Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

CSK vs MI: ಬದ್ಧ ಎದುರಾಳಿಗಳ ಕಾದಾಟದಲ್ಲಿ ಗೆದ್ದು ಬೀಗಿದ ಚೆನ್ನೈ ಸೂಪರ್ ಕಿಂಗ್ಸ್: ರೋಹಿತ್ ಪಡೆಗೆ ಭಾರೀ ಸೋಲು

ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ವಿರುದ್ಧದ ಸೆಣೆಸಾಟದಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಭಾರೀ ಸೋಲಾಗಿದ್ದು ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ಭರ್ಜರಿ ಗೆಲುವು ಸಾಧಿಸಿದೆ. ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯ ಸಾಕಷ್ಟು ಕುತೂಹಲ ಮೂಡಿಸಿತ್ತು. ಆದರೆ ಮುಂಬೈ ಇಂಡಿಯನ್ಸ್ ತಂಡ ಈ ಪಂದ್ಯದಲ್ಲಿ ಯಾವುದೇ ರೀತಿಯಲ್ಲಿಯೂ ಪೈಪೋಟಿ ನೀಡದೆ 6 ವಿಕೆಟ್‌ಗಳ ಅಂತರದ ಭಾರೀ ಸೋಲು ಕಂಡಿದೆ.

ಟಾಸ ಗೆದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅದ್ಭುತ ಪ್ರದರ್ಶನದ ಮೂಲಕ ಮುಂಬೈ ಇಂಡಿಯನ್ಸ ತಂಡವನ್ನು 139 ರನ್‌ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು. ಈ ಮೊತ್ತವನ್ನು ಬೆನ್ನಟ್ಟಿದ ಸಿಎಸ್‌ಕೆ ತಂಡಕ್ಕೆ ಮತ್ತೊಮ್ಮೆ ಉತ್ತಮ ಆರಂಭ ದೊರೆಯಿತು. ಋತುರಾಜ್ ಗಾಯಕ್ವಾಡ್ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದು ಮೊದಲ ವಿಕೆಟ್‌ಗೆ 4.1 ಓವರ್‌ಗಳಲ್ಲಿ 46 ರನ್‌ಗಳ ಜೊತೆಯಾಟ ನೀಡಿ ನಿರ್ಗಮಿಸಿದರು. 16 ಎಸೆತ ಎದುರಿಸಿದ ಋತು 30 ರನ್‌ಗಳ ಕೊಡುಗೆ ನೀಡಿದರು.

IPL 2023, CSK vs MI: Chennai Super Kings win by 6 wickets against Mumbai Indians

ನಂತರ ಅಜಿಂಕ್ಯಾ ರಹಾನೆ ಹಾಗೂ ಡೆವೋನ್ ಕಾನ್ವೆ ಕೂಡ ಉತ್ತಮ ಜೊತೆಯಾಟದಲ್ಲಿ ಭಾಗಿಯಾದರು. ರಹಾನೆ 21 ರನ್‌ಗಳಿಸಿ ವಿಕೆಟ್ ಕಳೆದುಕೊಂಡರೆ ಅಂಬಾಟಿ ರಾಯುಡು 12 ರನ್‌ಗಳಿಸಿ ಔಟಾದರು. ನಂತರ ಡೆವೋನ್ ಕಾನ್ವೆ 44 ರನ್‌ಗಳಿಸಿ ಕೊನೆಯ ಹಂತದಲ್ಲಿ ವಿಕೆಟ್ ಕಳೆದುಕೊಂಡರು. ಬಳಿಕ ಶಿವಂ ದುಬೆ ನಾಯಕ ಎಂಎಸ್ ಧೋನಿ ಜೊತೆ ಸೇರಿ ಗೆಲುವಿನ ಪ್ರಕ್ರಿಯೆ ಪೂರ್ಣಗೊಳಿಸಿದರು.

ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಪರವಾಗಿ ಆರಂಭಿಕನಾಗಿ ರೋಹಿತ್ ಶರ್ಮಾ ಬದಲಿಗೆ ಕ್ಯಾಮರೂನ್ ಗ್ರೀನ್ ಇಶಾನ್ ಕಿಶನ್‌ಗೆ ಸಾಥ್ ನೀಡಿದರು. ರೋಹಿತ್ ಶರ್ಮಾ ಮೂರಬೇ ಕ್ರಮಾಂಕದಲ್ಲಿ ಕಣಕ್ಕಿಳಿದರು. ಆದರೆ ಮೂವರು ಕೂಡ ಎರಡಂಕಿ ಗಳಿಸಲು ಕೂಡ ಸಫಲವಾಗಲಿಲ್ಲ. ನಾಯಕ ರೋಹಿತ್ ಶರ್ಮಾ ಮತ್ತೊಂದು ಶೂನ್ಯ ಸುತ್ತಿ ನಿರ್ಗಮಿಸಿದರು. ಹೀಗಾಗಿ ಮುಂಬೈ ಇಂಡಿಯನ್ಸ್ ತಂಡ 14 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು.

ಆದರೆ ನಂತರ ಬಂದ ನೇಹಲ್ ವಧೇರಾ ಹಾಗೂ ಸೂರ್ಯಕುಮಾರ್ ಯಾದವ್ ಸಣ್ಣ ಚೇತರಿಕೆ ನೀಡಿದರು. ಸೂರ್ಯಕುಮಾರ್ ಯಾದವ್ 22 ಎಸೆತಗಳಲ್ಲಿ 26 ರನ್‌ಗಳಿಸಿ ವಿಕೆಟ್ ಕಳೆದುಕೊಂಡ ಬಳಿಕ ವದೇರಾ ಟ್ರಿಸ್ಟನ್ ಸ್ಟಬ್ಸ್ ಜೊತೆಗೂ ಉತ್ತಮ ಜೊತೆಯಾಟದಲ್ಲು ಭಾಗಿಯಾದರು. ಆದರೆ ರನ್‌ ವೇಗ ನಿಧಾನಗತಿಯಲ್ಲಿದ್ದ ಕಾರಣ ಸಾಧಾರಣ ಗುರಿಯನ್ನಷ್ಟೇ ನಿಗದಿಪಡಿಸಲು ಸಾಧ್ಯವಾಯಿತು. ನೇಹಲ್ ವಧೇರಾ 51 ಎಸೆತಗಳನ್ನು ಎದುರಿಸಿದ್ದು 64 ರನ್‌ಗಳಿಸಿದರು. ಸ್ಟಬ್ಸ್ 20 ರನ್‌ಗಳ ಕೊಡುಗೆ ನೀಡಿದರು.

ನಂತರ ಬಂದ ಟಿಮ್ ಡೇವಿಡ್, ಅರ್ಶದ್ ಖಾನ್ ಕೂಡ ಒಂದಂಕಿಗೆ ಔಟಾದರು. ಅಂತಿಮವಾಗಿ ಮುಂಬೈ ಇಂಡಿಯನ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 139 ರನ್‌ಗಳಿಸಲು ಶಕ್ತವಾಯಿತು. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರವಾಗಿ ಮಥೀಶ ಪತಿರಣ 3 ವಿಕೆಟ್ ಪಡೆದರೆ ದೀಪಕ್ ಚಾಹರ್ ಹಾಗೂ ತುಷಾರ್ ದೇಶ್‌ಪಾಂಡೆ ತಲಾ ಎರಡು ವಿಕೆಟ್ ಕಬಳಿಸಿ ಸಂಭ್ರಮಿಸಿದರು.ಒಂದು ವಕೆಟ್ ರವೀಂದ್ರ ಜಡೇಜಾ ಪಾಲಾಯಿತು.

ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ & ವಿಕೆಟ್ ಕೀಪರ್), ದೀಪಕ್ ಚಾಹರ್, ಮಥೀಶ ಪತಿರಣ, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಕ್ಯಾಮೆರಾನ್ ಗ್ರೀನ್, ಸೂರ್ಯಕುಮಾರ್ ಯಾದವ್, ಟ್ರಿಸ್ಟಾನ್ ಸ್ಟಬ್ಸ್, ಟಿಮ್ ಡೇವಿಡ್, ನೆಹಾಲ್ ವಧೇರಾ, ಜೋಫ್ರಾ ಆರ್ಚರ್, ಪಿಯೂಷ್ ಚಾವ್ಲಾ, ಆಕಾಶ್ ಮಧ್ವಲ್, ಅರ್ಷದ್ ಖಾನ್

Story first published: Saturday, May 6, 2023, 19:07 [IST]
Other articles published on May 6, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+