For Quick Alerts
ALLOW NOTIFICATIONS  
For Daily Alerts
 

DC vs LSG Highlights: ಮಾರ್ಕ್ ಮಾರಕ ದಾಳಿಗೆ ಡೆಲ್ಲಿ ಧ್ವಂಸ: ರಾಹುಲ್ ಪಡೆಗೆ 50 ರನ್‌ಗಳ ಗೆಲುವು

ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ನಡುವಿನ ಪಂದ್ಯ ಮುಕ್ತಾಯವಾಗಿದ್ದು ಕೆಎಲ್ ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ ಅಮೋಘ ಗೆಲುವು ಸಾಧಿಸಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡು ವಿಭಾಗದಲ್ಲಿಯೂ ಅಬ್ಬರಿಸಿದ ಲಕ್ನೋ ಸೂಪರ್ ಜೈಂಟ್ಸ್ ತಂಡ 50 ರನ್‌ಗಳ ಬೃಹತ್ ಅಂತರದಿಂದ ಗೆದ್ದು ಬೀಗಿದೆ. ಈ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡುವಲ್ಲಿ ಯಶಸ್ವಿಯಾಗಿದೆ.

ಮೊದಲಿಗೆ ಬ್ಯಾಟಿಂಗ್‌ನಲ್ಲಿ ಎಲ್‌ಎಸ್‌ಜಿ ತಂಡಕ್ಕೆ ಕೇಲ್ ಮೇಯರ್ಸ್ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿ ಅಬ್ಬರಿಸಿದ್ದು ತಂಡದ ಬೃಹತ್ ಮೊತ್ತಕ್ಕೆ ಕಾರಣವಾದರು. ಬಳಿಕ ಬೌಲಿಂಗ್‌ನಲ್ಲಿ ವೇಗಿ ಮಾರ್ಕ್‌ ವುಡ್ ಮಾರಕ ದಾಳಿ ನಡೆಸಿದ್ದು ಡೆಲ್ಲಿ ಕ್ಯಾಪಿಟಲ್ಸ್ ಪಡೆಗೆ ತಿರುಗೇಟು ನೀಡಲು ಸಾಧ್ಯವಾಗದಂತಾ ಆಘಾತ ನೀಡಿದರು. ಮಾರ್ಕ್ ವುಡ್ ಈ ಪಂದ್ಯದಲ್ಲಿ ಐದು ವಿಕೆಟ್‌ಗಳ ಗೊಂಚಲು ಪಡೆದು ಅಬ್ಬರಿಸಿದ್ದಾರೆ.

IPL 2023, DC vs LSG Highlights: Lucknow Super Giants Beat Delhi Capitals by 50 runs

ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದ ಲಕ್ನೋ ಸೂಪರ್ ಜೈಂಟ್ಸ್ ತಂಡ ಆರಂಭದಲ್ಲಿ ಹಿನ್ನಡೆ ಅನುಭವಿಸಿತು. ಏಕಾನ ಕ್ರೀಡಾಂಗಣದಲ್ಲಿ ರನ್‌ಗಳಿಸಲು ಲಕ್ನೋ ಸೂಪರ್ ಜೈಂಟ್ಸ್ ತಂಡ ಆರಂಭದಲ್ಲಿ ಪರದಾಡಿತು. ನಂತರ ನಾಯಕ ಕೆಎಲ್ ರಾಹುಲ್ ಅಗ್ಗಕ್ಕೆ ತಮ್ಮ ವಿಕೆಟ್ ಕಳೆದುಕೊಂಡರು. ಆದರೆ ಬಳಿಕ ಆರಂಭವಾಗಿದದ ಕೇಲ್ ಮೇಯರ್ಸ್ ಅಬ್ಬರ.

ಆರಂಭಿಕ ಆಟಗಾರ ಕೇಲ್ ಮೇಯರ್ಸ್ ಡೆಲ್ಲಿ ಕ್ಯಾಪಿಟಲ್ಸ್ ಬೌಲರ್‌ಗಳನ್ನು ಹಿಗ್ಗಾಮುಗ್ಗ ದಂಡಿಸಲು ಆರಂಭಿಸಿದರು. ಎರಡನೇ ವಿಕೆಟ್‌ಗೆ ದೀಪಕ್ ಹೂಡಾ ಅವರೊಂದಿಗೆ ಭರ್ಜರಿ 79 ರನ್‌ಗಳ ಜೊತೆಯಾಟವನ್ನು ನೀಡಿದರು. ಕುತೂಹಲಕಾರಿ ಅಂಶವೆಂದರೆ ಈ ಜೊತೆಯಾಟದಲ್ಲಿ ಹೂಡಾ ಪಾಲು ಕೇವಲ 17 ರನ್. ಹೂಡಾ ಔಟಾದ ತಕ್ಷಣವೇ ಕೇಲ್ ಮೇಯರ್ಸ್ ಕೂಡ ತಮ್ಮ ವಿಕೆಟ್ ಕಳೆದುಕೊಂಡರು. ಈ ಮೂಲಕ ಸ್ಪೋಟಕ ಇನ್ನಿಂಗ್ಸ್ ಅಂತ್ಯವಾಯಿತು. 38 ಎಸೆತಗಳಲ್ಲಿ 73 ರನ್ ಬಾರಿಸಿ ಅಬ್ಬರಿಸಿದರು ಕೇಲ್ ಮೇಯರ್ಸ್. ಇದರಲ್ಲಿ 7 ಭರ್ಜರಿ ಸಿಕ್ಸರ್ ಹಾಗೂ 2 ಬೌಂಡರಿಗಳು ಇದ್ದವು.

ಇನ್ನು ಅಂತಿಮ ಹಂತದಲ್ಲಿ ಪೂರನ್ ಕೂಡ ಅದ್ಭುತ ಪ್ರದರ್ಶನ ನೀಡಿದ್ದು 36 ರನ್‌ಗಳ ಕೊಡುಗೆ ನೀಡಿದರು. ಯುವ ಆಟಗಾರ ಆಯುಷ್ ಬದೋನಿ ಕೂಡ ಸ್ಪೋಟಕ ಆಟವಾಡುವ ಮೂಲಕ ತಂಡದ ಮೊತ್ತವನ್ನು 193ಕ್ಕೆ ತಂದು ನಿಲ್ಲಿಸಿದರು. ಆಯುಷ್ ಬದೋನಿ 7 ಎಸೆತಗಳಲ್ಲಿ 18 ರನ್‌ಗಳಿಸಿದರು.

ಈ ಮೊತ್ತವನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಉತ್ತಮ ಆರಂಭ ದೊರೆಯಿತು. ಮೊದಲ ವಿಕೆಟ್‌ಗೆ 41 ರನ್‌ಗಳ ಜೊತೆಯಾಟ ಬಂದಿತು. ಆದರೆ ಈ ಸಂದರ್ಭದಲ್ಲಿ ದಾಳಿಗಿಳಿದ ಮಾರ್ಕ್‌ ವುಡ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅಗ್ರ ಕ್ರಮಾಂಕವನ್ನು ಧ್ವಂಸಗೊಳಿಸಿದರು. ಪೃಥ್ವಿ ಶಾ ಹಾಗೂ ಮಿಚೆಲ್ ಮಾರ್ಶ್ ಅವರನ್ನು ಸತತ ಎರಡು ಎಸೆತಗಳಲ್ಲಿ ಬೌಲ್ಡ್ ಮಾಡಿದ ಮಾರ್ಕ್ ವುಡ್ ಬಳಿಕ ಸರ್ಫರಾಜ್ ಖಾನ್ ವಿಕೆಟ್ ಕೂಡ ಪಡೆದರು.

