ಇಂಡಿಯನ್ ಪ್ರೀಮಿಯರ್ ಲೀಗ್‌ನ 16ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಐತಿಹಾಸಿಕ ದಾಖಲೆಯೊಂದನ್ನು ಬರೆದಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಮೊದಲಿಗೆ ಬ್ಯಾಟಿಂಗ್ ಮಾಡಿರುವ ಗುಜರಾತ್ ಟೈಟನ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಬರೊಬ್ಬರಿ 214 ರನ್ ಕಲೆಹಾಕಿತು. ಇದು ಐಪಿಎಲ್ ಫೈನಲ್ ಪಂದ್ಯದಲ್ಲಿ ತಂಡವೊಂದು ಗಳಿಸಿದ ಅತಿ ಹೆಚ್ಚಿನ ಸ್ಕೋರ್ ಎಂಬ ದಾಖಲೆಯನ್ನು ಬರೆದಿದೆ.
ಇದಕ್ಕೂ ಮುನ್ನ ಈ ದಾಖಲೆ ಸನ್‌ರೈಸರ್ಸ್ ಹೈದರಾಬಾದ್ ತಂಡದ ಹೆಸರಿನಲ್ಲಿತ್ತು. 2016ರ ಐಪಿಎಲ್ ಫೈನಲ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಆರ್‌ಸಿಬಿ ವಿರುದ್ಧ 7 ವಿಕೆಟ್‌ಗಳನ್ನು ಕಳೆದುಕೊಂಡು 208 ರನ್‌ಗಳನ್ನು ದಾಖಲಿಸಿತ್ತು. ಈ ಸ್ಕೋರ್ ಐಪಿಎಲ್ ಫೈನಲ್‌ನಲ್ಲಿ ಈವರೆಗೆ ದಾಖಲಾದ ಅತಿ ಹೆಚ್ಚಿನ ಸ್ಕೋರ್ ಎನಿಸಿಕೊಂಡಿತ್ತು. ಈ ದಾಖಲೆಯನ್ನು ಗುಜರಾತ್ ಟೈಟನ್ಸ್ ಇದೀಗ ಹಿಂದಿಕ್ಕಿದೆ.

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ನಡೆಸಿದ ಗುಜರಾತ್ ಟೈಟನ್ಸ್ ತಂಡ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ನಡೆಸಿರುವ ಗುಜರಾತ್ ಟೈಟನ್ಸ್ ತಂಡ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದೆ. ತಂಡದ ಅನುಭವಿ ಆರಂಭಿಕ ಆಟಗಾರ ವೃದ್ಧಿಮಾನ್ ಸಾಹಾ ಈ ಪಂದ್ಯದಲ್ಲಿ ಅರ್ಧ ಶತಕ ಸಿಡಿಸಿ ಮಿಂಚಿದ್ದು ಜಿಟಿ ತಂಡಕ್ಕೆ ಅದ್ಭುತ ಕೊಡುಗೆ ನೀಡಿದ್ದಾರೆ.
ಈ ಪಂದ್ಯದಲ್ಲಿ ವೃದ್ಧಿಮಾನ್ ಸಾಹಾ ಹಾಗೂ ಶುಬ್ಮನ್ ಗಿಲ್ ಮತ್ತೊಮ್ಮೆ ಜಿಟಿ ತಂಡಕ್ಕೆ ಉತ್ತಮ ಆರಂಬ ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ ಭರ್ಜರಿ 61 ರನ್‌ಗಳ ಜೊತೆಯಾಟ ನೀಡಿದ್ದು ಶುಬ್ಮನ್ ಗಿಲ್ ಔಟಾಗುವ ಮೂಲಕ ಬೇರ್ಪಟ್ಟಿತು. ನಂತರ ವೃದ್ಧಿಮಾನ್ ಸಾಹಾ ಸಾಯಿ ಸುದರ್ಶನ್ ಜೊತೆಗೆ ಮತ್ತೊಂದು ಅದ್ಭುತ ಜೊತೆಯಾಟದಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ 39 ಎಸೆತಗಳನ್ನು ಎದುರಿಸಿದ ಶುಬ್ಮನ್ ಗಿಲ್ 54 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು.
ಇನ್ನು ಈ ಪಂದ್ಯದಲ್ಲಿ ಎಲ್ಲರ ಗಮನಸೆಳೆಯುವಂತಾ ಬ್ಯಾಟಿಂಗ್ ನಡೆಸಿದ್ದು ಯುವ ಆಟಗಾರ ಸಾಯಿ ಸುದರ್ಶನ್. ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಕೊನೆಯ ಹಂತದವರೆಗೂ ಬ್ಯಾಟಿಂಗ್ ನಡೆಸಿದ ಸಾಯಿ ಸುದರ್ಶನ್ ಈ ಫೈನಲ್ ಪಂದ್ಯದಲ್ಲಿ ಶತಕಗಳಿಸುವ ಅದ್ಭುತ ಅವಕಾಶ ಹೊಂದಿದ್ದರು. ಆದರೆ ಕೊನೆಯ ಓವರ್‌ನಲ್ಲಿ ಎಡವಿದ ಯುವ ಆಟಗಾರ 96 ರನ್ ಗಳಿಸಿ ವಿಕೆಟ್ ಕಳೆದುಕೊಳ್ಳುವ ಮೂಲಕ ಸುಂದರ ಇನ್ನಿಂಗ್ಸ್‌ನ್ನು ಅಂತ್ಯಗೊಳಿಸಿದರು.
ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಅಂಬಟಿ ರಾಯುಡು, ರವೀಂದ್ರ ಜಡೇಜಾ, ಎಂಎಸ್ ಧೋನಿ (ಸಿ & ವಿಕೆ), ದೀಪಕ್ ಚಾಹರ್, ಮತೀಶ ಪತಿರಣ, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ
ಬೆಂಚ್: ಶಿವಂ ದುಬೆ, ಮಿಚೆಲ್ ಸ್ಯಾಂಟ್ನರ್, ಸುಭ್ರಾಂಶು ಸೇನಾಪತಿ, ಶೇಕ್ ರಶೀದ್, ಆಕಾಶ್ ಸಿಂಗ್, ಭಗತ್ ವರ್ಮಾ, ನಿಶಾಂತ್ ಸಿಂಧು, ಆರ್ ಎಸ್ ಹಂಗರ್ಗೇಕರ್, ಸಿಮರ್ಜೀತ್ ಸಿಂಗ್, ಪ್ರಶಾಂತ್ ಸೋಲಂಕಿ, ಅಜಯ್ ಜಾದವ್ ಮಂಡಲ್, ಸಿಸಂದಾ ಮಗಳ, ಡ್ವೈನ್ ಪ್ರಿಟೋರಿಯಸ್, ಬೆನ್ ಸ್ಟೋಕ್ಸ್
ಗುಜರಾತ್ ಟೈಟನ್ಸ್: ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಬ್ಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ (ನಾಯಕ), ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೋಹಿತ್ ಶರ್ಮಾ, ನೂರ್ ಅಹ್ಮದ್, ಮೊಹಮ್ಮದ್ ಶಮಿ
ಬೆಂಚ್: ಜೋಶುವಾ ಲಿಟಲ್, ಶ್ರೀಕರ್ ಭರತ್, ಶಿವಂ ಮಾವಿ, ಒಡೆಯನ್ ಸ್ಮಿತ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ದಾಸುನ್ ಶನಕ, ದರ್ಶನ್ ನಲ್ಕಂಡೆ, ಜಯಂತ್ ಯಾದವ್, ಪ್ರದೀಪ್ ಸಾಂಗ್ವಾನ್, ಮ್ಯಾಥ್ಯೂ ವೇಡ್, ಅಭಿನವ್ ಮನೋಹರ್, ಅಲ್ಜಾರಿ ಜೋಸೆಫ್, ಉರ್ವಿಲ್ ಪಟೇಲ್, ಯಶ್ ದಯಾಳ್