For Quick Alerts
ALLOW NOTIFICATIONS  
For Daily Alerts
 

IPL 2023: ಸಿಎಸ್‌ಕೆ vs ಗುಜರಾತ್ ಟೈಟನ್ಸ್ ಉದ್ಘಾಟನಾ ಪಂದ್ಯ, ಸಂಭಾವ್ಯ ಆಡುವ ಬಳಗ; ಟಿವಿ, ಲೈವ್ ಸ್ಟ್ರೀಮ್ ವಿವರ

IPL 2023: CSK vs Gujarat Titans Match, Probable Playing 11; Pitch Report, TV And Live Stream Details

ಬಹುನಿರೀಕ್ಷಿತ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 16ನೇ ಋತುವಿಗೆ ಕ್ಷಣಗಣನೆ ಆರಂಭವಾಗಿದ್ದು, ಇದೇ ಮಾರ್ಚ್ 31ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುವ ಹಾಲಿ ಗುಜರಾತ್ ಟೈಟನ್ಸ್ ಮತ್ತು ಮಾಜಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ನಡುವಿನ ಪಂದ್ಯದ ಮೂಲಕ ಚಾಲನೆ ಸಿಗಲಿದೆ.

ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ನಾಲ್ಕು ಬಾರಿ ಚಾಂಪಿಯನ್ ಆಗಿದ್ದರೆ, ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟನ್ಸ್ ಕಳೆದ ವರ್ಷದ ತಮ್ಮ ಚೊಚ್ಚಲ ಪ್ರವೇಶದಲ್ಲಿಯೇ ಪ್ರಶಸ್ತಿ ಎತ್ತಿ ಹಿಡಿದರು.

ಈಗಾಗಲೇ ಕಳೆದ ಒಂದು ತಿಂಗಳಿನಿಂದ ಎಂಎಸ್ ಧೋನಿ ತಂಡ ಚೆನ್ನೈನ ಚೆಪಾಕ್‌ನಲ್ಲಿ ಅಭ್ಯಾಸ ನಡೆಸುತ್ತಿದ್ದು, ಕಳೆದ ಎರಡು ದಿನಗಳಿಂದ ಎಲ್ಲ ಆಟಗಾರರು ಸೇರಿಕೊಂಡಿದ್ದಾರೆ. ಇನ್ನು ಗುಜರಾತ್ ಟೈಟನ್ಸ್ ತಂಡದ ಆಟಗಾರರು ಈಗಾಗಲೇ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಅಭ್ಯಾಸ ಪ್ರಾರಂಭಿಸಿದ್ದಾರೆ .

ನರೇಂದ್ರ ಮೋದಿ ಪಿಚ್ ವರದಿ
ಅಹಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂನ ಪಿಚ್ ಬ್ಯಾಟಿಂಗ್ ಸ್ನೇಹಿಯಾಗಿದ್ದು, ಸ್ಪಿನ್ನರ್‌ಗಳಿಗೆ ಅಥವಾ ವೇಗಿಗಳಿಗೆ ಹೆಚ್ಚಿನ ಸಹಾಯ ಮಾಡುವುದಿಲ್ಲ. ಇತ್ತೀಚಿಗೆ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ಪಂದ್ಯದಲ್ಲಿ ಶುಭ್ಮನ್ ಗಿಲ್ ಭರ್ಜರಿ ಶತಕ ಬಾರಿಸಿದ್ದರು.

IPL 2023: CSK vs Gujarat Titans Match, Probable Playing 11; Pitch Report, TV And Live Stream Details

ಈ ಮೈದಾನದಲ್ಲಿ ಟಾಸ್ ಗೆದ್ದ ತಂಡ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಲಿದೆ. ಬೌಲಿಂಗ್‌ನಲ್ಲಿ ವೇಗ ಮತ್ತು ಬೌನ್ಸ್‌ಗೆ ಸಹಕಾರಿಯಾಗಲಿದೆ. ಇಲ್ಲಿ ಯಾವುದೇ ಮೊತ್ತವೂ ಸುರಕ್ಷಿತವಲ್ಲ.

ಅಹಮದಾಬಾದ್ ಸ್ಟೇಡಿಯಂ ಸರಾಸರಿ ಮೊತ್ತ
ನರೇಂದ್ರ ಮೋದಿ ಪಿಚ್‌ನಲ್ಲಿ ಸರಾಸರಿ ಮೊದಲ ಇನ್ನಿಂಗ್ಸ್ ಮೊತ್ತ 160 ರನ್ ಆಗಿದೆ. ಇನ್ನು ಎರಡನೇ ಇನ್ನಿಂಗ್ಸ್ ಸರಾಸರಿ ಸ್ಕೋರ್ 137 ರನ್ ಆಗಿದೆ. ಈ ಮೈದಾನದಲ್ಲಿ ಒಟ್ಟು 10 ಟಿ20 ಪಂದ್ಯಗಳು ನಡೆದಿದ್ದು, ಅದರಲ್ಲಿ 6 ಪಂದ್ಯಗಳನ್ನು ಮೊದಲು ಬ್ಯಾಟಿಂಗ್ ಮಾಡಿದ ತಂಡ ಗೆದ್ದಿದ್ದರೆ, ಉಳಿದವುಗಳನ್ನು ಎರಡನೇ ಇನ್ನಿಂಗ್ಸ್ ಬ್ಯಾಟಿಂಗ್ ಮಾಡಿದ ತಂಡ ಗೆದ್ದಿದೆ.

ಸ್ಥಳ, ದಿನಾಂಕ ಮತ್ತು ಸಮಯ ವಿವರ
ಚೆನ್ನೈ ಸೂಪರ್ ಕಿಂಗ್ಸ್ vs ಗುಜರಾತ್ ಟೈಟನ್ಸ್ ಪಂದ್ಯವು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಶುಕ್ರವಾರ, ಮಾರ್ಚ್ 31ರಂದು ನಡೆಯಲಿದ್ದು, ಪಂದ್ಯದ ಸಮಯ ಸಂಜೆ 7.30ಕ್ಕೆ ಆರಂಭವಾಗಲಿದ್ದು, ಟಾಸ್ 7 ಗಂಟೆಗೆ ನಡೆಯಲಿದೆ.

IPL 2023: CSK vs Gujarat Titans Match, Probable Playing 11; Pitch Report, TV And Live Stream Details

ಟಿವಿ ಮತ್ತು ಲೈವ್ ಸ್ಟ್ರೀಮಿಂಗ್ ವಿವರ
2023ರ ಐಪಿಎಲ್ ಪಂದ್ಯಾವಳಿಯ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ vs ಗುಜರಾತ್ ಟೈಟನ್ಸ್ ಮುಖಾಮುಖಿಯಾಗಲಿದ್ದು, ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ನೇರಪ್ರಸಾರ ಮಾಡಲಾಗುವುದು. ಇನ್ನು Jio Cinema ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮ ಆಗಿ ವೀಕ್ಷಿಸಬಹುದು.

ಚೆನ್ನೈ ಸೂಪರ್ ಕಿಂಗ್ಸ್ vs ಗುಜರಾತ್ ಟೈಟನ್ಸ್ ಸಂಭಾವ್ಯ ಆಡುವ 11ರ ಬಳಗ
ಗುಜರಾತ್ ಟೈಟನ್ಸ್ ತಂಡ: ಶುಭ್ಮನ್ ಗಿಲ್, ವೃದ್ಧಿಮಾನ್ ಸಹಾ, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಕೇನ್ ವಿಲಿಯಮ್ಸನ್, ಹಾರ್ದಿಕ್ ಪಾಂಡ್ಯ(ನಾಯಕ), ರಾಹುಲ್ ತೆವಾಟಿಯಾ, ರಶೀದ್ ಖಾನ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಮೊಹಮ್ಮದ್ ಶಮಿ.

ಚೆನ್ನೈ ಸೂಪರ್ ಕಿಂಗ್ಸ್: ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೆ (ವಿಕೆಟ್ ಕೀಪರ್), ಮೊಯಿನ್ ಅಲಿ, ಬೆನ್ ಸ್ಟೋಕ್ಸ್, ಅಂಬಟಿ ರಾಯುಡು, ರವೀಂದ್ರ ಜಡೇಜಾ, ಎಂಎಸ್ ಧೋನಿ(ನಾಯಕ), ಡ್ವೈನ್ ಪ್ರಿಟೋರಿಯಸ್, ದೀಪಕ್ ಚಾಹರ್, ಸಿಮರ್ಜೀತ್ ಸಿಂಗ್, ತುಷಾರ್ ದೇಶಪಾಂಡೆ.

Story first published: Tuesday, March 28, 2023, 15:02 [IST]
Other articles published on Mar 28, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+