ಇನ್ನು ಡೆಲ್ಲಿ ಕ್ಯಾಪಿಟಲ್ಸ್ ಪರವಾಗಿ ನಾಯಕ ಡೇವಿಡ್ ವಾರ್ನರ್ ಭರ್ಜರಿ ಅರ್ಧ ಶತಕ ಸಿಡಿಸಿ ಮಿಂಚಿದರೆ ರಿಲೀ ರೊಸೋ 30 ರನ್‌ಗಳ ಕೊಡುಗೆ ನೀಡಿದರು. ಉಳಿದಂತೆ ಎಲ್ಲಾ ದಾಂಡಿಗರು ಕೂಡ ವಿಫಲವಾಗಿದ್ದು ಡಿಸಿ ಸೋಲಿಗೆ ಕಾರಣವಾಯಿತು. ಇನ್ನು ಈ ಪಂದ್ಯದಲ್ಲಿ ಮಾರ್ಕ್‌ವುಡ್ ಭರ್ಜರಿ 5 ವಿಕೆಟ್ ಪಡೆದು ಮಿಂಚಿದರು. 4 ಓವರ್‌ಗಳಲ್ಲಿ ಕೇವಲ 14 ರನ್ ನೀಡಿದ ಅವರು 5 ಚಿಕೆಟ್‌ಗಳ ಗೊಂಚಲು ಪಡೆದಿದ್ದಾರೆ

ಲಕ್ನೋ ಸೂಪರ್ ಜೈಂಟ್ಸ್ ಆಡುವ ಬಳಗ: ಕೆಎಲ್ ರಾಹುಲ್ (ನಾಯಕ), ಕೈಲ್ ಮೇಯರ್ಸ್, ಮಾರ್ಕಸ್ ಸ್ಟೊಯಿನಿಸ್, ದೀಪಕ್ ಹೂಡಾ, ಕೃನಾಲ್ ಪಾಂಡ್ಯ, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಆಯುಷ್ ಬಡೋನಿ, ಮಾರ್ಕ್ ವುಡ್, ಜಯದೇವ್ ಉನದ್ಕತ್, ರವಿ ಬಿಷ್ಣೋಯ್, ಅವೇಶ್ ಖಾನ್

ಬೆಂಚ್: ಪ್ರೇರಕ್ ಮಂಕಡ್, ಕೃಷ್ಣಪ್ಪ ಗೌತಮ್, ಸ್ವಪ್ನಿಲ್ ಸಿಂಗ್, ನವೀನ್-ಉಲ್-ಹಕ್, ಯಶ್ ಠಾಕೂರ್, ಡೇನಿಯಲ್ ಸಾಮ್ಸ್, ರೊಮಾರಿಯೋ ಶೆಫರ್ಡ್, ಯುದ್ವೀರ್ ಸಿಂಗ್ ಚರಕ್, ಕರಣ್ ಶರ್ಮಾ, ಮಯಾಂಕ್ ಯಾದವ್, ಅಮಿತ್ ಮಿಶ್ರಾ, ಮನನ್ ವೋಹ್ರಾ

ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಡೇವಿಡ್ ವಾರ್ನರ್ (ನಾಯಕ), ಪೃಥ್ವಿ ಶಾ, ಮಿಚೆಲ್ ಮಾರ್ಷ್, ರಿಲೀ ರೊಸೊವ್, ಸರ್ಫರಾಜ್ ಖಾನ್ (ವಿಕೆಟ್ ಕೀಪರ್), ರೋವ್ಮನ್ ಪೊವೆಲ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಚೇತನ್ ಸಕರಿಯಾ, ಖಲೀಲ್ ಅಹ್ಮದ್, ಮುಖೇಶ್ ಕುಮಾರ್
ಬೆಂಚ್: ಫಿಲಿಪ್ ಸಾಲ್ಟ್, ಅಮನ್ ಹಕೀಮ್ ಖಾನ್, ಇಶಾಂತ್ ಶರ್ಮಾ, ಮನೀಶ್ ಪಾಂಡೆ, ಪ್ರವೀಣ್ ದುಬೆ, ಕಮಲೇಶ್ ನಾಗರಕೋಟಿ, ಲಲಿತ್ ಯಾದವ್, ರಿಪಾಲ್ ಪಟೇಲ್, ಯಶ್ ಧುಲ್, ವಿಕ್ಕಿ ಓಸ್ತ್ವಾಲ್, ಅಭಿಷೇಕ್ ಪೊರೆಲ್

Story first published: Saturday, April 1, 2023, 23:49 [IST]
Other articles published on Apr 1, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+