For Quick Alerts
ALLOW NOTIFICATIONS  
For Daily Alerts
 

IPL2023: ಕೊಹ್ಲಿ, ರೋಹಿತ್ ಅಲ್ಲ ಅತಿಕಡಿಮೆ ಎಸೆತಗಳಲ್ಲಿ 6000 ರನ್ ಬಾರಿಸಿ ನಂ.1 ಸ್ಥಾನದಲ್ಲಿರುವ ಆಟಗಾರ ಈತ!

IPL 2023: David Warner still holds the record of fastest 6000 IPL runs; Virat Kohli at 2nd place

ನಿನ್ನೆ ( ಏಪ್ರಿಲ್ 18 ) ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 25ನೇ ಪಂದ್ಯ ಜರುಗಿತು. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದವು.

ಪಂದ್ಯದಲ್ಲಿ ಟಾಸ್ ಗೆದ್ದಿದ್ದ ಸನ್ ರೈಸರ್ಸ್ ಹೈದರಾಬಾದ್ ಬೌಲಿಂಗ್ ಆಯ್ದುಕೊಂಡು ಫೀಲ್ಡಿಂಗ್ ಆಯ್ದುಕೊಂಡು ಎದುರಾಳಿ ಮುಂಬೈ ಇಂಡಿಯನ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 192 ರನ್ ಕಲೆಹಾಕಿ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಗೆಲ್ಲಲು 193 ರನ್‌ಗಳ ದೊಡ್ಡ ಗುರಿಯನ್ನೇ ನೀಡಿತ್ತು.

ಇನ್ನು ಸನ್ ರೈಸರ್ಸ್ ಹೈದರಾಬಾದ್ ತಂಡ 19.5 ಓವರ್‌ಗಳಲ್ಲಿ 178 ರನ್‌ಗಳಿಗೆ ಆಲ್ಔಟ್ ಆಗಿ ಮುಂಬೈ ಇಂಡಿಯನ್ಸ್ ನೀಡಿದ್ದ ಗುರಿಯನ್ನು ಬೆನ್ನತ್ತುವಲ್ಲಿ ವಿಫಲಗೊಂಡಿತ್ತು. ಈ ಮೂಲಕ ಮುಂಬೈ ಇಂಡಿಯನ್ಸ್ 14 ರನ್‌ಗಳ ಭರ್ಜರಿ ಜಯವನ್ನು ಸಾಧಿಸಿ ಟೂರ್ನಿಯಲ್ಲಿ ಹ್ಯಾಟ್ರಿಕ್ ಗೆಲುವನ್ನು ದಾಖಲಿಸಿತು ಹಾಗೂ ಅಂಕಪಟ್ಟಿಯಲ್ಲಿ ಆರನೇ ಸ್ಥಾನಕ್ಕೆ ಏರಿಕೆ ಕಂಡಿತು. ಹೀಗೆ ಮುಂಬೈ ಇಂಡಿಯನ್ಸ್ ತಂಡ ಈ ಪಂದ್ಯದ ಗೆಲುವಿನ ಮೂಲಕ ಅಂಕಪಟ್ಟಿಯಲ್ಲಿ ಏರಿಕೆ ಕಂಡು ಹ್ಯಾಟ್ರಿಕ್ ಗೆಲುವಿನ ಸಾಧನೆ ಮಾಡಿದರೆ, ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಹಾಗೂ ವಿಕೆಟ್ ಕೀಪರ್ ಇಶಾನ್ ಕಿಶನ್ ಕೆಲ ವೈಯಕ್ತಿಕ ದಾಖಲೆಯನ್ನು ಬರೆದರು.

ಹೌದು, ಇಶಾನ್ ಕಿಶನ್ ಟಿ 20 ಕ್ರಿಕೆಟ್ ಮಾದರಿಯಲ್ಲಿ 4000 ರನ್ ಪೂರೈಸಿದ ಮೈಲಿಗಲ್ಲನ್ನು ಮುಟ್ಟಿದರೆ, ರೋಹಿತ್ ಶರ್ಮಾ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ 6000 ರನ್ ಪೂರೈಸಿದ ಮೈಲಿಗಲ್ಲನ್ನು ಮುಟ್ಟಿದರು. ಈ ಪಂದ್ಯಕ್ಕೂ ಮುನ್ನ 5986 ರನ್ ಗಳಿಸಿದ್ದ ರೋಹಿತ್ ಶರ್ಮಾ ಈ ಮೈಲಿಗಲ್ಲನ್ನು ಮುಟ್ಟಲು 14 ರನ್ ಬಾರಿಸಬೇಕಾದ ಅಗತ್ಯವಿತ್ತು. 18 ಎಸೆತಗಳಲ್ಲಿ 28 ರನ್ ಗಳಿಸಿದ ರೋಹಿತ್ ಶರ್ಮಾ ಈ ಮೈಲಿಗಲ್ಲನ್ನು ಮುಟ್ಟಿ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ 6000 ರನ್ ಪೂರೈಸಿದ ನಾಲ್ಕನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಹೌದು, ವಿರಾಟ್ ಕೊಹ್ಲಿ, ಶಿಖರ್ ಧವನ್ ಹಾಗೂ ಡೇವಿಡ್ ವಾರ್ನರ್ ಬಳಿಕ 6000 ಐಪಿಎಲ್ ರನ್‌ಗಳನ್ನು ಪೂರೈಸಿದ ಆಟಗಾರ ಎಂಬ ಖ್ಯಾತಿಗೆ ರೋಹಿತ್ ಶರ್ಮಾ ಒಳಗಾಗಿದ್ದಾರೆ. ಹೀಗೆ 6000 ರನ್ ಪೂರೈಸಿದ ಈ ನಾಲ್ವರು ದಾಂಡಿಗರ ಪೈಕಿ ಯಾವ ಬ್ಯಾಟ್ಸ್‌ಮನ್ ಅತಿಕಡಿಮೆ ಎಸೆತಗಳಲ್ಲಿ ಈ ಮೈಲಿಗಲ್ಲನ್ನು ಮುಟ್ಟಿದ್ದಾರೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ..

1. ಡೇವಿಡ್‌ ವಾರ್ನರ್ ಕೇವಲ 4285 ಎಸೆತಗಳಲ್ಲಿ 6000 ರನ್‌ಗಳ ಮೈಲಿಗಲ್ಲನ್ನು ಮುಟ್ಟುವುದರ ಮೂಲಕ ವೇಗವಾಗಿ 6000 ಐಪಿಎಲ್ ರನ್ ಪೂರೈಸಿದ ಆಟಗಾರ ಎನಿಸಿಕೊಂಡಿದ್ದಾರೆ.
2. ವಿರಾಟ್ ಕೊಹ್ಲಿ 4595 ಎಸೆತಗಳಲ್ಲಿ 6000 ರನ್‌ಗಳನ್ನು ಬಾರಿಸುವುದರ ಮೂಲಕ ವೇಗವಾಗಿ 6000 ಐಪಿಎಲ್ ರನ್ ಪೂರೈಸಿದ ಆಟಗಾರರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.
3. ರೋಹಿತ್ ಶರ್ಮಾ 4616 ಎಸೆತಗಳಲ್ಲಿ 6000 ರನ್‌ಗಳನ್ನು ಬಾರಿಸುವುದರ ಮೂಲಕ ವೇಗವಾಗಿ 6000 ಐಪಿಎಲ್ ರನ್ ಪೂರೈಸಿದ ಆಟಗಾರರ ಪಟ್ಟಿಯಲ್ಲಿ ತೃತೀಯ ಸ್ಥಾನದಲ್ಲಿದ್ದಾರೆ.
4. ಶಿಖರ್ ಧವನ್ 4738 ಎಸೆತಗಳಲ್ಲಿ 6000 ರನ್‌ಗಳನ್ನು ಬಾರಿಸುವುದರ ಮೂಲಕ ವೇಗವಾಗಿ 6000 ಐಪಿಎಲ್ ರನ್ ಪೂರೈಸಿದ ಆಟಗಾರರ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

Story first published: Wednesday, April 19, 2023, 7:39 [IST]
Other articles published on Apr 19, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+