Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

CSK vs RR: ಪಂದ್ಯದ ಟಾಸ್ ವರದಿ, ಪ್ಲೇಯಿಂಗ್ 11 & ಲೈವ್ ಸ್ಕೋರ್

IPL 2023: Chennai Super Kings vs Rajasthan Royals toss report, playing 11 and live score

ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 37ನೇ ಪಂದ್ಯ ಇಂದು ( ಏಪ್ರಿಲ್ 27 ) ಜೈಪುರದ ಸಾವೈ ಮಾನ್‌ಸಿಂಗ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿವೆ.

ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಮೊದಲು ಬ್ಯಾಟಿಂಗ್ ಮಾಡುವ ಆಯ್ಕೆ ಮಾಡಿಕೊಂಡಿದ್ದಾರೆ. ಇನ್ನು ಈ ಪಂದ್ಯ ಇತ್ತಂಡಗಳ ನಡುವೆ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ನಡೆಯುತ್ತಿರುವ ಎರಡನೇ ಪಂದ್ಯವಾಗಿದ್ದು, ಮೊದಲ ಬಾರಿಯ ಮುಖಾಮುಖಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಜಯ ಸಾಧಿಸಿತ್ತು.

ಹೀಗೆ ಚೆನ್ನೈನ ಎಂ ಚಿದಂಬರಂ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಸೋತಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸೇಡು ತೀರಿಸಿಕೊಳ್ಳಲು ಇಂದಿನ ಪಂದ್ಯ ವೇದಿಕೆಯಾಗಿದೆ. ಇನ್ನು ಈ ಪಂದ್ಯದಲ್ಲಿ ಗೆಲ್ಲಲಿರುವ ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನವನ್ನು ತನ್ನದಾಸಿಕೊಳ್ಳಲಿದ್ದು, ಎರಡೂ ತಂಡಗಳ ನಡುವೆ ಕಠಿಣ ಪೈಪೋಟಿ ಏರ್ಪಟ್ಟಿದೆ.

ಆಡುವ ಬಳಗಗಳು:

ಚೆನ್ನೈ ಸೂಪರ್ ಕಿಂಗ್ಸ್ ಆಡುವ ಬಳಗ: ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ(ನಾಯಕ ಹಾಗು ವಿಕೆಟ್ ಕೀಪರ್), ಮಥೀಶ ಪತಿರಾನ, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ, ಆಕಾಶ್ ಸಿಂಗ್

ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್ (ನಾಯಕ ಹಾಗೂ ವಿಕೆಟ್ ಕೀಪರ್), ಶಿಮ್ರಾನ್ ಹೆಟ್ಮೆಯರ್, ಧ್ರುವ ಜುರೆಲ್, ರವಿಚಂದ್ರನ್ ಅಶ್ವಿನ್, ಜೇಸನ್ ಹೋಲ್ಡರ್, ಆಡಮ್ ಝಂಪಾ, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್

ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಕಳೆದ ಪಂದ್ಯಕ್ಕೂ ಈ ಪಂದ್ಯಕ್ಕೂ ಯಾವುದೇ ವ್ಯತ್ಯಾಸವಿಲ್ಲ, ಆದರೆ ರಾಜಸ್ಥಾನ್ ರಾಯಲ್ಸ್ ಆಡುವ ಬಳಗದಿಂದ ಟ್ರೆಂಟ್ ಬೌಲ್ಟ್ ಗಾಯದ ಸಮಸ್ಯೆಯಿಂದ ಹೊರಬಿದ್ದಿದ್ದು, ಆಡಂ ಜಂಪಾ ಆಡುವ ಬಳಗ ಸೇರಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ vs ರಾಜಸ್ಥಾನ್ ರಾಯಲ್ಸ್ ಪಂದ್ಯದ ಲೈವ್ ಸ್ಕೋರ್ ಈ ಕೆಳಕಂಡಂತಿದೆ

1
57092

Story first published: Thursday, April 27, 2023, 19:23 [IST]
Other articles published on Apr 27, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+