IPL 2023 CSK vs RR: ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಸಿಎಸ್‌ಕೆ: ಆಡುವ ಬಳಗ, ಪಿಚ್ ವರದಿ
ಇಂಡಿಯನ್ ಪ್ರೀಮಿಯರ್ ಲೀಗ್ 2023ರ 17ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಟಾಸ್ ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಎಂಎಸ್ ಧೋನಿ ಸಿಎಸ್‌ಕೆ ತಂಡದ ನಾಯಕರಾಗಿ 200ನೇ ಪಂದ್ಯ ಇದಾಗಿದೆ. ಚೆಪಾಕ್ ಅಂಗಳದಲ್ಲಿ ಈ ಪಂದ್ಯ ನಡೆಯುತ್ತಿದ್ದು ತವರಿನ ಅಂಗಳದಲ್ಲಿ ಭರ್ಜರಿ ಗೆಲುವು ಸಾಧಿಸುವ ಉತ್ಸಾಹದಲ್ಲಿದೆ.
ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ತವರಿನಲ್ಲಿ ಉತ್ತಮ ಪ್ರದರ್ಶನ ನೀಡುವ ಉತ್ಸಾಹದಲ್ಲಿದೆ. ಚೆನ್ನೈ ಅಂಗಳದಲ್ಲಿ ಇದು ಅವರ ಎರಡನೇ ಪಂದ್ಯವಾಗಿದೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಇಲ್ಲಿ ನಡೆದ ಕೊನೆಯ ಪಂದ್ಯದಲ್ಲಿ ಸಿಎಸ್‌ಕೆ 7 ರನ್‌ಗಳಿಂದ ಗೆಲುವು ಸಾಧಿಸಿತ್ತು.

ರಾಜಸ್ಥಾನ ರಾಯಲ್ಸ್ ತಂಡ ತಾವು ಆಡಿದ ಕೊನೆಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿದೆ. ಸದ್ಯ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ರಾಜಸ್ಥಾನ ರಾಯಲ್ಸ್ ಇಂದಿನ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ಅಗ್ರ ಸ್ಥಾನಕ್ಕೇರಲಿದೆ. ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್, ಶಿಮ್ರಾನ್ ಹೆಟ್ಮೇರ್ ತಂಡದ ಪ್ರಮುಖ ಬ್ಯಾಟರ್ ಆಗಿದ್ದಾರೆ.
ಉಭಯ ತಂಡಗಳಲ್ಲಿ ಬದಲಾವಣೆ
ಇಂದಿನ ಪಂದ್ಯದಲ್ಲಿ ಎರಡೂ ತಂಡಗಳಲ್ಲಿ ಹಲವು ಬದಲಾವಣೆ ಮಾಡಲಾಗಿದೆ. ಚೆನ್ನೈ ಅಂಗಳದಲ್ಲಿ ಸ್ಪಿನ್ನರ್ ಗಳಿಗೆ ಹೆಚ್ಚಿನ ನೆರವು ಸಿಗುವುದರಿಂದ ಸ್ಪಿನ್ನರ್ ಗಳಿಗೆ ಮಣೆ ಹಾಕಲಾಗಿದೆ. ಕಳೆದ ಪಂದ್ಯದಲ್ಲಿ ವಿಶ್ರಾಂತಿ ಪಡೆದಿದ್ದ ಮೊಯೀನ್ ಅಲಿ ಇಂದು ಸ್ಥಾನ ಪಡೆದುಕೊಂಡಿದ್ದಾರೆ, ಪ್ರಮುಖ ಸ್ಪಿನ್ ಅಸ್ತ್ರ ಮಹೀಶ್ ತೀಕ್ಷಣ ಕೂಡ ಸಿಎಸ್‌ಕೆ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
ರಾಜಸ್ಥಾನ ರಾಯಲ್ಸ್ ತಂಡದ ಪ್ರಮುಖ ವೇಗಿ ಟ್ರೆಂಟ್ ಬೌಲ್ಟ್‌ಗೆ ಈ ವಿಶ್ರಾಂತಿ ನೀಡಲಾಗಿದೆ. ರನ್ ಗಳಿಸಲು ವಿಫಲವಾಗಿರುವ ದೇವದತ್ ಪಡಿಕ್ಕಲ್‌ಗೆ ಇಂದಿನ ಪಂದ್ಯದಲ್ಲಿ ಅವಕಾಶ ನೀಡಲಾಗಿದೆ. ಮೂವರು ವಿದೇಶಿ ಆಟಗಾರರು ಮೊದಲ ಇನ್ನಿಂಗ್ಸ್‌ನಲ್ಲಿ ಆಡುತ್ತಿದ್ದು, ಇಂಪ್ಯಾಕ್ಟ್ ಪ್ಲೇಯರ್ ಆಗಿ ಸ್ಪಿನ್ನರ್ ಆಡಂ ಝಂಪಾ ಬರುವ ಸಾಧ್ಯತೆ ಇದೆ.
ಸ್ಪಿನ್ ಬೌಲರ್ ಗಳಿಗೆ ಹೆಚ್ಚಿನ ನೆರವು
ಪಿಚ್ ವರದಿ ಪ್ರಕಾರ ಇಲ್ಲಿ ಸ್ಪಿನ್ನರ್ ಗಳಿಗೆ ಹೆಚ್ಚಿನ ನೆರವು ಸಿಗಲಿದೆ. ಇದೇ ಕಾರಣಕ್ಕೆ ಎರಡೂ ತಂಡಗಳಲ್ಲಿ ಹೆಚ್ಚುವರಿ ಸ್ಪಿನ್ನರ್ ಗಳು ಆಡಲಿದ್ದಾರೆ. ಮೊದಲು ಬ್ಯಾಟಿಂಗ್ ಮಾಡುವ ತಂಡ 180-190 ರನ್ ಗಳಿಸಿದರೆ, ಡಿಫೆಂಡ್ ಮಾಡಿಕೊಳ್ಳುವ ಅವಕಾಶ ಸಿಗಲಿದೆ. ಟಾಸ್ ಸಂದರ್ಭದಲ್ಲಿ ಮಾತನಾಡಿದ ಧೋನಿ, ಚೇಸಿಂಗ್ ಮಾಡುವ ಸಂದರ್ಭದಲ್ಲಿ ಇಬ್ಬನಿ ಬೀಳುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ 11
ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ನಾಯಕ), ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ಧ್ರುವ್ ಜುರೆಲ್, ರವಿಚಂದ್ರನ್ ಅಶ್ವಿನ್, ಜೇಸನ್ ಹೋಲ್ಡರ್, ಕುಲದೀಪ್ ಸೇನ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್. ಇಂಪ್ಯಾಕ್ಟ್ ಪ್ಲೇಯರ್ಸ್: ಜೋ ರೂಟ್, ರಿಯಾನ್ ಪರಾಗ್, ಡೊನೊವೆನ್ ಫೆರೀರಾ, ಕೆಎಂ ಆಸಿಫ್, ಆಡಂ ಝಂಪಾ
ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ 11
ಡೆವೊನ್ ಕಾನ್ವೆ, ರುತುರಾಜ್ ಗಾಯಕ್ವಾಡ್, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ(ನಾಯಕ), ಸಿಸಂದಾ ಮಗಾಲ, ಮಹೇಶ್ ತೀಕ್ಷಣ, ತುಷಾರ್ ದೇಶಪಾಂಡೆ, ಆಕಾಶ್ ಸಿಂಗ್. ಇಂಪ್ಯಾಕ್ಟ್ ಪ್ಲೇಯರ್: ಅಂಬಟಿ ರಾಯುಡು, ಮಿಚೆಲ್ ಸ್ಯಾಂಟ್ನರ್, ಸುಭ್ರಾಂಶು ಸೇನಾಪತಿ, ಶೇಕ್ ರಶೀದ್, ರಾಜವರ್ಧನ್ ಹಂಗಾಗೇರ್ಕರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications