IPL 2023, CSK vs SRH: ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಬೌಲಿಂಗ್ ಆಯ್ಕೆ: ಆಡುವ ಬಳಗ
ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಒಂದು ಟೂರ್ನಿಯ 29ನೇ ಪಂದ್ಯ ನಡೆಯುತ್ತಿದ್ದು ಈ ಪಮದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಎಂಎಸ್ ಧೋನಿ ನೇತೃತ್ವದ ಸಿಎಸ್‌ಕೆ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಪಡೆದುಕೊಂಡಿದೆ.
ಇನ್ನು ಈ ಪಂದ್ಯಕ್ಕಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಯಾವುದೇ ಬದಲಾವಣೆ ಮಾಡಿಕೊಳ್ಳದೆ ಕಣಕ್ಕಿಳಿದಿದೆ. ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಆಡಿದ್ದ ಬಳಗೊಂದಿಗೆ ಸಿಎಸ್‌ಕೆ ಆಡಲಿಳಿಯುತ್ತಿದೆ. ಆದರೆ ಸನ್‌ರೈಸರ್ಸ್ ಹೈದರಾಬಾದ್ ತಮಡದ ಆಡುವ ಬಳಗದಲ್ಲಿ ಒಂದು ಬದಲಾವಣೆ ಮಾಡಿಕೊಳ್ಳಲಾಗಿದೆ.

ಇನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡ ಆಡಿರುವ ಐದು ಪಂದ್ಯಗಳಲ್ಲಿ ಮೂರು ಗೆಲುವು ಸಾಧಿಸಿದ್ದು ಎರಡು ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ. ಕಳೆದ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ರೋಚಕ ಗೆಲುವು ಸಾಧಿಸಿದ್ದು ಆ ಅನುಭವದೊಂದಿಗೆ ಕಣಕ್ಕಿಳಿಯುತ್ತಿದೆ. ಇತ್ತ ಸನ್‌ರೈಸರ್ಸ್ ಹೈದರಾಬಾದ್ ಐದು ಪಂದ್ಯಗಳಲ್ಲಿ ಎರಡು ಗೆಲುವು ಸಾಧಿಸಿದ್ದು ಮೂರನೇ ಗೆಲುವಿಗಾಗಿ ಹಾತೊರೆಯುತ್ತಿದೆ.
Live ಸ್ಕೋರ್ ಹೀಗಿದೆ
ಚೆನ್ನೈ ಸೂಪರ್ ಕಿಂಗ್ಸ್ ಆಡುವ ಬಳಗ: ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಶಿವಂ ದುಬೆ, ಮೊಯಿನ್ ಅಲಿ, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ & ವಿಕೆಟ್ ಕೀಪರ್), ಮಹೇಶ್ ತೀಕ್ಷಣ, ತುಷಾರ್ ದೇಶಪಾಂಡೆ, ಆಕಾಶ್ ಸಿಂಗ್, ಮಥೀಶ ಪತಿರಣ
ಬೆಂಚ್: ಅಂಬಾಟಿ ರಾಯುಡು, ಡ್ವೈನ್ ಪ್ರಿಟೋರಿಯಸ್, ಸುಭ್ರಾಂಶು ಸೇನಾಪತಿ, ಶೇಕ್ ರಶೀದ್, ಆರ್‌ಎಸ್ ಹಂಗರ್ಗೇಕರ್, ಮಿಚೆಲ್ ಸ್ಯಾಂಟ್ನರ್, ಅಜಯ್ ಜಾದವ್ ಮಂಡಲ್, ಸಿಮರ್ಜೀತ್ ಸಿಂಗ್, ಪ್ರಶಾಂತ್ ಸೋಲಂಕಿ, ಭಗತ್ ವರ್ಮಾ, ನಿಶಾಂತ್ ಸಿಂಧು
ಸನ್‌ರೈರರ್ಸ್ ಹೈದರಾಬಾದ್: ಹ್ಯಾರಿ ಬ್ರೂಕ್, ಮಯಾಂಕ್ ಅಗರ್ವಾಲ್, ರಾಹುಲ್ ತ್ರಿಪಾಠಿ, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ವಾಷಿಂಗ್ಟನ್ ಸುಂದರ್, ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಂಡೆ, ಉಮ್ರಾನ್ ಮಲಿಕ್
ಬೆಂಚ್: ಅಬ್ದುಲ್ ಸಮದ್, ಸನ್ವಿರ್ ಸಿಂಗ್, ಗ್ಲೆನ್ ಫಿಲಿಪ್ಸ್, ಮಯಾಂಕ್ ಡಾಗರ್, ಟಿ ನಟರಾಜನ್, ವಿವ್ರಾಂತ್ ಶರ್ಮಾ, ಅಕೇಲ್ ಹೊಸೈನ್, ಆದಿಲ್ ರಶೀದ್, ಸಮರ್ಥ್ ವ್ಯಾಸ್, ಅನ್ಮೋಲ್ಪ್ರೀತ್ ಸಿಂಗ್, ಉಪೇಂದ್ರ ಯಾದವ್, ಕಾರ್ತಿಕ್ ತ್ಯಾಗಿ, ಫಜಲ್ಹಕ್ ಫಾರೂಕಿ, ನಿತೀಶ್ ರೆಡ್ಡಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications