For Quick Alerts
ALLOW NOTIFICATIONS  
For Daily Alerts
 

IPL 2023: ಫೈನಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ vs ಗುಜರಾತ್ ಟೈಟನ್ಸ್ ಸೆಣೆಸಾಟ: ಯಾರಾಗಲಿದ್ದಾರೆ 16ನೇ ಆವೃತ್ತಿಯ ಚಾಂಪಿಯನ್!

ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 16ನೇ ಆವೃತ್ತಿ ಅಂತ್ಯವಾಗಲು ಇನ್ನು ಕೇವಲ ಒಂದು ಪಂದ್ಯ ಮಾತ್ರವೇ ಬಾಕಿಯಿದೆ. ಟೂರ್ನಿಯಲ್ಲಿ ಎರಡು ತಂಡಗಳೂ ಮಾತ್ರವೇ ಉಳಿದುಕೊಂಡಿದ್ದು ಪ್ರಶಸ್ತಿಗಾಗಿ ಹೋರಾಟ ನಡೆಸಲಿದೆ. ನಾಲ್ಕು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಧೋನಿ ನಾಯಕತ್ವದಲ್ಲಿ ಐಪಿಎಲ್ ಇತಿಹಾಸದಲ್ಲಿ 10ನೇ ಬಾರಿಗೆ ಫೈನಲ್‌ಗೆ ಪ್ರವೇಶಿಸಿದ್ದರೆ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ತಂಡ ಸತತ ಎರಡನೇ ಬಾರಿಗೆ ಟ್ರೋಫಿ ಎತ್ತಿಹಿಡಿಯುವ ಕನಸು ಕಾಣುತ್ತಿದೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿಯ ಟೂರ್ನಿಯಲ್ಲಿ ಉತ್ತಮ ಆರಂಭವನ್ನು ಪಡೆದುಕೊಂಡಿರಲಿಲ್ಲ. ಒಂದು ಹಂತದಲ್ಲಿ ಅಂಕಪಟ್ಟಿಯಲ್ಲಿಯೂ ಕೆಳಗಿತ್ತು. ಆದರೆ ಅದ್ಭುತವಾಗಿ ಕಮ್‌ಬ್ಯಾಕ್ ಮಾಡಿದ ಸಿಎಸ್‌ಕೆ ತಂಡ ಲೀಗ್ ಹಂತದ ಅಂತ್ಯದ ವೇಳೆಗೆ ಎರಡನೇ ಸ್ಥಾನಿಯಾಗಿ ಪ್ಲೇಆಫ್‌ಗೆ ಪ್ರವೇಶ ಪಡೆದುಕೊಂಡಿತ್ತು. ಪ್ಲೇಆಫ್‌ನಲ್ಲಿ ಗುಜರಾತ್ ಟೈಟನ್ಸ್ ತಂಡದ ವಿರುದ್ಧ ಅಮೋಘ ಗೆಲುವು ಸಾಧಿಸಿ ಫೈನಲ್‌ಗೆ ಪ್ರವೇಶ ಪಡೆಯುವಲ್ಲಿ ಯಶಸ್ವಿಯಾಗಿದೆ.

IPL 2023: CSK and GT eye on another IPL Trophy: Who will be the champion of the 16th edition!

ಕಳೆದ ಮಂಗಳವಾರ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಪ್ಲೇಆಫ್ ಹಂತದ ಮೊದಲ ಪಂದ್ಯ ಕ್ವಾಲಿಫಯರ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲಿಗೆ ಬ್ಯಾಟಿಂಗ್ ಮಾಡಿದ ಸಿಎಸ್‌ಕೆ ಗಾಯಕ್ವಾಡ್ ಹಾಗೂ ಕಾನ್ವೆ ಅದ್ಭುತ ಬ್ಯಾಟಿಂಗ್‌ನ ಪ್ರದರ್ಶನದಿಂದಾಗಿ 172 ರನ್‌ಗಳನ್ನು ಗಳಿಸಿತ್ತು.

ಈ ಗುರಿಯನ್ನು ಬೆನ್ನಟ್ಟಿದ ಜಿಟಿ ತಂಡಕ್ಕೆ ಆರಂಭದಿಂದಲೇ ಆಘಾತ ಉಂಟಾಯಿತು. ಶುಬ್ಮನ್ ಗಿಲ್ ಹೊರತುಪಡಿಸಿ ಉಳಿದ ಆಟಗಾರರಿಂದ ಉತ್ತಮ ಪ್ರದರ್ಶನ ಬಾರಲಿಲ್ಲ. ಹೀಗಾಗಿ ಇದೇ ಮೊದಲ ಬಾರಿಗೆ ಗುಜರಾಥ್ ಟೈಟನ್ಸ್ ತಂಡ ತನ್ನ ಎಲ್ಲಾ ವಿಎಕಟ್ ಕಳೆದುಕೊಂಡು 157 ರನ್‌ಗಳಿಗೆ ಹೋರಾಟ ಅಂತ್ಯಗೋಲಿಸಿತು. ಈ ಮೂಲಕ ಸಿಎಸ್‌ಕೆ ತಂಡ ಮೊದಲ ಕ್ವಾಲಿಫಯರ್‌ನಲ್ಲಿ ಗೆದ್ದು ನೇರವಾಗೊ ಫೈನಲ್‌ಗೆ ಪ್ರವೇಶ ಪಡೆದುಕೊಂಡಿತ್ತು.

ಇನ್ನು ಮತ್ತೊಂದೆಡೆ ಗುಜರಾತ್ ಟೈಟನ್ಸ್ ತಂಡದ ಹಾದಿ ಆರಂಭದಿಂದಲೇ ಅದ್ಭುತವಾಗಿತ್ತು. ಕಳೆದ ಬಾರಿಯ ಚಾಂಪಿಯನ್ ತಂಡವಾಗಿರುವ ಜಿಟಿ ಅದೇ ಪ್ರದರ್ಶನವನ್ನು ಈ ಬಾರಿಯ ಐಪಿಎಲ್‌ನಲ್ಲಿಯೂ ನೀಡುವಲ್ಲಿ ಆರಂಭದಿಂದಲೂ ಯಶಸ್ವಿಯಾಯಿತು. ಟೂರ್ನಿಯ ಬಹುತೇಕ ಅವಧಿಯಲ್ಲಿ ಜಿಟಿ ತಂಡ ನಂಬರ್ 1 ತಂಡವಾಗಿಯೇ ಇತ್ತು ಮಾತ್ರವಲ್ಲದೆ ನಂಬರ್ 1 ತಂಡವಾಗಿಯೇ ಪ್ಲೇಆಫ್‌ಗೆ ಪ್ರವೇಶ ಪಡೆದುಕೊಂಡಿತ್ತು.

ಸಿಎಸ್‌ಕೆ ವಿರುದ್ಧ ಮೊದಲ ಕ್ವಾಲಿಫಯರ್‌ನಲ್ಲಿ ಸೋಲು ಅನುಭವಿಸಿದ ಬಳಿಕ ಎರಡನೇ ಕ್ವಾಲಿಫಯರ್‌ನಲ್ಲಿ ಮುಂಬೈ ತಂಡವನ್ನು ಎದುರಿಸಿದ ಗುಜರಾತ್ ಟೈಮನ್ಸ್ ತಂಡಕ್ಕೆ ಮತ್ತೊಮ್ಮೆ ಶುಬ್ಮನ್ ಗಿಲ್ ಆಸರೆಯಾದರು.ಶುಬ್ಮನ್ ಗಿಲ್ ಅವರ ಅಮೋಘ 129 ರನ್‌ಗಳ ಕೊಡುಗೆಯ ಕಾರಣದಿಂದಾಗಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಬರೊಬ್ಬರಿ 234 ರನ್‌ಗಳ ಗುರಿಯನ್ನು ನಿಗದಿಪಡಿಸಿತು. ಈ ಮಹತ್ವದ ಪಂದ್ಯದಲ್ಲಿ ಬೃಹತ್ ಗುರಿ ಪಡೆದ ಮುಂಬೈ ಇಂಡಿಯನ್ಸ್ ಪರವಾಗಿ ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ ಹಾಗೂ ಕ್ಯಾಮರೂನ್ ಗ್ರೀನ್ ಮಾತ್ರವೇ ಉತ್ತಮ ಪ್ರದರ್ಶಣ ನೀಡಲು ಯಶಸ್ವಿಯಾದರು. 171 ರನ್‌ಗಳಿಗೆ ಮುಂಬೈ ಆಲೌಟ್ ಆಗುವ ಮೂಲಕ ಈ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಅಧಿಕೃತವಾಗಿ ಫೈನಲ್‌ಗೆ ಪ್ರವೇಶ ಪಡೆದುಕೊಂಡಿದೆ.

ಇನ್ನು ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಭಾನುವಾರ ಈ ಬಾರಿಯ ಐಪಿಎಲ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡ ಈ ಟೂರ್ನಿಯ ಚಾಂಪಿಯನ್ ಎನಿಸಿಕೊಳ್ಳಲಿದ್ದು ಧೋನಿ ನಾಯಕತ್ವ್ದ ಸಿಎಸ್‌ಕೆ ಐದನೇ ಬಾರಿಗೆ ಚಾಂಪಿಯನ್ ಎನಿಸಿಕೊಳ್ಳಲಿದೆಯಾ ಅಥವಾ ಗುಜರಾತ್ ಟೈಟನ್ಸ್ ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಲಿದೆಯಾ ಎಂಬುದು ಕುತೂಹಲ ಮೂಡಿಸಿದೆ.

Story first published: Saturday, May 27, 2023, 9:06 [IST]
Other articles published on May 27, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+