Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023: ಚೆನ್ನೈ ಬೌಲಿಂಗ್ ದಾಳಿಗೆ ಮಣಿದ ಗುಜರಾತ್; ಫೈನಲ್ ತಲುಪಿದ ಸೂಪರ್ ಕಿಂಗ್ಸ್

IPL 2023: CSK beats champions GT by 15 runs in qualifier 1 and enters final

ಕಳೆದ ಮಾರ್ಚ್ ತಿಂಗಳಾಂತ್ಯದಲ್ಲಿ ಶುರುವಾಗಿದ್ದ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಮುಕ್ತಯದ ಸನಿಹಕ್ಕೆ ಬಂದಿದೆ. ಲೀಗ್ ಹಂತದಲ್ಲಿ ಹೆಚ್ಚು ಪಂದ್ಯಗಳನ್ನು ಗೆದ್ದ ಗುಜರಾತ್ ಟೈಟನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಪ್ಲೇಆಫ್ ಸುತ್ತಿಗೆ ಲಗ್ಗೆ ಇಟ್ಟಿವೆ.

ಅಂಕಪಟ್ಟಿಯಲ್ಲಿ ಟಾಪ್ 2 ಸ್ಥಾನಗಳನ್ನು ಪಡೆದುಕೊಂಡಿದ್ದ ಗುಜರಾತ್ ಟೈಟನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಕ್ವಾಲಿಫಯರ್ 1 ಪಂದ್ಯದಲ್ಲಿ ಮುಖಾಮುಖಿಯಾಗಿವೆ. ಈ ಪಂದ್ಯ ಇಂದು ( ಮೇ 23 ) ಚೆನ್ನೈನ ಎಂಎ ಚಿದಂಬರಂ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದು, ಗುಜರಾತ್ ಟೈಟನ್ಸ್ ತಂಡವನ್ನು 15 ರನ್‌ಗಳಿಂದ ಮಣಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ಫೈನಲ್ ತಲುಪಿದೆ.

ಟಾಸ್ ಗೆದ್ದ ಗುಜರಾತ್ ಟೈಟನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಫೀಲ್ಡಿಂಗ್ ಆಯ್ದುಕೊಂಡು ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 172 ರನ್ ಕಲೆಹಾಕಿ ಗುಜರಾತ್ ಟೈಟನ್ಸ್ ತಂಡಕ್ಕೆ ಗೆಲ್ಲಲು 173 ರನ್‌ಗಳ ಗುರಿಯನ್ನು ನೀಡಿತ್ತು.

ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲವಾದ ಗುಜರಾತ್ ಟೈಟನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಬೌಲಿಂಗ್ ದಾಳಿಗೆ ಮಣಿದು 20 ಓವರ್‌ಗಳಲ್ಲಿ 157 ರನ್‌ಗಳಿಗೆ ಆಲ್‌ಔಟ್ ಆಗಿ 15 ರನ್‌ಗಳ ಅಂತರದ ಸೋಲನ್ನು ಅನುಭವಿಸಿದೆ.

ಚೆನ್ನೈ ಸೂಪರ್ ಕಿಂಗ್ಸ್ ಇನ್ನಿಂಗ್ಸ್: ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆರಂಭಿಕರಾಗಿ ಕಣಕ್ಕಿಳಿದ ರುತುರಾಜ್ ಗಾಯಕ್ವಾಡ್ ಹಾಗೂ ಹಾಗೂ ಡಿವಾನ್ ಕಾನ್ವೆ ಆಸರೆಯಾಗಿದ್ದಾರೆ. ಗಾಯಕ್ವಾಡ್ 44 ಎಸೆತಗಳಲ್ಲಿ 60 ರನ್ ಬಾರಿಸಿದರೆ, ಡಿವಾನ್ ಕಾನ್ವೆ 34 ಎಸೆತಗಳಲ್ಲಿ 40 ರನ್ ಬಾರಿಸಿದರು. ಇನ್ನುಳಿದಂತೆ ಶಿವಮ್ ದುಬೆ 1, ಅಜಿಂಕ್ಯ ರಹಾನೆ 17, ಅಂಬಾಟಿ ರಾಯುಡು 17, ರವೀಂದ್ರ ಜಡೇಜಾ 22 ರನ್, ಎಂ ಎಸ್ ಧೋನಿ 1 ಹಾಗೂ ಮೊಯಿನ್ ಅಲಿ ಅಜೇಯ 9 ರನ್ ಗಳಿಸಿದರು.

ಗುಜರಾತ್ ಟೈಟನ್ಸ್ ಪರ ಮೊಹಮ್ಮದ್ ಶಮಿ ಹಾಗೂ ಮೋಹಿತ್ ಶರ್ಮಾ ತಲಾ ಎರಡು ವಿಕೆಟ್ ಪಡೆದರೆ, ದರ್ಶನ್ ನಾಲ್ಕಂಡೆ, ರಶೀದ್ ಖಾನ್ ಹಾಗೂ ನೂರ್ ಅಹ್ಮದ್ ತಲಾ ಒಂದೊಂದು ವಿಕೆಟ್ ಪಡೆದರು.

ಗುಜರಾತ್ ಟೈಟನ್ಸ್: ಚೆನ್ನೈ ಸೂಪರ್ ಕಿಂಗ್ಸ್ನ ನೀಡಿದ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟನ್ಸ್ ಪರ ಆರಂಭದಲ್ಲಿ ಶುಬ್‌ಮನ್ ಗಿಲ್ ಹಾಗೂ ಅಂತಿಮ ಹಂತದಲ್ಲಿ ರಶೀದ್ ಖಾನ್ ಉತ್ತಮ ಪ್ರದರ್ಶನ ನೀಡಿದ್ದು ಬಿಟ್ಟರೆ ಇನ್ಯಾವ ಆಟಗಾರನೂ ಸಹ ತಂಡಕ್ಕೆ ಅಗತ್ಯವಿದ್ದ ಆಟವನ್ನಾಡಲೇ ಇಲ್ಲ.

ಆರಂಭಿಕ ಆಟಗಾರರಾಗಿ ಶುಬ್‌ಮನ್ ಗಿಲ್ ಹಾಗೂ ವೃದ್ಧಿಮಾನ್ ಸಹಾ ಕಣಕ್ಕಿಳಿದರು. ವೃದ್ಧಿಮಾನ್ ಸಹಾ 11 ಎಸೆತಗಳಲ್ಲಿ 13 ರನ್ ಗಳಿಸಿದರೆ, ಶುಬ್‌ಮನ್ ಗಿಲ್ 38 ಎಸೆತಗಳಲ್ಲಿ 42 ರನ್ ದಾಖಲಿಸಿದರು. ಇನ್ನುಳಿದಂತೆ ನಾಯಕ ಹಾರ್ದಿಕ್ ಪಾಂಡ್ಯ 8 ರನ್, ದಾಸುನ್ ಶನಕ 17 ರನ್, ಡೇವಿಡ್ ಮಿಲ್ಲರ್ 4 ರನ್, ವಿಜಯ್ ಶಂಕರ್ 14 ರನ್, ರಾಹುಲ್ ತೆವಾಟಿಯಾ 3 ರನ್, ರಶೀದ್ ಖಾನ್ 16 ಎಸೆತಗಳಲ್ಲಿ 30 ರನ್, ಮೊಹಮ್ಮದ್ ಶಮಿ 5 ರನ್, ದರ್ಶನ್ ನಾಲ್ಕಂಡೆ ಡಕ್ಔಟ್ ಹಾಗೂ ನೂರ್ ಅಹ್ಮದ್ ಅಜೇಯ 7 ರನ್ ಕಲೆಹಾಕಿದರು.

ಚೆನ್ನೈ ಸೂಪರ್ ಕಿಂಗ್ಸ್ ದೀಪಕ್ ಚಹಾರ್, ಮಹೀಶ್ ತೀಕ್ಷಣ, ರವೀಂದ್ರ ಜಡೇಜಾ ಹಾಗೂ ಮತೀಶ ಪತಿರಾಣ ತಲಾ ಎರಡು ವಿಕೆಟ್ ಪಡೆದರು ಮತ್ತು ತುಷಾರ್ ದೇಶಪಾಂಡೆ ಒಂದು ವಿಕೆಟ್ ಪಡೆದರು.

ಪಂದ್ಯದಲ್ಲಿ ಕಣಕ್ಕಿಳಿಯುವ ಆಡುವ ಬಳಗಗಳು:

ಗುಜರಾತ್ ಟೈಟಾನ್ಸ್ (ಪ್ಲೇಯಿಂಗ್ XI): ಶುಭಮನ್ ಗಿಲ್, ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ(ನಾಯಕ), ದಸುನ್ ಶನಕ, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ದರ್ಶನ್ ನಲ್ಕಂಡೆ, ಮೋಹಿತ್ ಶರ್ಮಾ, ನೂರ್ ಅಹ್ಮದ್, ಮೊಹಮ್ಮದ್ ಶಮಿ

ಚೆನ್ನೈ ಸೂಪರ್ ಕಿಂಗ್ಸ್ (ಪ್ಲೇಯಿಂಗ್ XI): ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಅಂಬಟಿ ರಾಯುಡು, ಶಿವಂ ದುಬೆ, ಮೊಯೀನ್ ಅಲಿ, ರವೀಂದ್ರ ಜಡೇಜಾ, ಎಂಎಸ್ ಧೋನಿ(ನಾಯಕ, ವಿಕೆಟ್ ಕೀಪರ್), ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ

Story first published: Tuesday, May 23, 2023, 23:37 [IST]
Other articles published on May 23, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+