Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023: ಡೆಲ್ಲಿ ಕ್ಯಾಪಿಟಲ್ಸ್ ಗೆಲುವಿಗೆ 198 ರನ್‌ಗಳ ಬೃಹತ್ ಗುರಿ ನೀಡಿದ ಸನ್‌ರೈಸರ್ಸ್ ಹೈದರಾಬಾದ್

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಅದರ ತವರಿನಲ್ಲೇ ನಡೆಯುತ್ತಿರುವ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದೆ. ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ನಡೆಸಿದ ಸನ್‌ರೈಸರ್ಸ್ ಹೈದರಾಬಾದ್ ತಂಡ 197 ರನ್‌ಗಳನ್ನು ಗಳಿಸಿದ್ದು ಬೃಹತ್ ಗುರಿ ಮುಂದಿಟ್ಟಿದೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಬ್ಯಾಟಿಂಗ್‌ನಲ್ಲಿ ದೊಡ್ಡ ಸವಾಲು ಸ್ವೀಕರಿಸಿದೆ.

ಈ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಪರವಾಗಿ ಅದ್ಭುತ ಪ್ರದರ್ಶನ ನೀಡಿ ಮಿಂಚಿದ್ದು ಆರಂಭಿಕನಾಗಿ ಕಣಕ್ಕಿಳಿದ ಅಭೀಶೇಕ್ ಶರ್ಮಾ, ಹಾಗೂ ಕೆಳ ಕ್ರಮಾಂಕದ ಆಟಗಾರ ಹೆನ್ರಿ ಕ್ಲಾಸೆನ್. ಅವರಿಗೆ ಅಬ್ದುಲ್ ಸಮದ್ ಹಾಗೂ ಅಕೀಲ್ ಹುಸೇನ್ ಕೊನೆಯ ಹಂತದಲ್ಲಿ ಉತ್ತಮವಾಗಿ ಸಾಥ್ ನೀಡಿದರು. ಅಭೀಶೇಕ್ ಶರ್ಮಾ ಒಂದೆಡೆವಿಕೆಟ್‌ಗಳು ಕಳೆದುಕೊಳ್ಳುತ್ತೊದ್ದರೂ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿ ಗಮನಸೆಳೆದಿದ್ದಾರೆ.

IPL 2023; DC vs SRH: Delhi Capitals need 198 runs to win against SRH

36 ಎಸೆತಗಳನ್ನು ಎದುರಿಸಿದ ಅಭೀಶೇಕ್, 12 ಬೌಂಡರಿ ಹಾಗೂ 1 ಭರ್ಜರಿ ಸಿಕ್ಸರ್ ಸಿಡಿಸಿದ್ದು 67 ರನ್‌ಗಳ ಕೊಡುಗೆ ನೀಡಿದರು. 186.11ರ ಸ್ಟ್ರೈಕ್‌ರೇಟ್‌ನಲ್ಲಿ ಅವರು ಬ್ಯಾಟ್ ಬೀಸಿದ್ದು ತಂಡದ ದೊಡ್ಡ ಮೊತ್ತ ಕಲೆಹಾಕಲು ಕಾರಣವಾಯಿತು. ಮಯಾಂಕ್ ಅಗರ್ವಾಲ್, ರಾಹುಲ್ ತ್ರಿಪಾಠಿ, ನಾಯಕ ಐಡೆನ್ ಮಾರ್ಕ್ರಮ್ ಹಾಗೂ ಹ್ಯಾರಿ ಬ್ರೂಕ್ ಈ ಪಂದ್ಯದಲ್ಲಿ ವಿಫಲವಾದರು. ತಂಡಕ್ಕೆ ಮತ್ತೊಮ್ಮೆ ಆಸರೆಯಾದ ಕ್ಲಾಸೆನ್ 27 ಎಸೆತಗಳಲ್ಲಿ 53 ರನ್ ಬಾರಿಸಿ ಮಿಂಚಿದ್ದಾರೆ. ಹೀಗಾಗಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಈ ಪಂದ್ಯದಲ್ಲಿ 6 ವಿಕೆಟ್ ಕಳೆದುಕೊಂಡು 197 ರನ್‌ಗಳಿಸಲು ಶಕ್ತವಾಯಿತು.

ಇನ್ನು ಡೆಲ್ಲಿ ಕ್ಯಾಪಿಟಲ್ಸ್ ಪರವಾಗಿ ಬೌಲಿಂಗ್‌ನಲ್ಲಿ ಮಿಂಚಿದ್ದು ಆಲ್‌ರೌಂಡರ್ ಮಿಚೆಲ್ ಮಾರ್ಶ್. ನಾಲ್ಕು ಓವರ್‌ಗಳ ತಮ್ಮ ಬೌಲಿಂಗ್ ದಾಳಿಯಲ್ಲಿ ಮಾರ್ಶ್ 4 ವಿಕೆಟ್ ಕಿತ್ತು ಮಿಂಚಿದರು. ಉಳಿದಂತೆ ಇಶಾಂತ್ ಶರ್ಮಾ ಹಾಗೂ ಅಕ್ಷರ್ ಪಟೇಲ್ ತಲಾ ಒಂದು ವಿಕೆಟ್ ಪಡೆದರು.

ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಡೇವಿಡ್ ವಾರ್ನರ್ (ನಾಯಕ), ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಮಿಚೆಲ್ ಮಾರ್ಷ್, ಮನೀಶ್ ಪಾಂಡೆ, ಪ್ರಿಯಮ್ ಗಾರ್ಗ್, ಅಕ್ಸರ್ ಪಟೇಲ್, ರಿಪಾಲ್ ಪಟೇಲ್, ಕುಲದೀಪ್ ಯಾದವ್, ಅನ್ರಿಚ್ ನಾರ್ಟ್ಜೆ, ಇಶಾಂತ್ ಶರ್ಮಾ, ಮುಖೇಶ್ ಕುಮಾರ್
ಬೆಂಚ್: ಸರ್ಫರಾಜ್ ಖಾನ್, ಲಲಿತ್ ಯಾದವ್, ಅಭಿಷೇಕ್ ಪೊರೆಲ್, ಖಲೀಲ್ ಅಹ್ಮದ್, ಪ್ರವೀಣ್ ದುಬೆ, ಅಮನ್ ಹಕೀಮ್ ಖಾನ್, ಲುಂಗಿ ಎನ್‌ಗಿಡಿ, ಮುಸ್ತಾಫಿಜುರ್ ರೆಹಮಾನ್, ರೋವ್‌ಮನ್ ಪೊವೆಲ್, ಪೃಥ್ವಿ ಶಾ, ಚೇತನ್ ಸಕರಿಯಾ, ಯಶ್ ಧುಲ್, ವಿಕಿ ಓಸ್ಟ್ವಾಲ್, ರಿಲೀ ರೋಸೌವ್

ಸನ್‌ರೈಸರ್ಸ್ ಹೈದರಾಬಾದ್ ಆಡುವ ಬಳಗ: ಮಯಾಂಕ್ ಅಗರ್ವಾಲ್, ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಏಡೆನ್ ಮರ್ಕ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಹ್ಯಾರಿ ಬ್ರೂಕ್, ಅಬ್ದುಲ್ ಸಮದ್, ಮಯಾಂಕ್ ಮಾರ್ಕಂಡೆ, ಭುವನೇಶ್ವರ್ ಕುಮಾರ್, ಅಕೇಲ್ ಹೊಸೈನ್, ಉಮ್ರಾನ್ ಮಲಿಕ್
ಬೆಂಚ್: ಮಾರ್ಕೊ ಜಾನ್ಸೆನ್, ವಿವ್ರಾಂತ್ ಶರ್ಮಾ, ಗ್ಲೆನ್ ಫಿಲಿಪ್ಸ್, ಮಯಾಂಕ್ ಡಾಗರ್, ಟಿ ನಟರಾಜನ್, ಆದಿಲ್ ರಶೀದ್, ಸಮರ್ಥ ವ್ಯಾಸ್, ಅನ್ಮೋಲ್ಪ್ರೀತ್ ಸಿಂಗ್, ಉಪೇಂದ್ರ ಯಾದವ್, ಕಾರ್ತಿಕ್ ತ್ಯಾಗಿ, ಸನ್ವಿರ್ ಸಿಂಗ್, ಫಜಲ್ಹಕ್ ಫಾರೂಕಿ, ನಿತೀಶ್ ರೆಡ್ಡಿ

Story first published: Saturday, April 29, 2023, 21:35 [IST]
Other articles published on Apr 29, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+