IPL 2023 Retention : ಡೆಲ್ಲಿ ಕ್ಯಾಪಿಟಲ್ಸ್ ಬಿಡುಗಡೆ ಮಾಡಿದ ಹಾಗೂ ಉಳಿಸಿಕೊಂಡ ಆಟಗಾರರ ಸಂಪೂರ್ಣ ಪಟ್ಟಿ

ಇತ್ತೀಚಿನ ಆವೃತ್ತಿಗಳಲ್ಲಿ ಅದ್ಭುತ ಪ್ರದರ್ಶನ ನೀಡಿ ಭರವಸೆ ಮೂಡಿಸಿದ್ದ ಡೆಲ್ಲಿ ಕ್ಯಾಪಿಟಲ್ಸ್ ಕಳೆದ ಆವೃತ್ತಿಯಲ್ಲಿ ಮುಗ್ಗರಿಸಿತ್ತು. ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಆಫ್ ಹಂತಕ್ಕೇರಲು ವಿಫಲವಾಗಿತ್ತು. ಇದೀಗ ಮತ್ತೊಂದು ಆವೃತ್ತಿಗಾಗಿ ತಂಡವನ್ನು ಸಜ್ಜುಗೊಳಿಸುವ ಪ್ರಯತ್ನಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ಮುಂದಾಗಿದೆ. ಆದರೆ ಈ ಬಾರಿಯ ಹರಾಜಿನಲ್ಲಿ ದೊಡ್ಡ ಬದಲಾವಣೆಗೆ ಮುಂದಾಗಿಲ್ಲ ಎಂಬುದು ಗಮನಾರ್ಹ ಅಂಶ.
ಈ ಬಾರಿಯ ಹರಾಜಿಗೂ ಮುನ್ನ ರೀಟೆನ್ಶನ್ ಪ್ರಕ್ರಿಯೆಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಐವರು ಆಟಗಾರರನ್ನು ಮಾತ್ರ ತಂಡದಿಂದ ಬಿಡುಗಡೆಗೊಳಿಸಿದೆ. ಅದರಲ್ಲೂ ಶಾರ್ದೂಲ್ ಠಾಕೂರ್ ಅವರನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಜೊತೆಗೆ ಟ್ರೇಡ್ ಮಾಡಿಕೊಂಡಿದೆ ಡೆಲ್ಲಿ ಕ್ಯಾಪಿಟಲ್ಸ್. ಜೊತೆಗೆ ಅಮನ್ ಖಾನ್ ಅವರನ್ನು ಕೆಕೆಆರ್ ತಂಡದಿಂದ ತನ್ನ ತಂಡಕ್ಕೆ ಟ್ರೇಡ್ ಮೂಲಕ ಸೇರ್ಪಡೆಗೊಳಿಸಿದೆ.
ಡೆಲ್ಲಿ ಕ್ಯಾಪಿಟಲ್ಸ್ ಉಳಿಸಿಕೊಂಡಿರುವ ಆಟಗಾರರು: ರಿಷಬ್ ಪಂತ್ (ನಾಯಕ), ಡೇವಿಡ್ ವಾರ್ನರ್, ಪೃಥ್ವಿ ಶಾ, ರಿಪಾಲ್ ಪಟೇಲ್, ರೋವ್ಮನ್ ಪೊವೆಲ್, ಸರ್ಫರಾಜ್ ಖಾನ್, ಯಶ್ ಧುಲ್, ಮಿಚೆಲ್ ಮಾರ್ಷ್, ಲಲಿತ್ ಯಾದವ್, ಅಕ್ಸರ್ ಪಟೇಲ್, ಅನ್ರಿಚ್ ನೋರ್ಟ್ಜೆ, ಚೇತನ್ ಸಕರಿಯಾ, ಕಮಲೇಶ್ ನಾಗರಕೋಟಿ, ಖಲೀಲ್ ಅಹ್ಮದ್, ಲುಂಗಿ ಎನ್ಗಿಡಿ, ಮುಸ್ತಾಫಿಜುರ್ ರೆಹಮಾನ್, ಅಮನ್ ಖಾನ್, ಕುಲದೀಪ್ ಯಾದವ್, ಪ್ರವೀಣ್ ದುಬೆ, ವಿಕ್ಕಿ ಓಸ್ತ್ವಾಲ್
ಬಿಡುಗಡೆಯಾದ ಆಟಗಾರರು: ಶಾರ್ದೂಲ್ ಠಾಕೂರ್ (ಟ್ರೇಡ್), ಟಿಮ್ ಸೀಫರ್ಟ್, ಅಶ್ವಿನ್ ಹೆಬ್ಬಾರ್, ಶ್ರೀಕರ್ ಭರತ್, ಮನದೀಪ್ ಸಿಂಗ್
ಟ್ರೇಡ್ ಮೂಲಕ ಸೇರ್ಪಡೆಯಾದ ಆಟಗಾರ: ಅಮನ್ ಖಾನ್(ಕೆಕೆಆರ್ ಫ್ರಾಂಚೈಸಿಯಿಂದ)
ಮುಂದಿನ ಡಿಸೆಂಬರ್ 23ರಂದು ಕೊಚ್ಚಿಯಲ್ಲಿ ನಡೆಯಲಿರುವ ಹರಾಜು ಪ್ರಕ್ರಿಯೆಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 19.45 ಕೋಟಿ ಮೊತ್ತವನ್ನು ತನ್ನ ಪರ್ಸ್‌ನಲ್ಲಿ ಉಳಿಸಿಕೊಂಡಿದೆ. ಇಬ್ಬರು ವಿದೇಶಿ ಆಟಗಾರರ ಸ್ಥಾನ ಖಾಲಿಯಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications