IPL 2023 CSK vs RR: ಬಟ್ಲರ್ ಅರ್ಧಶತಕ, ಜಡೇಜಾ ಮೋಡಿ: ಸವಾಲಿನ ಮೊತ್ತ ಕಲೆಹಾಕಿದ ರಾಜಸ್ಥಾನ ರಾಯಲ್ಸ್
ಇಂಡಿಯನ್ ಪ್ರೀಮಿಯರ್ ಲೀಗ್ 2023ರ 17ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ರಾಯಲ್ಸ್ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 175 ರನ್ ಕಲೆಹಾಕಿತು. ಜೋಸ್ ಬಟ್ಲರ್ ಅರ್ಧಶತಕ ಗಳಿಸುವ ಮೂಲಕ ರಾಜಸ್ಥಾನ ರಾಯಲ್ಸ್ ತಂಡಕ್ಕೆ ಆಸರೆಯಾದರು.
ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ ಸೂಪರ್ ಕಿಂಗ್ಸ್ ಆರಂಭದಲ್ಲೇ ವಿಕೆಟ್ ಪಡೆಯುವ ಮೂಲಕ ಉತ್ತಮವಾಗಿ ಆರಂಭ ಮಾಡಿದರು. ಯಶಸ್ವಿ ಜೈಸ್ವಾಲ್ 8 ಎಸೆತಗಳಲ್ಲಿ 10 ರನ್ ಗಳಿಸಿ ಔಟಾದರು. ಆದರೆ ನಂತರ ದೇವದತ್ ಪಡಿಕ್ಕಲ್ ಮತ್ತು ಜೋಸ್ ಬಟ್ಲರ್ ಉತ್ತಮ ಜೊತೆಯಾಟದ ಮೂಲಕ ಆರ್ ಆರ್ ತಂಡಕ್ಕೆ ಆಸರೆಯಾದರು.

ಈ ಜೋಡಿ ಎರಡನೇ ವಿಕೆಟ್‌ಗೆ 77 ರನ್‌ಗಳ ಜೊತೆಯಾಟ ಆಡಿತು. ದೇವದತ್ ಪಡಿಕ್ಕಲ್ 26 ಎಸೆತಗಳಲ್ಲಿ 5 ಬೌಂಡರಿ ಸಹಿತ 38 ರನ್ ಗಳಿಸಿದರು. ನಂತರ ಬ್ಯಾಟಿಂಗ್‌ಗೆ ಬಂದ ಸಂಜು ಸ್ಯಾಮ್ಸನ್ ಎರಡೇ ಎಸೆತಗಳಲ್ಲಿ ಯಾವುದೇ ರನ್ ಗಳಿಸದೇ ಔಟಾದರು. ಬ್ಯಾಟಿಂಗ್‌ನಲ್ಲಿ ಬಡ್ತಿ ಪಡೆದ ರವಿಚಂದ್ರನ್ ಅಶ್ವಿನ್ ಜವಾಬ್ದಾರಿಯುತ ಆಟವಾಡಿದರು. 22 ಎಸೆತಗಳಲ್ಲಿ 1 ಬೌಂಡರಿ ಎರಡು ಸಿಕ್ಸರ್ ಸಹಿತ 30 ರನ್ ಗಳಿಸಿದರು.
ಜೋಸ್ ಬಟ್ಲರ್ 36 ಎಸೆತಗಳಲ್ಲಿ 1 ಬೌಂಡರಿ 3 ಸಿಕ್ಸರ್ ಸಹಿತ 52 ರನ್ ಗಳಿಸಿ ಮೊಯೀನ್ ಅಲಿ ಬೌಲಿಂಗ್‌ನಲ್ಲಿ ಕ್ಲೀನ್ ಬೌಲ್ಡ್ ಆದರು. ಧ್ರುವ್ ಜುರೆಲ್ 6 ಎಸೆತಗಳಲ್ಲಿ 4 ರನ್ ಗಳಿಸಿ ಔಟಾದರು. ಜೇಸನ್ ಹೋಲ್ಡರ್ ಕೂಡ ರನ್ ಖಾತೆ ತೆರೆಯದೇ ಔಟ್ ಆದರು. ಶಿಮ್ರಾನ್ ಹೆಟ್ಮೇರ್ ಮಾತ್ರ ಅಂತಿಮ ಓವರ್ ಗಳಲ್ಲಿ ಸ್ಫೋಟಕ ಇನ್ನಿಂಗ್ಸ್ ಆಡಿದರು, 18 ಎಸೆತಗಳಲ್ಲಿ 30 ರನ್ ಗಳಿಸಿದರು.

ರವೀಂದ್ರ ಜಡೇಜ ಮಿಂಚಿನ ಬೌಲಿಂಗ್
ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಇಂದು ರವೀಂದ್ರ ಜಡೇಜಾ ಆಸರೆಯಾದರು, ಅಪಾಯಕಾರಿಯಾಗಿ ಕಾಣುತ್ತಿದ್ದ ದೇವದತ್ ಪಡಿಕ್ಕಲ್‌ರನ್ನು ಔಟ್ ಮಾಡಿದ ಅವರು ಅದೇ ಓವರ್ ನಲ್ಲಿ ನಾಯಕ ಸಂಜು ಸ್ಯಾಮ್ಸನ್‌ರನ್ನು ಕ್ಲೀನ್ ಬೌಲ್ಡ್ ಮಾಡಿದರು. 4 ಓವರ್ ಗಳಲ್ಲಿ ಕೇವಲ 21 ರನ್ ನೀಡಿ 2 ವಿಕೆಟ್ ಪಡೆದುಕೊಂಡರು. ಆಕಾಶ್ ಸಿಂಗ್ ಮತ್ತು ತುಷಾರ್ ದೇಶಪಾಂಡೆ ಕೂಡ ತಲಾ ಎರಡು ವಿಕೆಟ್ ಪಡೆದರು.
ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ 11
ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೆ, ಮೊಯಿನ್ ಅಲಿ, ಶಿವಂ ದುಬೆ, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ), ಮಹೇಶ್ ತೀಕ್ಷಣ, ಆಕಾಶ್ ಸಿಂಗ್ ತುಷಾರ್ ದೇಶಪಾಂಡೆ, ಸಿಸಂದಾ ಮಗಾಲ. ಇಂಪ್ಯಾಕ್ಟ್ ಪ್ಲೇಯರ್: ಸುಭ್ರಾಂಶು ಸೇನಾಪತಿ, ಶೇಕ್ ರಶೀದ್, ರಾಜವರ್ಧನ್ ಹಂಗಾಗೇರ್ಕರ್, ಅಂಬಟಿ ರಾಯುಡು, ಮಿಚೆಲ್ ಸ್ಯಾಂಟ್ನರ್.
ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ 11
ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ರವಿಚಂದ್ರನ್ ಅಶ್ವಿನ್, ಧ್ರುವ್ ಜುರೆಲ್, ಜೇಸನ್ ಹೋಲ್ಡರ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್, ಕುಲದೀಪ್ ಸೇನ್. ಇಂಪ್ಯಾಕ್ಟ್ ಪ್ಲೇಯರ್ಸ್: ಕೆಎಂ ಆಸಿಫ್, ಆಡಂ ಝಂಪಾ, ಜೋ ರೂಟ್, ರಿಯಾನ್ ಪರಾಗ್, ಡೊನೊವೆನ್ ಫೆರೀರಾ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications