಮುಖಾಮುಖಿ ಫಲಿತಾಂಶ: ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಐಪಿಎಲ್ ಇತಿಹಾಸದಲ್ಲಿ ಒಟ್ಟು 27 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಈ ಪೈಕಿ ಚೆನ್ನೈ ಸೂಪರ್ ಕಿಂಗ್ಸ್ 15 ಪಂದ್ಯಗಳಲ್ಲಿ ಗೆದ್ದಿದ್ದರೆ ರಾಜಸ್ಥಾನ್ ರಾಯಲ್ಸ್ 12 ಪಂದ್ಯಗಳಲ್ಲಿ ಗೆದ್ದಿದೆ. ಈ ಮೂಲಕ ಐಪಿಎಲ್ ಮುಖಾಮುಖಿಯಲ್ಲಿ ರಾಜಸ್ಥಾನ್ ರಾಯಲ್ಸ್ ಮೇಲೆ ಚೆನ್ನೈ ಸೂಪರ್ ಕಿಂಗ್ಸ್ ಮೇಲುಗೈ ಸಾಧಿಸಿದೆ.