ಸುದೀರ್ಘ ಕಾಲದ ಬಳಿಕ ಐಪಿಎಲ್‌ನಲ್ಲಿ ಆಡುವ ಅವಕಾಶ ಗಿಟ್ಟಿಸಿಕೊಂಡ ಅನುಭವಿ ವೇಗದ ಬೌಲರ್ ಇಶಾಂತ್ ಶರ್ಮಾ ಅದ್ಭುತ ಪ್ರದರ್ಶನದ ಮೂಲಕ ಗಮನಸೆಳೆದಿದ್ದಾರೆ. ಇಶಾಂತ್ ಶರ್ಮಾ ಅವರ ಈ ಕಮ್‌ಬ್ಯಾಕ್ ಮೂಲಕ ಡೆಲ್ಲಿ ಕ್ಯಾಪಿಟಲ್ಸ ತಂಡ ಟೂರ್ನಿಯಲ್ಲಿ ಮೊದಲ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಇಶಾಂತ್ ಶರ್ಮಾ ಅವರ ಈ ಬೌಲಿಂಗ್ ಪ್ರದರ್ಶನದ ಬಗ್ಗೆ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಡೇವಿಡ್ ವಾರ್ನರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಇಶಾಂತ್ ಶರ್ಮಾ ನೀಡಿದ ಬೌಲಿಂಗ್ ಪ್ರದರ್ಶನ ತಂಡದ ಆತ್ಮವಿಶ್ವಾಸ ಹೆಚ್ಚಸಿತು. ಭಾರತದ ಈ ಅನುಭವಿ ವೇಗಿ ನಾಲ್ಕು ಓವರ್‌ಗಳ ಬೌಲಿಂಗ್ ದಾಳಿಯಲ್ಲಿ ಕೇವಲ 19 ರನ್‌ಗಳನ್ನು ನೀಡಿದ್ದು ಎರಡು ಪ್ರಮುಖ ವಿಕೆಟ್‌ಗಳನ್ನು ಪಡೆದರು. ಕೆಕೆಆರ್ ನಾಯಕ ನಿತೀಶ್ ರಾಣಾ ಹಾಗೂ ಸುನಿಲ್ ನರೈನ್ ಇಶಾಂತ್ ಬೌಲಿಂಗ್ ದಾಳಿಗೆ ವಿಕೆಟ್ ಕಳೆದುಕೊಂಡಿದ್ದರು.

ಇನ್ನು ಈ ಗೆಲುವಿನ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಡೆಲ್ಲಿ ಕ್ಯಾಫಿಟಲ್ಸ್ ತಂಡದ ಆವೃತ್ತಿಯ ಮೊದಲ ಗೆಲುವಿನ ಬಗ್ಗೆ ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರು ಒತ್ತಡದಲ್ಲಿರುವುದು ಸುಲಭವಲ್ಲ ಎಂದಿದ್ದು ಪ್ರತಿ ಅಭ್ಯಾಸದ ಅವಧಿಯಲ್ಲಿಯೂ ಪಟ್ಟ ಪರಿಶ್ರಮ ಫಲ ನೀಡಿದೆ ಎಂದಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಅವರು ಇಶಾಂತ್ ಶರ್ಮಾ ಅವರ ಪ್ರದರ್ಶನವನ್ನು ಉಲ್ಲೇಖಿಸಿದ್ದಯ ವಾರಗಳ ಹಿಂದೆ ಅನಾರೋಗ್ಯದಿಂದ ಬಳಲುತ್ತಿದ್ದರೂ ಕೆಕೆಆರ್ ವಿರುದ್ಧ ಅದ್ಭುತ ಪ್ರದರ್ಶನ ನಿಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
"ಈಗ ನಾವು ಲಯಕ್ಕೆ ಮರಳಿದ್ದೇವೆ. ತಂಡದ ಆಟಗಾರರಿಂದ ಬಂದ ಹೋರಾಟ ಖುಷಿ ನೀಡಿದೆ. ಒತ್ತಡದಲ್ಲಿ ಆಡುವುದು ಸುಲಭವಲ್ಲ. ಅಭ್ಯಾಸದಲ್ಲಿ ನೀಡಿರುವ ಪರಿಶ್ರಮ ಫಲ ನೀಡಿದೆ. ಇಶಾಂತ್ ಶರ್ಮಾ ಅವರು ಅನಾರೋಗ್ಯದಿಂದ ಬಂದು ಈ ರೀತಿಯ ಅದ್ಭುತ ಪ್ರದರ್ಶನ ನೀಡಿರುವುದಕ್ಕೆ ಹ್ಯಾಟ್ಸ್‌ಆಫ್" ಎಂದು ಸಾಮಾಜಿಕ ಜಾಲತಾಣದಲ್ಲಿ ವಾರ್ನರ್ ಬರೆದುಕೊಂಡಿದ್ದಾರೆ.
