GT vs CSK Final: ಪಂದ್ಯಕ್ಕೂ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್ ರನ್ನರ್ ಅಪ್ ಎಂದು ಘೋಷಣೆ!

ಇಂದು ( ಮೇ 29 ) ಅಹ್ಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳ ನಡುವೆ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಫೈನಲ್ ಪಂದ್ಯ ಜರುಗುತ್ತಿದೆ.
ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂ ಎಸ್ ಧೋನಿ ಫೀಲ್ಡಿಂಗ್ ಆಯ್ದುಕೊಂಡು ಎದುರಾಳಿ ಗುಜರಾತ್ ಟೈಟನ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದರು.
ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟನ್ಸ್ ವೃದ್ಧಿಮಾನ್ ಸಹಾ ಅರ್ಧಶತಕ ಹಾಗೂ ಸಾಯಿ ಸುದರ್ಶನ್ ಅಬ್ಬರದ ಬ್ಯಾಟಿಂಗ್ ನೆರವಿನಿಂದ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 214 ರನ್ ಕಲೆಹಾಕಿದ್ದು ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಗೆಲ್ಲಲು 215 ರನ್‌ಗಳ ಕಠಿಣ ಗುರಿಯನ್ನು ನೀಡಿದೆ.
ಹೀಗೆ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಅಬ್ಬರಿಸಿರುವ ಗುಜರಾತ್ ಟೈಟನ್ಸ್ ಬೃಹತ್ ಗುರಿಯನ್ನು ನೀಡಿದ್ದು, ಮೊದಲ ಇನ್ನಿಂಗ್ಸ್ ಮುಕ್ತಾಯಕ್ಕೆ ಮೇಲುಗೈ ಸಾಧಿಸಿದೆ. ಹೀಗೆ ಪಂದ್ಯ ದೊಡ್ಡ ಮಟ್ಟದಲ್ಲಿ ಜರುಗುತ್ತಿದ್ದು, ಈ ಪಂದ್ಯ ಆರಂಭಕ್ಕೂ ಮುನ್ನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ರನ್ನರ್ ಅಪ್ ಎಂಬ ಬರಹ ಡಿಸ್‌ಪ್ಲೇನಲ್ಲಿ ಬರೆಯಲಾಗಿತ್ತು.
ಡಿಸ್‌ಪ್ಲೇನಲ್ಲಿ ಈ ರೀತಿ ಬೋರ್ಡ್ ಪ್ರದರ್ಶನವಾಗಿದ್ದು ನಿನ್ನೆ ( ಮೇ 28 ) ನಡೆದ ಮಳೆಯಿಂದ ಪಂದ್ಯ ರದ್ದಾಗುವ ಮುನ್ನ. ಹೌದು, ನಿನ್ನೆ ಮಳೆ ಬರುವ ಮುನ್ನವೇ ಈ ರೀತಿಯ ಬರಹ ಪ್ರದರ್ಶನವಾಗಿತ್ತು. ಸದ್ಯ ಈ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್ನು ಸ್ಕ್ರೀನ್ ಟೆಸ್ಟಿಂಗ್ ನಡೆಸುವಾಗ ಕಂಡು ಬಂದ ದೃಶ್ಯವಾಗಿದೆ ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications