For Quick Alerts
ALLOW NOTIFICATIONS  
For Daily Alerts
 

LSG vs KKR: ಲಕ್ನೋ ಇಷ್ಟು ರನ್‌ಗಳ ಅಂತರದಿಂದ ಗೆದ್ದರೆ 2ನೇ ಸ್ಥಾನ ಕಳೆದುಕೊಳ್ಳಲಿದೆ ಸಿಎಸ್‌ಕೆ!

IPL 2023: CSK will loose 2nd spot in points table if LSG beats KKR by 97 runs

ಇಂದು (ಮೇ 20) ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 67 ಹಾಗೂ 68ನೇ ಪಂದ್ಯಗಳು ಜರುಗುತ್ತಿವೆ.

ಮಧ್ಯಾಹ್ನ ನಡೆದ 67ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾದರೆ, ಇದೀಗ ನಡೆಯುತ್ತಿರುವ 68ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್‌ ರೈಡರ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಪರಸ್ಪರ ಮುಖಾಮುಖಿಯಾಗಿವೆ.

ಈ ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗೆದ್ದರೆ ಪ್ಲೇಆಫ್ ಪ್ರವೇಶಿಸಲಿದೆ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡ ಗೆದ್ದರೆ ಪ್ಲೇಆಫ್ ಪ್ರವೇಶಿಸಲಿವೆ ಎನ್ನಲಾಗಿತ್ತು. ಅದರಂತೆ ಚೆನ್ನೈ ಸೂಪರ್ ಕಿಂಗ್ಸ್ 77 ರನ್‌ಗಳ ಬೃಹತ್ ಅಂತರದಿಂದ ಗೆದ್ದು 17 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

ಇನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸರಿ ಸಮನಾಗಿ ಅಂಕಗಳನ್ನು ಹೊಂದಿದ್ದ ಲಕ್ನೋ ಸೂಪರ್ ಜೈಂಟ್ಸ್ ಪ್ರಸ್ತುತ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಗೆದ್ದರೆ 17 ಅಂಕಗಳನ್ನು ಪಡೆದುಕೊಂಡರೆ ಪ್ಲೇಆಫ್ ಸುತ್ತಿಗೆ ಅರ್ಹಗೆ ಗಿಟ್ಟಿಸಿಕೊಳ್ಳಲಿದೆ.

ಆದರೆ ಲಕ್ನೋ ಸೂಪರ್ ಜೈಂಟ್ಸ್ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಏರಿಕೆ ಕಾಣುವ ಮಟ್ಟಕ್ಕೆ ಜಯ ಸಾಧಿಸಿದರೆ ಕ್ವಾಲಿಫೈಯರ್ ಪಂದ್ಯ ಆಡುವ ಅವಕಾಶ ಪಡೆದುಕೊಳ್ಳಲಿದೆ. ಹೀಗಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ದೊಡ್ಡ ಅಂತರದ ಗೆಲುವನ್ನು ಸಾಧಿಸಬೇಕಿದೆ.

ಇನ್ನು ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿರುವ ಲಕ್ನೋ ಸೂಪರ್ ಜೈಂಟ್ಸ್ ಕೊಲ್ಕತ್ತಾ ನೈಟ್‌ ರೈಡರ್ಸ್ ವಿರುದ್ಧ 97 ರನ್‌ಗಳ ಅಂತರದಲ್ಲಿ ಜಯ ಸಾಧಿಸಿದರೆ ಚೆನ್ನೈ ಸೂಪರ್ ಜೈಂಟ್ಸ್ ತಂಡಕ್ಕಿಂತ ಹೆಚ್ಚಿನ ನೆಟ್ ರನ್ ರೇಟ್ ಪಡೆದುಕೊಳ್ಳಲಿದೆ. ಹೀಗಾಗಿ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಕಣಕ್ಕಿಳಿಯಬೇಕೆಂದರೆ ಲಕ್ನೋ ಸೂಪರ್ ಜೈಂಟ್ಸ್ 97 ರನ್‌ಗಳ ಅಂತರದಲ್ಲಿ ಗೆಲ್ಲಲೇಬೇಕಿದೆ..

ಕೋಲ್ಕತ್ತಾ ನೈಟ್ ರೈಡರ್ಸ್ (ಪ್ಲೇಯಿಂಗ್ XI): ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಜೇಸನ್ ರಾಯ್, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ (ನಾಯಕ), ಆಂಡ್ರೆ ರಸೆಲ್, ರಿಂಕು ಸಿಂಗ್, ಶಾರ್ದೂಲ್ ಠಾಕೂರ್, ಸುನಿಲ್ ನರೈನ್, ವೈಭವ್ ಅರೋರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ

ಲಕ್ನೋ ಸೂಪರ್ ಜೈಂಟ್ಸ್ (ಪ್ಲೇಯಿಂಗ್ XI): ಕ್ವಿಂಟನ್ ಡಿ ಕಾಕ್(ವಿಕೆಟ್ ಕೀಪರ್), ಕರಣ್ ಶರ್ಮಾ, ಪ್ರೇರಕ್ ಮಂಕಡ್, ಮಾರ್ಕಸ್ ಸ್ಟೋನಿಸ್, ನಿಕೋಲಸ್ ಪೂರನ್, ಕೃನಾಲ್ ಪಾಂಡ್ಯ(ನಾಯಕ), ಆಯುಷ್ ಬಡೋನಿ, ಕೃಷ್ಣಪ್ಪ ಗೌತಮ್, ರವಿ ಬಿಷ್ಣೋಯ್, ನವೀನ್-ಉಲ್-ಹಕ್, ಮೊಹ್ಸಿನ್ ಖಾನ್

Story first published: Saturday, May 20, 2023, 20:55 [IST]
Other articles published on May 20, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+