IPL 2023 MS Dhoni: ಐಪಿಎಲ್‌ನಲ್ಲಿ ಒಂದೇ ತಂಡಕ್ಕಾಗಿ ಈ ಸಾಧನೆ ಮಾಡಿದ 5ನೇ ಕ್ರಿಕೆಟಿಗನಾದ ಎಂಎಸ್ ಧೋನಿ
ಶುಕ್ರವಾರ, ಮಾರ್ಚ್ 31ರಂದು 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 16ನೇ ಋತುವಿಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ಮತ್ತು ಮಾಜಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಸೆಣಸಾಡಿದವು.
ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಮೊದಲ ಪಂದ್ಯದಲ್ಲಿ ಸಿಎಸ್‌ಕೆ ನಾಯಕ ಎಂಎಸ್ ಧೋನಿ ಕೊನೆಯತ ಓವರ್‌ನಲ್ಲಿ ಡೀಪ್ ಸ್ಕ್ವೇರ್-ಲೆಗ್‌ನ ಮೇಲೆ ತಮ್ಮ ಟ್ರೇಡ್‌ಮಾರ್ಕ್ ಸಿಕ್ಸರ್ ಬಾರಿಸಿ ನೆರೆದಿದ್ದ ಅಭಿಮಾನಿಗಳನ್ನು ರಂಜಿಸಿದರು.

ಇನ್ನಿಂಗ್ಸ್‌ನ ಕೊನೆಯ ಓವರ್‌ನಲ್ಲಿ ಗುಜರಾತ್ ಟೈಟನ್ಸ್ ಬೌಲರ್ ಜೋಶುವಾ ಲಿಟಲ್ ಎಸೆತದಲ್ಲಿ ಎಂಎಸ್ ಧೋನಿ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿದರು. ಅನುಭವಿ ವಿಕೆಟ್ ಕೀಪರ್- ಬ್ಯಾಟ್ಸ್‌ಮನ್ ಧೋನಿ ನಂತರದ ಎಸೆತದಲ್ಲಿ ಅದೇ ಸ್ಥಳದಲ್ಲಿ ಬೌಂಡರಿ ಬಾರಿಸಿದರು. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 178 ರನ್ ಕಲೆಹಾಕಿತು.
ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂಎಸ್ ಧೋನಿ 7 ಎಸೆತಗಳಲ್ಲಿ ಒಂದು ಬೌಂಡರಿ ಮತ್ತು ಒಂದು ಸಿಕ್ಸರ್ ನೆರವಿನೊಂದಿಗೆ ಅಜೇಯ 14 ರನ್ ಗಳಿಸಿದರು. ಕೊನೆಯ ಓವರ್‌ನಲ್ಲಿ ಬಾರಿಸಿದ ಸಿಕ್ಸರ್ ಎಂಎಸ್ ಧೋನಿಗೆ ವಿಶೇಷವಾಗಿತ್ತು. ಏಕೆಂದರೆ ಇದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಅವರ 200ನೇ ಸಿಕ್ಸರ್ ಆಗಿತ್ತು. ಇದೇ ವೇಳೆ ಐಪಿಎಲ್ ಪಂದ್ಯಾವಳಿಯಲ್ಲಿ ಒಂದೇ ತಂಡದ ಪರ ಈ ಸಾಧನೆ ಮಾಡಿದ ಒಟ್ಟಾರೆ ಐದನೇ ಕ್ರಿಕೆಟಿಗರಾದರು.

ಇದಕ್ಕೂ ಮುನ್ನ ಆರ್‌ಸಿಬಿ ಪರ ಕ್ರಿಸ್ ಗೇಲ್, ಎಬಿ ಡಿವಿಲಿಯರ್ಸ್, ವಿರಾಟ್ ಕೊಹ್ಲಿ 200 ಸಿಕ್ಸರ್‌ಗಳ ಸಾಧನೆ ಮಾಡಿದ್ದರೆ, ಮುಂಬೈ ಇಂಡಿಯನ್ಸ್ ತಂಡದ ಪರ ಕೀರಾನ್ ಪೊಲಾರ್ಡ್ ಒಂದೇ ಐಪಿಎಲ್ ಫ್ರಾಂಚೈಸ್‌ಗಾಗಿ 200 ಅಥವಾ ಅದಕ್ಕಿಂತ ಹೆಚ್ಚಿನ ಗರಿಷ್ಠ ಮೊತ್ತವನ್ನು ಹೊಡೆದ ಇತರ ಬ್ಯಾಟ್ಸ್‌ಮನ್‌ಗಳಾಗಿದ್ದಾರೆ.
ಗೆದ್ದ ಗುಜರಾತ್ ಟೈಟನ್ಸ್; ಸಿಎಸ್‌ಕೆ ತಂಡಕ್ಕೆ ಸೋಲು
2023ರ ಐಪಿಎಲ್‌ನ ಉದ್ಘಾಟನಾ ಪಂದ್ಯದಲ್ಲಿ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟನ್ಸ್ ತಂಡ 5 ವಿಕೆಟ್‌ಗಳ ಗೆಲುವು ಸಾಧಿಸಿದೆ.
ಸಿಎಸ್‌ಕೆ ನೀಡಿದ್ದ 179 ರನ್‌ಗಳ ಗುರಿ ಬೆನ್ನಟ್ಟಿದ ಗುಜರಾತ್ ಟೈಟನ್ಸ್ ತಂಡ 19.2 ಓವರ್‌ಗಳಲ್ಲಿ ಇನ್ನೂ 5 ವಿಕೆಟ್‌ಗಳು ಬಾಕಿ ಇರುವಂತೆಯೇ ಗೆಲುವಿನ ಗಡಿ ದಾಟಿ, ಪಂದ್ಯಾವಳಿಯ ಮೊದಲ ಜಯ ದಾಖಲಿಸಿತು.
ಇದಕ್ಕೂ ಮೊದಲು ಟಾಸ್ ಗೆದ್ದ ಗುಜರಾತ್ ಟೈಟನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್‌ಕೆ ತಂಡದ ಪರ ಆರಂಭಿಕ ಬ್ಯಾಟರ್ ರುತುರಾಜ್ ಗಾಯಕ್ವಾಡ್ 50 ಎಸೆತಗಳಲ್ಲಿ 92 ರನ್ ಬಾರಿಸಿ ತಂಡದ ಮೊತ್ತ 170ರ ಗಡಿ ದಾಟುವಲ್ಲಿ ನೆರವಾದರು.
ಒಂದು ಹಂತದಲ್ಲಿ 200ರ ಗಡಿ ಸಮೀಪಿಸುವ ಸೂಚನೆ ನೀಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಗುಜರಾತ್ ಟೈಟನ್ಸ್ ಬೌಲರ್‌ಗಳು ನಿಯಂತ್ರಣ ಹೇರಿದರು. ಗುಜರಾತ್ ಟೈಟನ್ಸ್ ಪರ ಸ್ಪಿನ್ನರ್ ರಶೀದ್ ಖಾನ್ 26 ರನ್‌ಗೆ 2 ವಿಕೆಟ್, ವೇಗಿ ಮೊಹಮ್ಮದ್ ಶಮಿ 29 ರನ್‌ಗೆ 2 ವಿಕೆಟ್ ಮತ್ತು ಅಲ್ಜಾರಿ ಜೋಸೆಫ್ 33 ರನ್‌ಗೆ 2 ವಿಕೆಟ್ ಪಡೆದರು. ಅಂಬಟಿ ರಾಯುಡು ಅವರನ್ನು ಪೆವಿಲಿಯನ್‌ಗೆ ಕಳಿಸಿದ ಜೋಶುವಾ ಲಿಟಲ್ ಸಹ ಒಂದು ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications