IPL 2023: ಡೆಲ್ಲಿ ಕ್ಯಾಪಿಟಲ್ಸ್‌ಗೆ ಗೆಲ್ಲಲು 224 ರನ್‌ಗಳ ಗುರಿ ನೀಡಿದ ಚೆನ್ನೈ ಸೂಪರ್ ಕಿಂಗ್ಸ್
ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಿನ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಸಿಎಸ್‌ಗೆ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಸಿಎಸ್‌ಕೆ ಆರಂಭಿಕ ಆಟಗಾರರ ಅಬ್ಬರದ ಕಾರಣದಿಂದಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಈ ಪಂದ್ಯದಲ್ಲಿ ಗೆಲ್ಲಲು 224 ರನ್‌ಗಳ ಭಾರೋ ದೊಡ್ಡ ಮೊತ್ತದ ಗುರಿಯನ್ನು ಪಡೆದುಕೊಂಡಿದೆ.
ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆರಂಭಿಕ ಆಟಗಾರರಾದ ಋತುರಾಜ್ ಗಾಯಕ್ವಾಡ್ ಹಾಗೂ ಡೆವೋನ್ ಕಾನ್ವೆ ಆರಂಭದಿಂದಲೇ ಆಕ್ರಮಣಕಾರಿ ಆಟಕ್ಕೆ ಮುಂದಾಗಿದ್ದರು. ಈ ಜೋಡಿಯನ್ನು ಕಟ್ಟಿಹಾಕಲು ಡೆಲ್ಲಿ ಕ್ಯಾಪಿಟಲ್ಸ್‌ಗೆ ಸಾಧ್ಯವಾಗಲೇ ಇಲ್ಲ. ಮೊದಲ ವಿಕೆಟ್‌ಗೆ ಈ ಜೋಡಿ ಬರೊಬ್ಬರಿ 141 ರನ್‌ಗಳನ್ನು ಕಲೆಹಾಕುವಲ್ಲಿ ಯಶಸ್ವಿಯಾದರು. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಅಮೋಘ ಆರಂಭ ನೀಡಿದರು.

ಚೆನ್ನೈ ಸೂಪರ್ ಕಿಂಗ್ಸ್ ತಂಡ 14.3 ಓವರ್‌ಗಳಲ್ಲಿ 141 ರನ್‌ಗಳಿಸಿದ್ದಾಗ ಋತು 50 ಎಸೆತಗಳಲ್ಲಿ 79 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ಈ ಇನ್ನಿಂಗ್ಸ್‌ನಲ್ಲಿ 3 ಬೌಂಡರಿ ಹಾಗೂ 7 ಸಿಕ್ಸರ್ ಸೇರಿತ್ತು. ನಂತರ ಬ್ಯಾಟಿಂಗ್‌ಗೆ ಇಳಿದ ಶಿವಂ ದುಬೆ ಕೇವಲ 9 ಎಸೆತಗಳಲ್ಲಿ 22 ರನ್‌ಗಳಿಸಿ ಸ್ಪೋಟಕ ಪ್ರದರ್ಶನದ ನಂತರ ನಿರ್ಗಮಿಸಿದರು. ನಾಯಕ ಎಂಎಸ್ ಧೋನಿ 4 ಎಸೆತಗಳಲ್ಲಿ 5 ರನ್‌ಗಳಿಸಿ ಅಜೇಯವಾಗುಳಿದರೆ ರವೀಂದ್ರ ಜಡೇಜಾ ಕೇವಲ 7 ಎಸೆತಗಳಲ್ಲಿ 20 ರನ್ ಬಾರಿಸಿ ಅಬ್ಬರಿಸಿದರು. ಈ ಕಾರಣದಿಂದಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 223 ರನ್‌ಗಳನ್ನು ಕಲೆಹಾಕಿದೆ.
ಇನ್ನು ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಯಾವುದೇ ಬದಲಾವಣೆಯಿಲ್ಲೆದ ಕಣಕ್ಕಿಳಿದಿದೆ. ಆದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆಡುವ ಬಳಗದಲ್ಲಿ ಬದಲಾವಣೆ ಮಾಡಿಕೊಂಡಿದ್ದು ಇಶಾಂತ್ ಶರ್ಮಾ ಬದಲಿಗೆ ಲಲಿತ್ ಯಾದವ್ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ ಪ್ಲೇಯಿಂಗ್ XI: ಡೇವಿಡ್ ವಾರ್ನರ್ (ನಾಯಕ), ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ರಿಲೀ ರೋಸೊವ್, ಯಶ್ ಧುಲ್, ಅಮನ್ ಹಕೀಮ್ ಖಾನ್, ಅಕ್ಷರ್ ಪಟೇಲ್, ಲಲಿತ್ ಯಾದವ್, ಕುಲದೀಪ್ ಯಾದವ್, ಚೇತನ್ ಸಕರಿಯಾ, ಖಲೀಲ್ ಅಹ್ಮದ್, ಅನ್ರಿಚ್ ನಾರ್ಟ್ಜೆ
ಇಂಪ್ಯಾಕ್ಟ್ ಸಬ್‌ಸ್ಟಿಟ್ಯೂಟ್‌ಗಳು: ಮುಖೇಶ್ ಕುಮಾರ್, ಪೃಥ್ವಿ ಶಾ, ಪ್ರವೀಣ್ ದುಬೆ, ರಿಪಾಲ್ ಪಟೇಲ್ ಮತ್ತು ಅಭಿಷೇಕ್ ಪೊರೆಲ್
ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಅಂಬಾಟಿ ರಾಯುಡು, ಶಿವಂ ದುಬೆ, ಮೊಯಿನ್ ಅಲಿ, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ & ವಿಕೆಟ್ ಕೀಪರ್), ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ
ಇಂಪ್ಯಾಕ್ಟ್ ಸಬ್‌ಸ್ಟಿಟ್ಯೂಟ್‌ಗಳು: ಮಥೀಶ ಪತಿರಾನ, ಮಿಚೆಲ್ ಸ್ಯಾಂಟ್ನರ್, ಸುಬ್ರಾಂಶು ಸೇನಾಪತಿ, ಶೇಕ್ ರಶೀದ್ ಮತ್ತು ಆಕಾಶ್ ಸಿಂಗ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications