ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳ ನಡುವಿನ ಐಪಿಎಲ್ ಫೈನಲ್ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದೆ. ಎರಡು ಬಲಿಷ್ಠ ತಂಡಗಳು ಕೂಡ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು ಟ್ರೋಪಿ ಎತ್ತಿ ಹಿಡಿಯಲು ಕೊನೆಯ ಹಂತದ ಕಸರತ್ತು ನಡೆಸುತ್ತಿದೆ. ಈ ಪಂದ್ಯದಲ್ಲಿ ಎಲ್ಲರ ಕಣ್ಣು ಕೂಡ ಗುಜರಾತ್ ಟೈಟನ್ಸ್ ತಂಡದ ಯುವ ಆಟಗಾರ ಶುಬ್ಮನ್ ಗಿಲ್ ಮೇಲಿದೆ.
ಈ ಬಾರಿಯ ಐಪಿಎಲ್‌ನಲ್ಲಿ ಅಮೋಘ ಫಾರ್ಮ್‌ನಲ್ಲಿರುವ ಶುಬ್ಮನ್ ಗಿಲ್ ಟೂರ್ನಿಯ ಕೊನೆಯ ಹಂತದಲ್ಲಿ ಎದುರಾಳಿ ತಂಡಗಳಿಗೆ ಮತ್ತಷ್ಟು ಅಪಾಯಕಾರಿಯಾಗಿದ್ದಾರೆ. ಶುಬ್ಮನ್ ಗಿಲ್ ಕಳೆದ ನಾಲ್ಕು ಪಂದ್ಯಗಳಲ್ಲಿ ಮೂರು ಶತಕಗಳನ್ನು ಸಿಡಿಸಿ ಆರ್ಭಟಿಸಿದ್ದಾರೆ. ಹೀಗಾಗಿ ಟೂರ್ನಿಯಲ್ಲಿ ಈವರೆಗೆ ಆಡಿದ 16 ಪಂದ್ಯಗಳಿಂದ ಅವರು 851 ರನ್‌ಗಳನ್ನು ಗಳಿಸಿದ್ದು ಆರೆಂಜ್ ಕ್ಯಾಫ್ ಧರಿಸಿದ್ದಾರೆ. ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೂ ಶುಬ್ಮನ್ ಗಿಲ್ ಕಟ್ಟಿ ಹಾಕುವುದು ಈಗ ದೊಡ್ಡ ಸವಾಲಾಗಿದೆ.

ಈ ಹಿನ್ನೆಲೆಯಲ್ಲಿ ಮಾಜಿ ಕ್ರಿಕೆಟಿಗ ಹಾಗೂ ಕಾಮೆಂಟೇಟರ್ ಸಂಜಯ್ ಮಂಜ್ರೇಕರ್ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಶುಬ್ಮನ್ ಗಿಲ್ ಅವರನ್ನು ಕಟ್ಟಿ ಹಾಕಲು ಸಲಹೆ ನೀಡಿದ್ದಾರೆ. ಶುಬ್ಮನ್ ಗಿಲ್ ವಿರುದ್ಧ ಯಾವ ರೀತಿಯ ರಣತಂತ್ರ ಹೂಡಬೇಕು ಎಂದು ಮಂಜ್ರೇಕರ್ ವಿವರಿಸಿದ್ದಾರೆ. ಕ್ವಾಲಿಫಯರ್ ಪಂದ್ಯದಲ್ಲಿ ಸಿಎಸ್‌ಕೆ ಹಾಗೂ ಗುಜರಾತ್ ಟೈಟನ್ಸ್ ಮುಖಾಮುಖಿಯಾಗಿದ್ದಾಗ ಗಿಲ್ 42 ರನ್‌ಗಳಿಗೆ ವಿಕೆಟ್ ಕಳೆದುಕೊಂಡಿದ್ದರು.
ಶುಬ್ಮನ್ ಗಿಲ್ ಅವರನ್ನು ಕಟ್ಟಿ ಹಾಕುವ ನಿಟ್ಟಿನಲ್ಲಿ ಸಿಎಸ್‌ಕೆ ತಂಡಕ್ಕೆ ಮಂಜ್ರೇಕರ್ ಈ ಸಲಹೆ ನೀಡಿದ್ದಾರೆ. "ಸಿಎಸ್‌ಕೆ ತನ್ನ ಬೌಲಿಂಗ್ ದಾಳಿಯನ್ನು ದೀಪಕ್ ಚಹರ್ ಅವರಿಂದ ಆರಂಭಿಸಬೇಕು. ಆತ ಸ್ವಿಂಗ್ ಬೌಲರ್ ಆಗಿದ್ದು ಚೆಂಡು ಒಳಗೆ ಬರುತ್ತದೆ. ಈ ಸಂದರ್ಭದಲ್ಲಿ ಗಿಲ್ ಫ್ರಂಟ್‌ಫೂಟ್‌ನ ಬದಲಿಗೆ ಬ್ಯಾಕ್‌ಫೂಟ್‌ನಲ್ಲಿರುತ್ತಾರೆ. ಇದು ಅವರನ್ನು ಔಟ್ ಮಾಡಲು ಒಂದು ಅವಕಾಶ. ಸ್ಪಿನ್ನರ್‌ಗಳನ್ನು ಬೇಗನೆ ಯಾಕೆ ಕಣಕ್ಕಿಳಿಸಬೇಕು ಎಂದರೆ ತುಷಾರ್ ದೇಶ್‌ಪಾಂಡೆ ಅವರನ್ನು ಗಿಲ್ ಬಹಳ ಸುಲಭವಾಗಿ ಎದುರಿಸುತ್ತಾರೆ" ಎಂದಿದ್ದಾರೆ ಸಂಜಯ್ ಮಂಜ್ರೇಕರ್.
ಚೆನ್ನೈ ಸೂಪರ್ ಕಿಂಗ್ಸ್: ಎಂಎಸ್ ಧೋನಿ(ನಾಯಕ), ಋತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಮೊಯಿನ್ ಅಲಿ, ಸುಭ್ರಾಂಶು ಸೇನಾಪತಿ, ಅಂಬಾಟಿ ರಾಯುಡು, ರವೀಂದ್ರ ಜಡೇಜಾ, ಶಿವಂ ದುಬೆ, ರಾಜವರ್ಧನ್ ಹಂಗರ್ಗೇಕರ್, ಡ್ವೈನ್ ಪ್ರಿಟೋರಿಯಸ್, ಮಿಚೆಲ್ ಸ್ಯಾಂಟ್ನರ್, ಮಹೇಶ್ ತೀಕ್ಷಣ, ಪ್ರಶಾಂತ್ ಸೋಲಂಕಿ, ದೀಪಕ್ ಚಾಹರ್, ಮುಖೇಶ್ ಚೌಧರಿ, ಸಿಮರ್ಜೀತ್ ಸಿಂಗ್, ತುಷಾರ್ ದೇಶಪಾಂಡೆ, ಮಥೀಶ ಪತಿರಾನ, ಬೆನ್ ಸ್ಟೋಕ್ಸ್, ಸಿಸಂದಾ ಮಗಲಾ, ಅಜಿಂಕ್ಯ ರಹಾನೆ, ಶೇಕ್ ರಶೀದ್, ನಿಶಾಂತ್ ಸಿಂಧು, ಅಜಯ್ ಮಂಡಲ್, ಭಗತ್ ವರ್ಮಾ, ಆಕಾಶ್ ಸಿಂಗ್
ಗುಜರಾತ್ ಟೈಟನ್ಸ್: ಹಾರ್ದಿಕ್ ಪಾಂಡ್ಯ(ನಾಯಕ), ಶುಬ್ಮನ್ ಗಿಲ್, ಸಾಯಿ ಸುದರ್ಶನ್, ವೃದ್ಧಿಮಾನ್ ಸಹಾ, ಮ್ಯಾಥ್ಯೂ ವೇಡ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ಅಭಿನವ್ ಮನೋಹರ್, ವಿಜಯ್ ಶಂಕರ್, ರಶೀದ್ ಖಾನ್, ಸಾಯಿ ಕಿಶೋರ್, ನೂರ್ ಅಹ್ಮದ್, ಜಯಂತ್ ಯಾದವ್, ಅಲ್ಜಾರಿ ಜೋಸೆಫ್, ಮೊಹಮ್ಮದ್ ಶಮಿ, ಯಶ್ ದಯಾಳ್, ದರ್ಶನ್ ನಲ್ಕಂಡೆ, ಪ್ರದೀಪ್ ಸಾಂಗ್ವಾನ್, ಶಿವಂ ಮಾವಿ, ಜೋಶುವಾ ಲಿಟಲ್, ಕೆಎಸ್ ಭರತ್, ಒಡಿಯನ್ ಸ್ಮಿತ್, ಮೋಹಿತ್ ಶರ್ಮಾ, ಉರ್ವಿಲ್ ಪಟೇಲ್.