ಈ ಪಂದ್ಯದಲ್ಲಿ ಮೊದಲಿಗೆ ಬ್ಯಾಟಿಂಗ್ ಮಾಡಿದ್ದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ 127 ರನ್‌ಗೆ ನಿಯಂತ್ರಿಸುವಲ್ಲಿ ಯಶಸ್ವಿಯಾಗಿತ್ತು. ಹೀಗಾಗಿ ಅಲ್ಪ ಮೊತ್ತದ ಗುರಿ ಪಡೆದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಈ ಪಂದ್ಯವನ್ನು ಸುಲಭವಾಗಿ ಗೆಲ್ಲಲಿದೆ ಎಂದು ಅಭಿಮಾನಿಗಳು ನಿರೀಕ್ಷಿಸಿದ್ದರು. ಅದಕ್ಕೆ ಪೂರಕವಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸ್ಪೋಟಕ ಆರಂಭವನ್ನು ಕೂಡ ಪಡೆದುಕೊಂಡಿತ್ತು. ಆದರೆ ಈ ಪಂದ್ಯದಲ್ಲಿಯೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಡೇವಿಡ್ ವಾರ್ನರ್‌ಗೆ ಮತ್ತೊಂದು ತುದಿಯಲ್ಲಿ ಅಗತ್ಯ ನೆರವು ದೊರೆಯಲೇ ಇಲ್ಲ. ಕೊನೆಯ ಓವರ್‌ವರೆಗೂ ಸಾಗಿದ ಪಂದ್ಯದಲ್ಲಿ ಪ್ರಯಾಸಕರ ರೀತಿಯಲ್ಲಿ ಡಿಸಿ ಗೆಲುವು ಸಾಧಿಸಿತು.
ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್ (ನಾಯಕ), ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಮಿಚೆಲ್ ಮಾರ್ಷ್, ಮನೀಶ್ ಪಾಂಡೆ, ಅಕ್ಸರ್ ಪಟೇಲ್, ಅಮನ್ ಹಕೀಮ್ ಖಾನ್, ಲಲಿತ್ ಯಾದವ್, ಕುಲದೀಪ್ ಯಾದವ್, ಅನ್ರಿಚ್ ನಾರ್ಟ್ಜೆ, ಇಶಾಂತ್ ಶರ್ಮಾ, ಮುಖೇಶ್ ಕುಮಾರ್
ಬೆಂಚ್: ಪೃಥ್ವಿ ಶಾ, ಯಶ್ ಧುಲ್, ಸರ್ಫರಾಜ್ ಖಾನ್, ರಿಪಾಲ್ ಪಟೇಲ್, ಚೇತನ್ ಸಕರಿಯಾ, ಪ್ರವೀಣ್ ದುಬೆ, ರಿಲೀ ರೊಸೊವ್, ರೋವ್‌ಮನ್ ಪೊವೆಲ್, ಖಲೀಲ್ ಅಹ್ಮದ್, ಲುಂಗಿ ಎನ್‌ಗಿಡಿ, ಕಮಲೇಶ್ ನಾಗರಕೋಟಿ, ವಿಕ್ಕಿ ಓಸ್ತ್ವಾಲ್, ಮುಸ್ತಾಫಿಜುರ್ ರೆಹಮಾನ್, ಅಭಿಷೇಕ್ ಪೊರೆಲ್
ಕೊಲ್ಕತ್ತಾ ನೈಟ್ ರೈಡರ್ಸ್: ಜೇಸನ್ ರಾಯ್, ಲಿಟ್ಟನ್ ದಾಸ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ (ನಾಯಕ), ಮನ್ದೀಪ್ ಸಿಂಗ್, ಆಂಡ್ರೆ ರಸೆಲ್, ರಿಂಕು ಸಿಂಗ್, ಸುನಿಲ್ ನರೈನ್, ಕುಲ್ವಂತ್ ಖೇಜ್ರೋಲಿಯಾ, ಉಮೇಶ್ ಯಾದವ್, ವರುಣ್ ಚಕ್ರವರ್ತಿ
ಬೆಂಚ್: ಸುಯಶ್ ಶರ್ಮಾ, ಅನುಕೂಲ್ ರಾಯ್, ವೈಭವ್ ಅರೋರಾ, ಎನ್ ಜಗದೀಸನ್, ಡೇವಿಡ್ ವೈಸ್, ರಹಮಾನುಲ್ಲಾ ಗುರ್ಬಾಜ್, ಶಾರ್ದೂಲ್ ಠಾಕೂರ್, ಲಾಕಿ ಫರ್ಗುಸನ್, ಟಿಮ್ ಸೌಥಿ, ಹರ್ಷಿತ್ ರಾಣಾ, ಆರ್ಯ ದೇಸಾಯಿ