IPL 2023: ಈ ಬಾರಿ ಕಪ್ ಗೆಲ್ಲುವ ತಂಡ ಯಾವುದೆಂದು ತಿಳಿಸಿದ ಆರ್‌ಸಿಬಿ ನಾಯಕ ಫಾಫ್ ಡು ಪ್ಲೆಸಿಸ್

ಇಂದು ( ಮೇ 28 ) ರಾತ್ರಿ 8 ಗಂಟೆಗೆ ಅಹ್ಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್ ಪಂದ್ಯದ ಮೂಲಕ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ತೆರೆ ಬೀಳಲಿದೆ.
ಮಾರ್ಚ್ ತಿಂಗಳ ಕೊನೆಯ ದಿನದಂದು ಆರಂಭವಾದ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಅಂತಿಮವಾಗಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಫೈನಲ್ ಪಂದ್ಯಕ್ಕೆ ಲಗ್ಗೆ ಇಟ್ಟಿವೆ.
ಇನ್ನು ಇತ್ತಂಡಗಳು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮುಖಾಮುಖಿಯಾಗಲಿರುವ ಮೂರನೇ ಪಂದ್ಯ ಇದಾಗಿದ್ದು, ಐಪಿಎಲ್‌ನಲ್ಲಿ ಇಲ್ಲಿಯವರೆಗೂ ಒಟ್ಟು 4 ಪಂದ್ಯಗಳಲ್ಲಿ ಕಣಕ್ಕಿಳಿದಿವೆ. ಈ ಪೈಕಿ ಗುಜರಾತ್ ಟೈಟನ್ಸ್ ತಂಡ ಮೂರು ಪಂದ್ಯಗಳಲ್ಲಿ ಗೆದ್ದಿದ್ದು, ಚೆನ್ನೈ ಸೂಪರ್ ಕಿಂಗ್ಸ್ ಒಂದು ಪಂದ್ಯದಲ್ಲಿ ಮಾತ್ರ ಗೆದ್ದಿದೆ.
ಕಳೆದ ಆವೃತ್ತಿಯ ಎರಡು ಪಂದ್ಯಗಳಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಸೋತಿದ್ದ ಚೆನ್ನೈ ಸೂಪರ್ ಕಿಂಗ್ಸ್ ಈ ಬಾರಿಯ ಲೀಗ್ ಹಂತದ ಒಂದು ಪಂದ್ಯದಲ್ಲಿಯೂ ಸಹ ಒಂದು ಪಂದ್ಯದಲ್ಲಿ ಸೋಲನ್ನು ಕಂಡಿತ್ತು. ಆದರೆ ಇತ್ತೀಚೆಗಷ್ಟೆ ನಡೆದಿದ್ದ ಒಂದನೇ ಕ್ವಾಲಿಫಯರ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗುಜರಾತ್ ಟೈಟನ್ಸ್ ವಿರುದ್ಧ 15 ರನ್‌ಗಳ ಗೆಲುವನ್ನು ಕಂಡು ಮೊದಲ ಗೆಲುವನ್ನು ದಾಖಲಿಸಿತ್ತು.
ಇನ್ನು ಈ ಪಂದ್ಯದಲ್ಲಿ ಸೋತಿದ್ದ ಗುಜರಾತ್ ಟೈಟನ್ಸ್ ನಂತರ ನಡೆದ ಎರಡನೇ ಕ್ವಾಲಿಫಯರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 62 ರನ್‌ಗಳ ಗೆಲುವನ್ನು ದಾಖಲಿಸುವುದರ ಮೂಲಕ ಫೈನಲ್ ಪಂದ್ಯಕ್ಕೆ ಲಗ್ಗೆ ಇಟ್ಟಿದೆ.
ಹೀಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಕಣಕ್ಕಿಳಿದ ಪಂದ್ಯಗಳಲ್ಲಿ ಹೆಚ್ಚು ಪಂದ್ಯಗಳನ್ನು ಗೆದ್ದಿರುವ ಗುಜರಾತ್ ಟೈಟನ್ಸ್ ಮತ್ತೊಮ್ಮೆ ಅದರಲ್ಲಿಯೂ ಫೈನಲ್ ಪಂದ್ಯದಲ್ಲಿ ಎದುರಾಳಿಯಾಗಿ ಕಣಕ್ಕಿಳಿಯಲಿರುವುದು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿ ಬಳಗದಲ್ಲಿ ಆತಂಕವನ್ನೇ ಹೆಚ್ಚು ಸೃಷ್ಟಿಸಿದ್ದು, ಯಾವ ತಂಡ ಗೆಲ್ಲಬಹುದು ಎಂದು ಊಹೆಗಳನ್ನು ಕ್ರಿಕೆಟ್ ಪ್ರೇಮಿಗಳು ಮಾಡುತ್ತಿದ್ದಾರೆ.
ಕೇವಲ ಕ್ರಿಕೆಟ್ ಅಭಿಮಾನಿಗಳು ಮಾತ್ರವಲ್ಲದೇ ಮಾಜಿ ಕ್ರಿಕೆಟಿಗರು ಹಾಗೂ ಹಾಲಿ ಕ್ರಿಕೆಟಿಗರೂ ಸಹ ಈ ಹೈ ವೋಲ್ಟೇಜ್ ಪಂದ್ಯದಲ್ಲಿ ಯಾವ ತಂಡ ಗೆಲ್ಲಬಹುದು ಎಂಬುದನ್ನು ಊಹಿಸುತ್ತಿದ್ದು, ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ನಾಯಕನಾಗಿ ಮುನ್ನಡೆಸಿದ್ದ ಫಾಫ್ ಡು ಪ್ಲೆಸಿಸ್ ಸಹ ಈ ಪಂದ್ಯದಲ್ಲಿ ಯಾವ ತಂಡ ಗೆಲ್ಲಬಹುದು ಎಂಬುದನ್ನು ಊಹಿಸಿದ್ದಾರೆ.
ಸ್ಟಾರ್ ಸ್ಪೋರ್ಟ್ಸ್ ಚರ್ಚೆಯಲ್ಲಿ ಭಾಗವಹಿಸಿದ್ದ ಫಾಫ್ ಡು ಪ್ಲೆಸಿಸ್ ಈ ಪಂದ್ಯ ರೋಚಕ ಹಣಾಹಣಿಗೆ ಸಾಕ್ಷಿಯಾಗಲಿದೆ, ಗುಜರಾತ್ ಟೈಟನ್ಸ್ ತಂಡವನ್ನು ಸೋಲಿಸುವುದು ಅಷ್ಟು ಸುಲಭವಲ್ಲ ಎಂದಿದ್ದಾರೆ. ಆದರೂ ಸಹ ಒಂದನೇ ಕ್ವಾಲಿಫಯರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಸೋಲಿಸಿದ ಚೆನ್ನೈ ಸೂಪರ್ ಕಿಂಗ್ಸ್ ಈ ಬಾರಿ ಪ್ರಶಸ್ತಿ ಗೆಲ್ಲುವ ತಂಡವಾಗಿದೆ ಎಂದಿರುವ ಫಾಪ್ ಡು ಪ್ಲೆಸಿಸ್ ಈ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ ಚಾಣಾಕ್ಷದ ನಾಯಕತ್ವ ಕೆಲಸ ಮಾಡಲಿದೆ, ಸಿಎಸ್‌ಕೆ ಟ್ರೋಫಿ ಎತ್ತಿ ಹಿಡಿಯಲಿದೆ ಎಂದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications