Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023: ಐಪಿಎಲ್‌ನಲ್ಲಿ ಕೊಹ್ಲಿ, ಧವನ್ ನಂತರ ಈ ಸಾಧನೆ ಮಾಡಿದ 3ನೇ ಆಟಗಾರ ಡೇವಿಡ್ ವಾರ್ನರ್

ಶನಿವಾರ, ಏಪ್ರಿಲ್ 8ರಂದು ಗುವಾಹಟಿಯ ಬರ್ಸಾಪರ ಸ್ಟೇಡಿಯಂನಲ್ಲಿ ನಡೆದ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 11ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ 57 ರನ್‌ಗಳ ಅಂತರದಿಂದ ಸೋಲು ಅನುಭವಿಸಿತು.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಹ್ಯಾಟ್ರಿಕ್ ಸೋಲಿನ ನಡುವೆಯೂ ಡೇವಿಡ್ ವಾರ್ನರ್ ಅವರು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಇತಿಹಾಸದಲ್ಲಿ 6000 ರನ್ ಗಳಿಸಿದ ಮೂರನೇ ಬ್ಯಾಟ್ಸ್‌ಮನ್ ಎನಿಸಿದರು. ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಈ ಮೈಲಿಗಲ್ಲು ಸ್ಥಾಪಿಸಿದರು.

IPL 2023: David Warner Becomes 3rd Player To Score 6000 Runs In IPL History

ಐಪಿಎಲ್ ಪಂದ್ಯಾವಳಿಯ ಇತಿಹಾಸದಲ್ಲಿ 6000 ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಆರ್‌ಸಿಬಿ ತಂಡದ ವಿರಾಟ್ ಕೊಹ್ಲಿ ಮತ್ತು ಪಂಜಾಬ್ ಕಿಂಗ್ಸ್ ತಂಡದ ಶಿಖರ್ ಧವನ್ ನಂತರ ಈ ಪಟ್ಟಿಯಲ್ಲಿ ಡೇವಿಡ್ ವಾರ್ನರ್ ಸೇರಿಕೊಂಡರು. ಎಡಗೈ ಬ್ಯಾಟರ್ ಡೇವಿಡ್ ವಾರ್ನರ್ ಐಪಿಎಲ್‌ನಲ್ಲಿ ಈ ಹೆಗ್ಗುರುತನ್ನು ತಲುಪಿದ ಮೊದಲ ವಿದೇಶಿ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಅಲ್ಲದೇ, 36 ವರ್ಷದ ಡೇವಿಡ್ ವಾರ್ನರ್ 165 ಇನ್ನಿಂಗ್ಸ್‌ಗಳಲ್ಲಿ 6000 ರನ್‌ಗಳ ಮೈಲಿಗಲ್ಲನ್ನು ಸಾಧಿಸುವ ಮೂಲಕ ಐಪಿಎಲ್‌ನಲ್ಲಿ ವೇಗವಾಗಿ 6000 ರನ್ ಬಾರಿಸಿದ ಬ್ಯಾಟರ್ ಎನಿಸಿಕೊಂಡರು. ವಿರಾಟ್ ಕೊಹ್ಲಿ ಮತ್ತು ಶಿಖರ್ ಧವನ್ ಕ್ರಮವಾಗಿ 188 ಮತ್ತು 199 ಇನ್ನಿಂಗ್ಸ್‌ಗಳಲ್ಲಿ ಈ ಮೈಲುಗಲ್ಲನ್ನು ತಲುಪಿದ್ದರು

IPL 2023: David Warner Becomes 3rd Player To Score 6000 Runs In IPL History

ಡೇವಿಡ್ ವಾರ್ನರ್ 2009ರಲ್ಲಿ ಡೆಲ್ಲಿ ಡೇರ್‌ಡೆವಿಲ್ಸ್‌ ಫ್ರಾಂಚೈಸಿ ಪರ ಆಡಲು ಪ್ರಾರಂಭಿಸಿದರು. ನಂತರ ಅವರು ಸನ್‌ರೈಸರ್ಸ್ ಹೈದರಾಬಾದ್ (ಎಸ್ಆರ್ಎಚ್) ತಂಡಕ್ಕೆ ಬಂದರು. ವಾರ್ನರ್ 2016ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವನ್ನು ಫೈನಲ್‌ನಲ್ಲಿ ಸೋಲಿಸಿದಾಗ ನಾಯಕತ್ವ ವಹಿಸಿಕೊಂಡಿದ್ದರು.

2021ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದೊಂದಿಗೆ ಒಪ್ಪಂದ ಕಡಿದುಕೊಂಡ ಡೇವಿಡ್ ವಾರ್ನರ್, ಅವರು 2022ರ ಆವೃತ್ತಿಯ ಮೆಗಾ ಹರಾಜಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಸೇರ್ಪಡೆಗೊಂಡರು. 2023ರ ಐಪಿಎಲ್ ಆರಂಭಕ್ಕೂ ಮುನ್ನ ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ನಡೆದ ಕಾರು ಅಪಘಾತದಲ್ಲಿ ಗಾಯಗೊಂಡ ರಿಷಭ್ ಪಂತ್ ಅನುಪಸ್ಥಿತಿಯಲ್ಲಿ ಡೇವಿಡ್ ವಾರ್ನರ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಾರಥ್ಯ ವಹಿಸಿಕೊಂಡಿದ್ದಾರೆ.

2023ರ ಐಪಿಎಲ್‌ನಲ್ಲಿ ಡೆಲ್ಲು ಕ್ಯಾಪಿಟಲ್ಸ್ ಉತ್ತಮ ಆರಂಭ ಹೊಂದಿಲ್ಲ. ಡೇವಿಡ್ ವಾರ್ನರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಮ್ಮ ಅಭಿಯಾನವನ್ನು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 50 ರನ್‌ಗಳ ಸೋಲಿನೊಂದಿಗೆ ಪ್ರಾರಂಭಿಸಿತು. ಈ ಪಂದ್ಯದಲ್ಲಿ ಡೇವಿಡ್ ವಾರ್ನರ್ ಅರ್ಧಶತಕ ಗಳಿಸಿದರು. ಆದರೆ ಅವರ ಆಟ ವ್ಯರ್ಥವಾಯಿತು.

ನಂತರ ಗುಜರಾತ್ ಟೈಟನ್ಸ್ ವಿರುದ್ಧ ಆರು ವಿಕೆಟ್‌ಗಳಿಂದ ಸೋತಿತು. ಈ ವೇಳೆ ಡೇವಿಡ್ ವಾರ್ನರ್ 32 ಎಸೆತಗಳಲ್ಲಿ ಏಳು ಬೌಂಡರಿಗಳ ಸಹಿತ 37 ರನ್ ಗಳಿಸಿದರು. ಇದೀಗ ಡೆಲ್ಲಿ ಕ್ಯಾಪಿಟಲ್ಸ್ ಆಡಿದ ಮೂರು ಪಂದ್ಯಗಳಲ್ಲಿ ಮೂರನ್ನೂ ಸೋತಿದೆ.

Story first published: Saturday, April 8, 2023, 22:30 [IST]
Other articles published on Apr 8, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+