For Quick Alerts
ALLOW NOTIFICATIONS  
For Daily Alerts
 

IPL 2023: ಡೆಲ್ಲಿ ಕ್ಯಾಪಿಟಲ್ಸ್ ನಾಯಕನಾಗಿ ಡೇವಿಡ್ ವಾರ್ನರ್ ನೇಮಕ: ಅಕ್ಷರ್ ಪಟೇಲ್ ಉಪನಾಯಕ

IPL 2023: David Warner Appointed As The Captain Of The Delhi Capitals, Axar Will Be The Vice-Captain

ಐಪಿಎಲ್ ಆರಂಭಕ್ಕೆ ದಿನಗಣನೆ ಆರಂಭವಾಗಿದೆ, ರಿಷಬ್ ಪಂತ್ ಐಪಿಎಲ್ ನಿಂದ ಹೊರಬಿದ್ದ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ಹೊಸ ನಾಯಕನ ಆಯ್ಕೆ ಮಾಡಿದೆ. ಡೇವಿಡ್ ವಾರ್ನರ್ ಈ ಬಾರಿಯ ಐಪಿಎಲ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸಲಿದ್ದು, ಅಕ್ಷರ್ ಪಟೇಲ್ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ‌.

ಕಾರು ಅಪಘಾತದಲ್ಲಿ ಗಾಯಗೊಂಡ ಬಳಿಕ ರಿಷಬ್ ಪಂತ್ ಕನಿಷ್ಟ ಒಂದು ವರ್ಷ ಕ್ರಿಕೆಟ್ ನಿಂದ ದೂರ ಉಳಿಯುವುದು ಖಚಿತವಾಗಿದೆ. ಪಂತ್ ಅನುಪಸ್ಥಿತಿಯಲ್ಲಿ ವಾರ್ನರ್ ನಾಯಕನಾಗಿ ಆಯ್ಕೆಯಾಗಿದ್ದಾರೆ. ಭಾರತದ ವಿರುದ್ಧದ ಟೆಸ್ಟ್ ಸರಣಿ ವೇಳೆ ವಾರ್ನರ್ ಗಾಯಗೊಂಡಿದ್ದರಿಂದ ಡೆಲ್ಲಿ ಕ್ಯಾಪಿಟಲ್ಸ್ ಪಾಳಯದಲ್ಲಿ ಆತಂಕ ಉಂಟಾಗಿತ್ತು, ಆದರೆ ಭಾರತದ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಅವರು ಫಿಟ್ ಆಗಿದ್ದು, ತಂಡಕ್ಕೆ ಆಯ್ಕೆಯಾಗಿದ್ದಾರೆ.

ಆಸ್ಟ್ರೇಲಿಯಾದ ಆರಂಭಿಕ ಆಟಗಾರನಿಗೆ ಐಪಿಎಲ್ ನಾಯಕತ್ವ ಹೊಸದೇನಲ್ಲ, ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ ಅನುಭವ ಹೊಂದಿದ್ದಾರೆ. ವಾರ್ನರ್ ನಾಯಕತ್ವದಲ್ಲಿ ಸನ್ ರೈರರ್ಸ್ ಹೈದರಾಬಾದ್ ಕಪ್ ಕೂಡ ಗೆದ್ದಿದೆ. ಅವರ ಅನುಭವವನ್ನು ಪತಿಗಣಿಸಿ ಡೆಲ್ಲಿ ಕ್ಯಾಪಿಟಲ್ಸ್ ನಾಯಕನ ಸ್ಥಾನಕ್ಕೆ ಪರಿಗಣಿಸಿದೆ.

IPL 2023: David Warner Appointed As The Captain Of The Delhi Capitals, Axar Will Be The Vice-Captain

ಉಪನಾಯಕನಾಗಿ ಅಕ್ಷರ್ ಪಟೇಲ್ ನೇಮಕ

ಸದ್ಯ ಭರ್ಜರಿ ಫಾರ್ಮ್ ನಲ್ಲಿರುವ ಆಲ್ ರೌಂಡರ್ ಅಕ್ಷರ್ ಪಟೇಲ್ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ. ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಗಮನ ಸೆಳೆದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕೂಡ ಅವರು ಅತ್ಯುತ್ತಮ ಬ್ಯಾಟಿಂಗ್ ಮಾಡಿದ್ದರು.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪ್ರಮುಖ ಆಲ್‌ರೌಂಡರ್ ಆಟಗಾರನಾಗಿರುವ ಅಕ್ಷರ್ ಪಟೇಲ್ ಉಪನಾಯಕನಾಗುವ ಬಗ್ಗೆ ಮೊದಲೇ ನಿರೀಕ್ಷೆ ಮಾಡಲಾಗಿತ್ತು. ಟಿ20 ಮಾದರಿಯಲ್ಲಿ ಅವರು ತಂಡಕ್ಕೆ ಪ್ರಮುಖ ಆಟಗಾರನಾಗಿದ್ದಾರೆ, ಬ್ಯಾಟಿಂಗ್ ಮತ್ತು ಬೌಲಿಂಗ್‌ ವಿಭಾಗದಲ್ಲಿ ತಂಡಕ್ಕೆ ಪ್ರಮುಖ ಶಕ್ತಿಯಾಗಿದ್ದಾರೆ.

IPL 2023: David Warner Appointed As The Captain Of The Delhi Capitals, Axar Will Be The Vice-Captain

ಏಪ್ರಿಲ್ 1ರಂದು ಮೊದಲನೇ ಪಂದ್ಯ

ವಾರ್ನರ್ ನಾಯಕ್ವದ ಡೆಲ್ಲಿ ಕ್ಯಾಪಿಟಲ್ಸ್ 2023 ಐಪಿಎಲ್‌ನ ಮೊದಲ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ.

ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್ (ನಾಯಕ), ಪೃಥ್ವಿ ಶಾ, ರಿಪಾಲ್ ಪಟೇಲ್, ರೋವ್ಮನ್ ಪೊವೆಲ್, ಸರ್ಫರಾಜ್ ಖಾನ್, ಯಶ್ ಧುಲ್, ಮಿಚೆಲ್ ಮಾರ್ಷ್, ಲಲಿತ್ ಯಾದವ್, ಅಕ್ಸರ್ ಪಟೇಲ್ (ಉಪನಾಯಕ), ಅನ್ರಿಚ್ ನಾರ್ಟ್ಜೆ, ಚೇತನ್ ಸಕರಿಯಾ, ಕಮಲೇಶ್ ನಾಗರಕೋಟಿ, ಖಲೀಲ್ ಅಹ್ಮದ್ , ಲುಂಗಿ ಎನ್‌ಗಿಡಿ, ಮುಸ್ತಾಫಿಜುರ್ ರೆಹಮಾನ್, ಅಮನ್ ಖಾನ್, ಕುಲದೀಪ್ ಯಾದವ್, ಪ್ರವೀಣ್ ದುಬೆ, ವಿಕ್ಕಿ ಒಸ್ತ್ವಾಲ್, ಇಶಾಂತ್ ಶರ್ಮಾ, ಫಿಲ್ ಸಾಲ್ಟ್, ಮುಖೇಶ್ ಕುಮಾರ್, ಮನೀಷ್ ಪಾಂಡೆ, ರಿಲೀ ರೊಸೌವ್.

Story first published: Thursday, March 16, 2023, 11:38 [IST]
Other articles published on Mar 16, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+